Wednesday, 19th September 2018  

Vijayavani

ಆಸ್ಪತ್ರೆಯಿಂದ ಸಚಿವ ಡಿ.ಕೆ. ಶಿವಕುಮಾರ್​​ ಡಿಸ್ಚಾರ್ಜ್ - ಕೆಲವೇ ಕ್ಷಣಗಳಲ್ಲಿ ಸುದ್ದಿಗೋಷ್ಠಿ - ಎಟಿಎಂ ಆರೋಪಕ್ಕೆ ಉತ್ತರಿಸ್ತಾರಾ?        ಗಾಂಧಿ ಕುಟುಂಬಕ್ಕೆ ಎಟಿಎಂ ಅಂತೆ ಡಿಕೆಶಿ - ಎಐಸಿಸಿಗೆ 600 ಕೋಟಿ ಆಗಿದ್ಯಂತೆ ಡೆಪಾಸಿಟ್ - ಡಿಕೆಶಿ ವಿರುದ್ಧ ಆರೋಪಗಳ ಪಟ್ಟಿ        ಇಡಿ ಪ್ರಕರಣದಲ್ಲಿ ಡಿಕೆಶಿ ಬಂಧನ ಖಚಿತ - ಅರೆಸ್ಟ್‌ ಬೆನ್ನಲ್ಲೇ ಮೈತ್ರಿ ಸರ್ಕಾರ ಖತಂ - ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಭವಿಷ್ಯ        ಬೆಂಗ್ಳೂರು ರಸ್ತೆ ಗುಂಡಿಗೆ ಹೈಕೋರ್ಟ್ ಗರಂ - ಬೆಳಗ್ಗೆಯೊಳಗೆ ಗುಂಡಿ ಮುಚ್ಚಿಸಿ - ಕೆಲ್ಸ ಮಾಡದಿದ್ರೆ ಬಿಬಿಎಂಪಿ ಬಂದ್ ಅಂದ್ರು ಸಿಜೆ        ನವಾಜ್​​ ಷರೀಫ್​ಗೆ ರಿಲೀಫ್ - ಜೈಲಿನಿಂದ ಪಾಕ್ ಮಾಜಿ ಪ್ರಧಾನಿ, ಪುತ್ರಿ ಬಿಡುಗಡೆ - ಇಸ್ಲಾಮಾಬಾದ್ ಹೈಕೋರ್ಟ್ ಆದೇಶ        ದುಬೈನಲ್ಲಿ ಏಷ್ಯಾಕಪ್ ಹಣಾಹಣಿ - ಹೈವೋಲ್ಟೇಜ್ ಮ್ಯಾಚ್​ಗೆ ಬದ್ಧ ವೈರಿಗಳು ಸಜ್ಜು - ಟಾಗ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ       
Breaking News

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Tuesday, 10.07.2018, 10:41 PM       No Comments

ಗದಗ: ಸಮುದಾಯದ ಜೀವನಾಡಿಯಾಗಿರುವ ಅಂಗನವಾಡಿಗಳನ್ನು ರಕ್ಷಿಸುವುದು, ಅಂಗನವಾಡಿ ನೌಕರರಿಗೆ ಮುಂಬಡ್ತಿ ಹಾಗೂ ಗೌರವ ಧನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಂಗನವಾಡಿ ಕಾರ್ಯಕರ್ತೆಯರು ಸಿಐಟಿಯು ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.  ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ವಿುಸಿ, ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದ ಅಂಗನವಾಡಿ ನೌಕರರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೊಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.  ಅಂಗನವಾಡಿ ನೌಕರರು ಚುನಾವಣಾ ಕೆಲಸ, ಸರ್ವೆ, ಭಾಗ್ಯಲಕ್ಷ್ಮಿ, ಸ್ತ್ರೀಶಕ್ತಿ, ಅಂಗವಿಕಲರಿಗೆ ಸಂಬಂಧಿಸಿದ ಕೆಲಸಗಳು ಸೇರಿದಂತೆ ರಾಜ್ಯ ಸರ್ಕಾರ ಪ್ರಕಟಿಸಿದ ಮಾತೃಪೂರ್ಣ ಯೋಜನೆ ಜಾರಿಗೊಳಿಸುವಂತಹ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಗೌರವ ಧನ ಹೆಚ್ಚಿಸಿ ಸೇವಾ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

ನಂತರ ಮಹಾತ್ಮಾ ಗಾಂಧಿ ವೃತ್ತದಿಂದ ಪ್ರತಿಭಟನಾ ರ‍್ಯಾಲಿ ಆರಂಭಿಸಿದ ರೈತರು ಮಹೇಂದ್ರಕರ ವೃತ್ತ, ಹುಯಿಲಗೋಳ ನಾರಾಯಣರಾವ ವೃತ್ತ, ಬಸವೇಶ್ವರ ವೃತ್ತ, ಮುಳಗುಂದ ನಾಕಾ, ಟಿಪ್ಪು ಸುಲ್ತಾನ್ ವೃತ್ತ ಮಾರ್ಗವಾಗಿ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು. ಸಂಸದ ಶಿವಕುಮಾರ ಉದಾಸಿ ಹಾಗೂ ಜಿಲ್ಲಾಧಿಕಾರಿ ಮನೋಜ್ ಜೈನ್ ಅವರಿಗೆ ಮನವಿ ಸಲ್ಲಿಸಿದರು.  ಸಿಐಟಿಯು ಜಿಲ್ಲಾಧ್ಯಕ್ಷ ಮಹೇಶ ಹಿರೇಮಠ, ಜಿಲ್ಲಾ ಮುಖಂಡರಾದ ಮಾರುತಿ ಚಿಟಗಿ, ದುಂಡಮ್ಮಾ ಬಳಿಗೇರ, ಸಾವಿತ್ರಿ ಸಬನಿಸ್, ಚಂದ್ರವ್ವ ಸಳಕೆ, ವಿಜಯ ಪಾಟೀಲ, ಡಿ.ಎಚ್. ರಡ್ಡೆರ, ಶಂಕ್ರಮ್ಮಾ ಕೋಳಿವಾಡ, ಜಿ.ವಿ. ಹೂಗಾರ, ಎಂ.ಎ. ಸಿದ್ದಿಪಾಟೀಲ, ಗಿರಿಜಾ ಮಮ್ಮಿಗಟ್ಟಿ, ನೀಲಮ್ಮಾ ಹಿರೇಮಠ, ಕಮಲಾಕ್ಷಿ ಬಿಳಗಿ, ಶಂಕರ ದೇವರಮನಿ, ಕವಿತಾ ಬಡಿಗೇರ ಸೇರಿದಂತೆ 500ಕ್ಕೂ ಹೆಚ್ಚು ಅಂಗನವಾಡಿ ನೌಕರರು ಪಾಲ್ಗೊಂಡಿದ್ದರು.

ಮೇಲ್ವಿಚಾರಕ ಹುದ್ದೆಗೆ ಬಡ್ತಿ ನೀಡಿ

ಪ್ರತಿ ತಿಂಗಳು ಪಾವತಿಸಬೇಕಾದ ಗೌರವಧನ 3 ತಿಂಗಳಾದರೂ ಸಿಗುತ್ತಿಲ್ಲ. ಮಿನಿ ಅಂಗನವಾಡಿ ಕೇಂದ್ರಗಳನ್ನು ಅಂಗನವಾಡಿ ಕೇಂದ್ರಗಳನ್ನಾಗಿ ಪರಿವರ್ತಿಸಬೇಕು. ಎಲ್ಲಾ ಮಿನಿ ಅಂಗನವಾಡಿ ಕೇಂದ್ರಗಳಿಗೂ ಸಹಾಯಕಿಯರನ್ನು ಕಡ್ಡಾಯವಾಗಿ ನೇಮಕ ಮಾಡಬೇಕು. ಅನುಭವಿ ಸಹಾಯಕರಿಗೆ ಮೇಲ್ವಿಚಾರಕ ಹುದ್ದೆಗೆ ಬಡ್ತಿ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Leave a Reply

Your email address will not be published. Required fields are marked *

Back To Top