Sunday, 23rd July 2017  

Vijayavani

1. ಕೊಪ್ಪಳದ ಖೋಟಾನೋಟು ಪ್ರಕರಣಕ್ಕೆ ಹೊಸ ಟ್ವಿಸ್ಟ್​- ಐವರಲ್ಲಿ ಮೂವರು ಆರೋಪಿಗಳು ಅರೆಸ್ಟ್- ವೈಯಕ್ತಿಕ ದ್ವೇಷಕ್ಕೆ ಬಲಿಯಾಗಿದ್ದ ಉಪನ್ಯಾಸಕ 2. ಮಳೆಗೆ ಹಾರಂಗಿ ಜಲಾಶಯ ಬಹುತೇಕ ಭರ್ತಿ- ಡ್ಯಾಂನಿಂದ 1,200 ಕ್ಯೂಸೆಕ್ ನೀರು ಬಿಡುಗಡೆ- ನದಿಪಾತ್ರದ ಜನರಿಗೆ ಎಚ್ಚರದಿಂದಿರಲು ಸೂಚನೆ 3. ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶ್ವಕರ್ಮ ಸಮಾವೇಶ- ಸಮುದಾಯದಿಂದ ಬಿಎಸ್​ವೈಗೆ ಸನ್ಮಾನ- ಬಿಜೆಪಿ ಹಲವು ಮುಖಂಡರು ಹಾಜರ್‌ 4. ಕಾಂಗ್ರೆಸ್​ ಕದ ತಟ್ಟಿದ ಜೆಡಿಎಸ್​ ರೆಬೆಲ್ಸ್​- ಇನ್ನೆರಡು ತಿಂಗಳಲ್ಲಿ ಸೇರ್ಪಡೆ ಖಚಿತ- ಇನ್ನೂ ಏಳು ಜನ ಬರ್ತಾರೆಂದು ಜಮೀರ್​ ಬಾಂಬ್​ 5. ವನಿತೆಯರ ವಿಶ್ವಕಪ್‌ನಲ್ಲಿ ಇಂಡೋ- ಇಂಗ್ಲೆಂಡ್‌ ಫೈಟ್- ಟಾಸ್‌ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ- ಟೀಂ ಇಂಡಿಯಾಗೆ ದೇಶ ಜನರಿಂದ ಆಲ್​ ದ ಬೆಸ್ಟ್​
Breaking News :

ಅಕ್ರಮ ಸಕ್ರಮ ವಿಧೇಯಕ ಮಂಡನೆ

Tuesday, 21.03.2017, 7:33 AM       No Comments

ಬೆಂಗಳೂರು: ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ಮನೆ ನಿರ್ವಿುಸಿಕೊಂಡಿರುವ ನಿವೇಶನಗಳನ್ನು ಸಕ್ರಮ ಮಾಡುವ ಪ್ರಮುಖ ಭೂ ಕಂದಾಯ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಇದರ ಪ್ರಕಾರ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯ ಕಂದಾಯ ಜಮೀನಿನಲ್ಲಿ ನಿರ್ವಿುಸಲಾಗಿರುವ ಮನೆಯ ಜಾಗವನ್ನು ಸಕ್ರಮಗೊಳಿಸಬಹುದಾಗಿದೆ. ಬಜೆಟ್ ಮೇಲಿನ ಚರ್ಚೆ ಸಂದರ್ಭದಲ್ಲಿ ‘ಕರ್ನಾಟಕ ಭೂ ಕಂದಾಯ 1964’ರ ಕಾಯ್ದೆಗೆ ತಿದ್ದುಪಡಿ ವಿಧೇಯಕವನ್ನು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮಂಡಿಸಿದರು. ಈ ಕಾಯ್ದೆ ಪ್ರಕಾರ ನಿಗದಿತ ಅಂತರದಲ್ಲಿನ 3040 ಅಡಿ ಅಕ್ರಮ ನಿವೇಶನಗಳನ್ನು ಮಂಜೂರು ಮಾಡಬಹುದಾಗಿದೆ. ಬಿಬಿಎಂಪಿ ವ್ಯಾಪ್ತಿಯ 18 ಕಿಮೀ ಹಾಗೂ ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು ಮತ್ತು ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ 10 ಕಿಮೀ, ನಗರಸಭೆಗಳ ವ್ಯಾಪ್ತಿ 5 ಕಿಮೀ, ಪೌರನಿಗಮಗಳ ವ್ಯಾಪ್ತಿ 10 ಕಿಮೀ ಹಾಗೂ ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿ 3 ಕಿಮೀ ಪರಿಮಿತಿಯೊಳಗೆ ಇರುವ ನಿವೇಶನಗಳನ್ನು ಸಕ್ರಮ ಮಾಡಲು ಈ ಕಾಯ್ದೆಯಡಿ ಅವಕಾಶವಿದೆ.

 

Leave a Reply

Your email address will not be published. Required fields are marked *

4 × five =

Back To Top