Wednesday, 19th September 2018  

Vijayavani

ಆಸ್ಪತ್ರೆಯಿಂದ ಸಚಿವ ಡಿ.ಕೆ. ಶಿವಕುಮಾರ್​​ ಡಿಸ್ಚಾರ್ಜ್ - ಕೆಲವೇ ಕ್ಷಣಗಳಲ್ಲಿ ಸುದ್ದಿಗೋಷ್ಠಿ - ಎಟಿಎಂ ಆರೋಪಕ್ಕೆ ಉತ್ತರಿಸ್ತಾರಾ?        ಗಾಂಧಿ ಕುಟುಂಬಕ್ಕೆ ಎಟಿಎಂ ಅಂತೆ ಡಿಕೆಶಿ - ಎಐಸಿಸಿಗೆ 600 ಕೋಟಿ ಆಗಿದ್ಯಂತೆ ಡೆಪಾಸಿಟ್ - ಡಿಕೆಶಿ ವಿರುದ್ಧ ಆರೋಪಗಳ ಪಟ್ಟಿ        ಇಡಿ ಪ್ರಕರಣದಲ್ಲಿ ಡಿಕೆಶಿ ಬಂಧನ ಖಚಿತ - ಅರೆಸ್ಟ್‌ ಬೆನ್ನಲ್ಲೇ ಮೈತ್ರಿ ಸರ್ಕಾರ ಖತಂ - ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಭವಿಷ್ಯ        ಬೆಂಗ್ಳೂರು ರಸ್ತೆ ಗುಂಡಿಗೆ ಹೈಕೋರ್ಟ್ ಗರಂ - ಬೆಳಗ್ಗೆಯೊಳಗೆ ಗುಂಡಿ ಮುಚ್ಚಿಸಿ - ಕೆಲ್ಸ ಮಾಡದಿದ್ರೆ ಬಿಬಿಎಂಪಿ ಬಂದ್ ಅಂದ್ರು ಸಿಜೆ        ನವಾಜ್​​ ಷರೀಫ್​ಗೆ ರಿಲೀಫ್ - ಜೈಲಿನಿಂದ ಪಾಕ್ ಮಾಜಿ ಪ್ರಧಾನಿ, ಪುತ್ರಿ ಬಿಡುಗಡೆ - ಇಸ್ಲಾಮಾಬಾದ್ ಹೈಕೋರ್ಟ್ ಆದೇಶ        ದುಬೈನಲ್ಲಿ ಏಷ್ಯಾಕಪ್ ಹಣಾಹಣಿ - ಹೈವೋಲ್ಟೇಜ್ ಮ್ಯಾಚ್​ಗೆ ಬದ್ಧ ವೈರಿಗಳು ಸಜ್ಜು - ಟಾಗ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ       
Breaking News

ಅನಿಷ್ಟ ಪದ್ಧತಿ ವಿರುದ್ಧ ಜನಜಾಗೃತಿ ಜಾಥಾ

Tuesday, 10.07.2018, 10:46 PM       No Comments

ಲಕ್ಷ್ಮೇಶ್ವರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ದೇವದಾಸಿ ಪುನರ್ವಸತಿ ಯೋಜನೆ, ತಹಸೀಲ್ದಾರ್ ಕಚೇರಿಯಿಂದ ಅನಿಷ್ಟ ಪದ್ಧತಿ ವಿರುದ್ಧ ಮಂಗಳವಾರ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ಅಂಗನವಾಡಿ ಶಿಕ್ಷಕರು, ಸಹಾಯಕಿಯರು, ಮಾಜಿ ದೇವದಾಸಿಯರು ಮತ್ತು ಇಲಾಖೆಗಳ ಸಿಬ್ಬಂದಿ ಪಾಲ್ಗೊಂಡಿದ್ದ ಜಾಗೃತಿ ಜಾಥಾ ಪಟ್ಟಣದ ಹಿಂದುಳಿದ ವರ್ಗಗಳ ಜನರು ವಾಸಿಸುವ ಪ್ರದೇಶ ಮತ್ತು ಮುಖ್ಯ ಬಜಾರ್ ರಸ್ತೆಯ ಮೂಲಕ ಸಾಗಿ ದುರ್ಗಾದೇವಿ ದೇವಸ್ಥಾನದಲ್ಲಿ ಸಭೆಯಾಗಿ ಮಾರ್ಪಟ್ಟಿತು.  ವೇಳೆ ಮಾತನಾಡಿದ ದೇವದಾಸಿ ಪುನರ್ವಸತಿ ಜಿಲ್ಲಾ ಯೋಜನಾಧಿಕಾರಿ ಬಿ.ಆರ್. ಮಧುಸೂದನ, ‘ದೇವರ ಹೆಸರಿನಲ್ಲಿ ನಡೆಯುವ ಅನಿಷ್ಟ ಪದ್ಧತಿಗಳು, ಬೆತ್ತಲೆ ಸೇವೆ ಸಾಮಾಜಿಕ ಪಿಡುಗಾಗಿದೆ. ಶೈಕ್ಷಣಿಕ, ಸಾಮಾಜಿಕವಾಗಿ ಪ್ರಗತಿಪಥದತ್ತ ಸಾಗುತ್ತಿರುವ ನಾಗರಿಕ ಸಮಾಜಕ್ಕೆ ಕಳಂಕ ತರುವಂತದ್ದಾಗಿದೆ. ಬೆತ್ತಲೆ ಸೇವೆ ಮೌಢ್ಯ ಪ್ರತಿಬಂಧಕ ನಿಷೇಧ ಕಾಯ್ದೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು ಘಟನೆಗೆ ಪ್ರತ್ಯಕ್ಷ-ಪರೋಕ್ಷವಾಗಿ ಕಾರಣರಾದವರಿಗೆ 3 ವರ್ಷ ಜೈಲು ಜತೆಗೆ 10 ಸಾವಿರ ರೂ. ದಂಡ ವಿಧಿಸಲಾಗುವುದು. ಹೀಗಾಗಿ ಎಲ್ಲರೂ ಇಂತಹ ಅನಿಷ್ಟ ಪದ್ಧತಿ ತಡೆಯುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

ಸಿಡಿಪಿಒ ಡಿ.ಎಚ್. ಮುಲ್ಲಾ, ಯೋಜನಾ ಅನುಷ್ಠಾನಾಧಿಕಾರಿ ಶಮೀರ್ ಗಡವಾಲೆ, ಅಂಗನವಾಡಿ ಮೇಲ್ವಿಚಾರಕಿ ನಂದಾ ನವಲೆ ಇತರರಿದ್ದರು. ಜು. 7ರಂದು ವಿಜಯವಾಣಿಯಲ್ಲಿ ‘ದೇವಿ ಹೆಸರಲ್ಲಿ ಬೆತ್ತಲೆ ಸೇವೆ, ಪೊಲೀಸ್ ಠಾಣೆ ಎದುರೇ ಅನಾಚಾರ….’ ಶಿರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ಎಚ್ಚೆತ್ತ ಅಧಿಕಾರಿಗಳು ಜಾಗೃತಿ ಜಾಥಾ ಕಾರ್ಯಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

Back To Top