Sunday, 24th June 2018  

Vijayavani

ಆಪ್ತರ ಜತೆ ಮಾಜಿ ಸಿಎಂ ಸಭೆ ಹಿನ್ನೆಲೆ - ಸಿದ್ದರಾಮಯ್ಯ ಭೇಟಿಗೆ ತೆರಳಿದ ಪರಂ - ರಾಜಕೀಯ ವಿಚಾರಗಳ ಬಗ್ಗೆ ನಾಯಕರ ಚರ್ಚೆ ಸಾಧ್ಯತೆ        ಪ್ರಕೃತಿ ಚಿಕಿತ್ಸಾಲಯದಿಂದ ಹೊರ ಬಂದ ಸಿದ್ದು - ಅಭಿಮಾನಿಗಳ ಜತೆ ಮಾಜಿ ಸಿಎಂ ಚರ್ಚೆ - ಕೈ ಕಾರ್ಯಕರ್ತರ ಜತೆ ಸೆಲ್ಫಿಗೆ ಫೋಸ್​​        ಶಿವಮೊಗ್ಗದಲ್ಲಿ ಮತ್ತೆ ಝಳಪಿಸಿದ ಮಾರಕಾಸ್ತ್ರ - ರೌಡಿ ಶೀಟರ್​​​ ಹಬೀಬ್​ ಬರ್ಬರ ಹತ್ಯೆ - ತುಂಗಾನಗರ ಠಾಣೆಯಲ್ಲಿ ಪ್ರಕರಣ        ಖಾತೆ ಹಂಚಿಕೆಯಾಯ್ತು, ಈಗ ಬಂಗಲೆ ಸರದಿ - ಒಂದೊಂದು ಬಂಗಲೆಗೆ ಮೂವರ ಪೈಪೋಟಿ - ಸಿಎಂ ಕುಮಾರಸ್ವಾಮಿಗೆ ಬಂಗಲೆ ಕೊಡೋದೇ ಚಿಂತೆ        ಹಿಟ್​​ಲಿಸ್ಟ್​​ನಲ್ಲಿದ್ದ 20 ಉಗ್ರರ ಪೈಕಿ ಇಬ್ಬರು ಫಿನಿಶ್ - ಕುಲ್ಗಾಮದಲ್ಲಿ ಇಬ್ಬರು ಎಲ್​​ಇಟಿ ಉಗ್ರರು ಉಡೀಸ್​ - ಶಸ್ತ್ರ ಸಹಿತ ಒಬ್ಬ ಟೆರರ್​ ಸರೆಂಡರ್        ಮನೆಗಾಗಿ ಕಣ್ಣೀರಿಟ್ಟ ವೃದ್ಧೆಗೆ ಶಾಸಕರ ಸಹಾಯ - 20 ಸಾವಿರ ಹಣ ನೀಡಿದ ಡಾ.ರಂಗನಾಥ - ದಿಗ್ವಿಜಯ ನ್ಯೂಸ್​ ವರದಿಗೆ ಸ್ಪಂದಿಸಿದ ಕುಣಿಗಲ್​ ಶಾಸಕ       
Breaking News

ಅಮಾವಾಸ್ಯೆ ಪೂಜೆ ಸಲ್ಲಿಸಿದ ಸಿಎಂ

Thursday, 14.06.2018, 3:02 AM       No Comments

ಮಂಡ್ಯ: ಕಾಲಭೈರವೇಶ್ವರನ ಅಮಾವಾಸ್ಯೆ ಪೂಜೆ ಫಲಿಸಿದ ಹಿನ್ನೆಲೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬುಧವಾರ ಆದಿಚುಂಚನಗಿರಿ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಬಂದು ವಿಶೇಷ ಅಮಾವಾಸ್ಯೆ ಪೂಜೆ ಸಲ್ಲಿಸಿದರು.

ಹಿಂದೆ 9 ಅಮಾವಾಸ್ಯೆ ಪೂಜೆಗಳನ್ನು ದೇವೇಗೌಡರ ಕುಟುಂಬ ಸಲ್ಲಿಸಿತ್ತು. ಹೆಚ್ಡಿಡಿ, ಹೆಚ್ಡಿಕೆ, ರೇವಣ್ಣ ದಂಪತಿ ತಲಾ 3 ಅಮಾವಾಸ್ಯೆಗಳಂದು ಪೂಜೆ ಸಲ್ಲಿಸಿದ್ದರು. ಸಿಎಂ ಆದ ಬಳಿಕ ಹರಕೆ ತೀರಿಸಲು ಬುಧವಾರ ಕ್ಷೇತ್ರಕ್ಕೆ ಆಗಮಿಸಿದ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು.

ಅಮಾವಾಸ್ಯೆ ಹಿನ್ನೆಲೆಯಲ್ಲಿ ನಿರ್ಮಲಾನಂದನಾಥ ಶ್ರೀಗಳು ಮುಂಜಾನೆಯಿಂದಲೇ ಕ್ಷೇತ್ರ ಪ್ರದಕ್ಷಿಣೆ, ಕ್ಷೇತ್ರಾಧಿ ದೇವತೆಗಳ ದರ್ಶನ, ವಿಶೇಷ ಪೂಜೆ ನೆರವೇರಿಸಿದರು. ಮುಖ್ಯಮಂತ್ರಿಗಳ ಪೂಜಾ ಕಾರ್ಯದಲ್ಲೂ ಪಾಲ್ಗೊಂಡಿದ್ದರು.

ನಂತರ ಮುಖ್ಯಮಂತ್ರಿಗೆ ಆಶೀರ್ವದಿಸಿದ ಶ್ರೀಗಳು, ಫಲ-ತಾಂಬೂಲವನ್ನು ನೀಡಿ ಗೌರವಿಸಿದರು. ಕುಮಾರಸ್ವಾಮಿ ಅವರ ಜತೆಗೆ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್​ಕುಮಾರ್, ಸಚಿವ ಸಿ.ಎಸ್. ಪುಟ್ಟರಾಜು, ಶಾಸಕ ಸುರೇಶ್​ಗೌಡ, ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಕೂಡ ಪೂಜೆಯಲ್ಲಿ ಭಾಗಿಯಾಗಿದ್ದರು.

ಉರುಳಿ ಬಿದ್ದ ಸ್ವಾಗತ ಕಮಾನು

ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಆದಿಚುಂಚನಗಿರಿಗೆ ಆಗಮಿಸಲಿದ್ದ ಎಚ್.ಡಿ. ಕುಮಾರಸ್ವಾಮಿ ಅವರ ಸ್ವಾಗತಕ್ಕೆ ಸಿದ್ಧಪಡಿಸಿದ್ದ ವಿಶೇಷ ಕಮಾನು ಗಾಳಿಯಿಂದ ಉರುಳಿ ಬಿದ್ದು ಇಬ್ಬರು ಗಾಯಗೊಂಡರು. ಚುಂಚನಗಿರಿ ಮಠದ ಸಮೀಪದಲ್ಲಿ ವಿಭಿನ್ನ ರೀತಿಯಲ್ಲಿ ಕಮಾನು ರಚಿಸಿ ಕೊಡೆಗಳಿಂದ ವಿಭಿನ್ನವಾಗಿ ಅಲಂಕಾರ ಮಾಡಲಾಗಿತ್ತು. ಬುಧವಾರ ಬೆಳಗ್ಗೆ 9.30ರಲ್ಲಿ ಗಾಳಿ ಜೋರಾಗಿ ಬೀಸಲಾರಂಭಿಸಿದ್ದರಿಂದ ಕಮಾನು ಉರುಳಿ ಬಿತ್ತು. ಈ ಸಂದರ್ಭದಲ್ಲಿ ಹೆಚ್ಚು ಜನರಿಲ್ಲದ ಕಾರಣದಿಂದ ಸಂಭವಿಸಬಹುದಾದ ದೊಡ್ಡ ದುರಂತವೊಂದು ತಪ್ಪಿತು.

Leave a Reply

Your email address will not be published. Required fields are marked *

Back To Top