Sunday, 24th September 2017  

Vijayavani

1. 3ನೇ ಮ್ಯಾಚ್‌ನಲ್ಲೂ ಆಸೀಸ್‌ ಉಡೀಸ್‌- ರೋಹಿತ್,ರಹಾನೆ,ಪಾಂಡ್ಯ ಬೊಂಬಾಟ್‌ ಆಟ- ಭಾರತಕ್ಕೆ ಸರಣಿ ವಶ 2. ದೆಹಲಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ- ಜಾವ್ಡೇಕರ್ ನೇತೃತ್ವದಲ್ಲಿ ಮೀಟಿಂಗ್‌- ತಡವಾಗಿ ದೆಹಲಿ ವಿಮಾನ ಏರಿದ ಈಶ್ವರಪ್ಪ 3. ಸಿದ್ದಾರ್ಥ್​ ಮನೆ ಮೇಲೆ ಐಟಿ ದಾಳಿ ಪ್ರಕರಣ- 650 ಕೋಟಿ ಮೌಲ್ಯದ ಅಕ್ರಮ ಆದಾಯ ಪತ್ತೆ- ದಿಗ್ವಿಜಯ ನ್ಯೂಸ್​ಗೆ ಐಟಿ‌ ಮೂಲಗಳ ಮಾಹಿತಿ 4. ವಿಶ್ವಸಂಸ್ಥೆಯಲ್ಲಿ ಮತ್ತೆ ಬಾಲ ಬಿಚ್ಚಿದ ಪಾಕಿಸ್ತಾನ- ಮಡಿಲಲ್ಲಿ ಕೆಂಡ ಇಟ್ಕೊಂಡು ಭಾರತದತ್ತ ವಾಗ್ಬಾಣ- ಇಂಡಿಯಾ ಉಗ್ರವಾದದ ತಾಯಿ ಅಂತಾ ಪಾಕ್ ಉದ್ಧಟತನ 5. ಕೋಕ್ ಸ್ಟುಡಿಯೋದಿಂದ ಸಂಗೀತ ಸಂಜೆ- ಪೆಪೋನ್ ಗಾಯನಕ್ಕೆ ಮನಸೋತ ಯುವಜನ- ಹುಚ್ಚಿದ್ದು ಕುಣಿಸಿದ ಯುವದಸರಾ
Breaking News :

ಅಪಘಾತದಲ್ಲಿ 9 ಮಂದಿ ಸಾವು

Thursday, 14.09.2017, 3:00 AM       No Comments

 

ಯಲ್ಲಾಪುರ: ತಾಲೂಕಿನ ಅರಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಬುಧವಾರ ಬೆಳಗ್ಗೆ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮಕ್ಕಳು ಸೇರಿ 9 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗದ ವಿವೇಕ ವಸಂತ ಘಾಟಗೆ (34), ಮೇನಕಾ ವಿವೇಕ ಘಾಟಗೆ (28), ವೈಷ್ಣವಿ ವಿವೇಕ ಘಾಟಗೆ (5), ವರದರಾಜ ವಿವೇಕ ಘಾಟಗೆ (1), ಅಭಿನವ ಚಂದ್ರಕಾಂತ ಕಾಂಬ್ಳೆ (3), ರೇಣುಕಾ ಚಂದ್ರಕಾಂತ ಕಾಂಬ್ಳೆ (30), ಸಚಿನ್ ಮಧುಕರ ಜಂಡೆನವರ್ (28), ಗೌರವ್ವ ವಸಂತ ಮೇತ್ರಿ (58) ಹಾಗೂ ಕಾರು ಚಾಲಕ ಮುಜಾಹಿದ್ ಇಕ್ಬಾಲ್ ನಾಯಕವಾಡಿ (27) ಮೃತ ದುರ್ದೈವಿಗಳು. ಗಜಾನನ ಬಾಬು ಮೇತ್ರಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ್ದ ಇವರು ಊರಿಗೆ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತ ವಿವೇಕ ಘಾಟಗೆ ಅವರು ರಾಯಬಾಗದ ಮಾಜಿ ಶಾಸಕ ಶ್ಯಾಮ ಘಾಟಗೆ ಅವರ ಕುಟುಂಬದವರಾಗಿದ್ದಾರೆ. ಅರಬೈಲ್​ಗಿಂತ ಸ್ವಲ್ಪ ಹಿಂದೆ ಸಮತಟ್ಟಾದ ರಸ್ತೆಯಲ್ಲೇ ಘಟನೆ ನಡೆದಿದ್ದು, ಕಾರು ಚಾಲಕ ನಿದ್ದೆ ಮಂಪರಿನಲ್ಲಿ ಎದುರಿನಿಂದ ಬಂದ ಲಾರಿಗೆ ಗುದ್ದಿ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಅಪಘಾತದಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು, ಪೊಲೀಸರು ಸಂಚಾರ ಸುಗಮಗೊಳಿಸಲು ಹರಸಾಹಸ ಪಡುವಂತಾಯಿತು. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Back To Top