Monday, 11th December 2017  

Vijayavani

1. ಸಿಗರೇಟ್​ ಕೊಟ್ರೆ ಮಾತ್ರ ಕಾರ್​ ಹತ್ತಿನಿ – ಇಲ್ಲಾಅಂದ್ರೆ ಡೋರ್ ಹಾಕೋದಕ್ಕೂ ಬಿಡಲ್ಲ – ಪೊಲೀಸರ ಎದ್ರು ಬೆಳಗೆರೆ ಹೈ ಡ್ರಾಮ್​ 2. ನಿನ್ನೆ ಮೌಖಿಕ, ಇಂದು ಲಿಖಿತ ಹೇಳಿಕೆ – ಸಿಸಿಬಿಯಿಂದ ರವಿ 2ನೇ ಪತ್ನಿ ಯಶೋಮತಿ ವಿಚಾರಣೆ – ಅತ್ತ ಸುನೀಲ್​ರಿಂದ ರಕ್ಷಣೆಗೆ ಮನವಿ 3. ಕನ್ನಡ ಜನರ ಓಟು ಪಡೆದು ಶಾಸಕರ ಮರಾಠಿ ಪ್ರೇಮ – ಸಂಜಯ್ ಪಾಟೀಲ್​ರಿಂದ ಕನ್ನಡ ವಿರೋಧಿ ಹೇಳಿಕೆ – ಶಾಸಕರ ನಡೆಗೆ ಜನರು ಕಿಡಿ 4. ಲಿಂಗಾಯತ ಸಮಾವೇಶದಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ – ತಗ್ಲಾಕೊಂಡವನಿಗೆ ಬಿತ್ತು ಹಿಗ್ಗಾಮುಗ್ಗಾ ಗೂಸಾ – ಒದ್ದು ಪೊಲೀಸರಿಗೆ ಒಪ್ಪಿಸಿದ ಜನ 5. ಗೋಲ್ಡ್​ ಆಗ್ತಿದಾರೆ ಅಕ್ಷಯ್ ಕುಮಾರ್ – ಧೋತಿಯಲ್ಲಿ ಕಿಲಾಡಿ ಚೇರ್​ ಸ್ಟಂಟ್ – ಸೋಶೀಯಲ್ ಮೀಡಿಯಾದಲ್ಲಿ ದೃಶ್ಯ ವೈರಲ್
Breaking News :

ಅಧಿಕಾರಕ್ಕೆ ಬಂದ ತಿಂಗಳಲ್ಲೇ ನೇಕಾರರ ಸಾಲ ಮನ್ನಾ

Saturday, 07.10.2017, 3:00 AM       No Comments

ಬಾಗಲಕೋಟೆ: ಉತ್ತರ ಕರ್ನಾಟಕದಲ್ಲಿ ಅಧಿಕ ಸಂಖ್ಯೆಯಲ್ಲಿರುವ ನೇಕಾರರನ್ನು ತನ್ನ ಮತಬುಟ್ಟಿಯಲ್ಲಿ ಭದ್ರಪಡಿಸಿಕೊಳ್ಳಲು ಬಿಜೆಪಿ ದೃಢ ಹೆಜ್ಜೆ ಇಟ್ಟಿದೆ. ಇದಕ್ಕೆ ಪೂರಕ ಎಂಬಂತೆ ನೇಕಾರ ಮತದಾರರೇ ನಿರ್ಣಾಯಕರಾಗಿರುವ ತೇರದಾಳ ಕ್ಷೇತ್ರದಲ್ಲಿ ಶುಕ್ರವಾರ ನೇಕಾರರ ಸಮಾವೇಶ ಏರ್ಪಡಿಸಿದ್ದ ಬಿಜೆಪಿ, ಸಮುದಾಯಕ್ಕೆ ಬಂಪರ್ ಭರವಸೆಗಳನ್ನು ಘೊಷಿಸಿದೆ.

ಜಮಖಂಡಿ ತಾಲೂಕು ಬನಹಟ್ಟಿಯ ಎಸ್​ಆರ್​ಎ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಮಾವೇಶ ಉದ್ಘಾಟಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ. ಪಕ್ಷ ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ನೇಕಾರರ ಸಾಲ ಮನ್ನಾ ಮಾಡುತ್ತೇನೆ. ರಿಯಾಯಿತಿ ದರದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುವುದು. ಮೊದಲ ಬಜೆಟ್​ನಲ್ಲಿ ನೇಕಾರರ ವಿವಿಧ ಸಮಸ್ಯೆ ಬಗೆಹರಿಸಲು ಒಂದು ಸಾವಿರ ಕೋಟಿ ರೂ. ತೆಗೆದಿಡಲಾಗುವುದು ಎಂದು ಭರವಸೆ ನೀಡಿದರು.

ರೈತರು, ನೇಕಾರರು ನನ್ನ ಎರಡು ಕಣ್ಣುಗಳು. ಸದ್ಯ ರಾಜ್ಯದಲ್ಲಿ ಇರುವ ವಸತಿ ರಹಿತ ನೇಕಾರರ ಪಟ್ಟಿ ಮಾಡಿ ಕೊಡಿ. ಪ್ರಧಾನಿಗಳ ಜತೆ ಚರ್ಚೆ ಮಾಡಿ ಮನೆ ಕಟ್ಟಿಸಿಕೊಡುವ ಪ್ರಯತ್ನ ಮಾಡುತ್ತೇನೆ. ಇದಕ್ಕಾಗಿ ರಾಜ್ಯದಲ್ಲಿ ನಮ್ಮ ಸರ್ಕಾರ ಬರುವವರೆಗೂ ಕಾಯುವುದು ಬೇಡ ಎಂದರು.

ಗಣ್ಯರ ಜೇಬಿಗೆ ಕತ್ತರಿ: ಸಂಸದ ಪಿ.ಸಿ.ಗದ್ದಿಗೌಡರ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದು ಸವದಿ ಹಾಗೂ ನೇಕಾರ ಪ್ರಕೋಷ್ಠದ ರಾಜ್ಯ ಸಂಚಾಲಕ ಮನೋಹರ ಶಿರೋಳ ಅವರ ಜೇಬಿಗೆ ಕಳ್ಳರು ಕತ್ತರಿ ಹಾಕಿ ಕೈ ಚಳಕ ತೋರಿಸಿದ್ದಾರೆ.

ಉತ್ತರದಲ್ಲಿ ಸ್ಪರ್ಧೆ ಕುತೂಹಲಕ್ಕೆ ತೆರೆ!

ಉತ್ತರದಿಂದ ಸ್ಪರ್ಧೆ ಚರ್ಚೆಗೂ ತೆರೆ ಎಳೆದ ಯಡಿಯೂರಪ್ಪ, ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನೂರಕ್ಕೆ ನೂರರಷ್ಟು ಸತ್ಯ. ತೇರದಾಳ ಕ್ಷೇತ್ರಕ್ಕೆ ಸಿದ್ದು ಸವದಿ ಅಭ್ಯರ್ಥಿಯಾಗಲಿದ್ದಾರೆ. ಇಲ್ಲಿ ತಾವೇ ಸ್ಪರ್ಧೆ ಮಾಡಿದ್ದೇನೆ ಎಂದು ತಿಳಿದು ಸವದಿ ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಎಂದರು.

Leave a Reply

Your email address will not be published. Required fields are marked *

Back To Top