Saturday, 23rd June 2018  

Vijayavani

ಬಜೆಟ್ ಪೂರ್ವಭಾವಿ ಸಭೆ ಆರಂಭ - ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆ ಸಭೆ -ಸಿಎಂ ನೇತೃತ್ವದಲ್ಲಿ ಮೀಟಿಂಗ್​​        ಟ್ರಾನ್ಸ್​​​ಫರ್​ಗೆ ನೋ ಬ್ರೋಕರ್ ಸಿಸ್ಟಂ - ಸಿಎಂ, ಡಿಸಿಎಂ ಹೆಸ್ರು ಬಳಸಿದ್ರೆ ದೂರವಿಡಿ - ಪೊಲೀಸ್​​​​ ಅಧಿಕಾರಿಗಳಿಗೆ ಸಿಎಂ ಆರ್ಡರ್​​​​        ಲಾರಿಗೆ ಸಿಲುಕಿ ಆತ್ಮಹತ್ಯೆಗೆ ಯುವಕನ ಯತ್ನ - ಚಕ್ರ ಹರಿದು ಎರಡೂ ಕಾಲು ಕಟ್​ - ಕೊಪ್ಪಳದ ಕುಕನೂರು ಪಟ್ಟಣದಲ್ಲಿ ಘಟನೆ        ಗಂಗಾಧರ ಚಡಚಣ ನಿಗೂಢ ಹತ್ಯ ಪ್ರಕರಣ - 6 ಮಂದಿ ಆರೋಪಿಗಳ ಸಿಐಡಿ ತನಿಖೆ ಪೂರ್ಣ        ಇಂದಿನಿಂದ ಮೆಟ್ರೋದ 6 ಬೋಗಿ ರೈಲು ಓಡಾಟ - ಬೈಯಪ್ಪನ ಹಳ್ಳಿಯಿಂದ ಮೈಸೂರು ರಸ್ತೆ ವರೆಗೆ ಸಂಚಾರ        ಹಜ್​ ಭವನಕ್ಕೆ ಟಿಪ್ಪು ಹೆಸರಿಡಲು ಪ್ರಸ್ತಾಪ- ವಕ್ಫ್​ ಸಚಿವ ಜಮೀರ್​ ವಿರುದ್ಧ ಆಕ್ರೋಶ- ಟಿಪ್ಪು ಹೆಸರಿಟ್ರೆ ಉಗ್ರ ಹೋರಾಟ ಎಂದ ಬಿಜೆಪಿ       
Breaking News

ಅರಳುವ ಮುನ್ನ ಬಾಡದಿರಲಿ ಬದುಕು

Wednesday, 13.06.2018, 2:02 AM       No Comments

ಗದಗ: ಬಡತನ, ನಿರುದ್ಯೋಗ, ಬಾಲ ಕಾರ್ವಿುಕ ಪದ್ಧತಿಗೆ ಮೂಲ ಕಾರಣಗಳಾಗಿದ್ದು, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಬಾಲ ಕಾರ್ವಿುಕ ಪದ್ಧತಿ ನಿಮೂಲನೆ ಅವಶ್ಯವಾಗಿದೆ ಎಂದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ಕುಲಕರ್ಣಿ ಹೇಳಿದರು.

ನಗರದ ಜೆ.ಟಿ. ಕಾಲೇಜ್ ಸಭಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಬಾಲ ಕಾರ್ವಿುಕ ಯೋಜನಾ ಸಂಘ, ಕಾರ್ವಿುಕ ಇಲಾಖೆ ಆಶ್ರಯದಲ್ಲಿ ಮಂಗಳವಾರ ಜರುಗಿದ ವಿಶ್ವ ಬಾಲ ಕಾರ್ವಿುಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಬಾಲ ಕಾರ್ವಿುಕ ಪದ್ಧತಿ ನಿಮೂಲನೆಗಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ಬಾಲ ಕಾರ್ವಿುಕ ಪದ್ಧತಿಯನ್ನು ನಿಮೂಲನೆ ಮಾಡಲು ಸಂಘ ಸಂಸ್ಥೆಗಳು ಕೈಜೋಡಿಸಬೇಕೆಂದು ಅವರು ಹೇಳಿದರು.

ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ ಮಾತನಾಡಿ, ಮಕ್ಕಳ ಬದುಕು ಬಾಲ ಕಾರ್ವಿುಕತೆಗೆ ಬಲಿಯಾಗಬಾರದು. ಬಾಲ ಕಾರ್ವಿುಕತೆ ನಿಮೂಲನೆಗೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಮಗು ಶಿಕ್ಷಣ ಪಡೆಯುವುದು ಮೂಲ ಹಕ್ಕಾಗಿದೆ ಎಂದರು.

6 ರಿಂದ 14 ವರ್ಷದವರೆಗೆ ಎಲ್ಲ ಮಕ್ಕಳಿಗೂ ಉಚಿತ ಹಾಗೂ ಕಡ್ಡಾಯ ಶಿಕ್ಷಣ ಒದಗಿಸುವುದು. ಎಲ್ಲ ಮಕ್ಕಳಿಗೂ ಸಾರ್ವತ್ರಿಕ ಹಾಗೂ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಬಾಲ ಕಾರ್ವಿುಕ ಪದ್ಧತಿ ತಡೆಗಟ್ಟುವ ಹಾಗೂ ನಿಮೂಲನೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

ಬಾಲ ಕಾರ್ವಿುಕ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ದುರ್ಗಾ ಕೊಟ್ಟೇಕಲ್, ಅರ್ಚನಾ ಕಾಶಿಗಾಂವ, ಸೌಮ್ಯ ಚುಳಕಿ ಅವರಿಗೆ ಬಹುಮಾನ ವಿತರಿಸಲಾಯಿತು.

ಜೆಟಿ ಕಾಲೇಜ್ ಪ್ರಾಚಾರ್ಯ ಸಿ. ಲಿಂಗಾರೆಡ್ಡಿ, ಕಟ್ಟಡ ಕಾರ್ವಿುಕರ ಮಹಾಸಂಘ, ಸ್ವಯಂ ಸೇವಾ ಸಂಸ್ಥೆಗಳು, ಹೋಟೆಲ್ ಮಾಲೀಕರ ಸಂಘ, ಬಟ್ಟೆ ವ್ಯಾಪಾರಸ್ಥರ ಸಂಘ, ಗ್ಯಾರೇಜ್ ಮಾಲೀಕರ ಸಂಘ, ಶಿಕ್ಷಕರು ಉಪಸ್ಥಿತರಿದ್ದರು. ಸಿ.ಎಸ್. ಪಾಟೀಲ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಜಿಲ್ಲಾ ಕಾರ್ವಿುಕ ಅಧಿಕಾರಿ ವಿಲ್ಮಾ ಎಲಿಜಬೆತ್ ತಾವ್ರೋ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಎಸ್. ಗೌಡರ ನಿರೂಪಿಸಿದರು. ಎಸ್.ಎಂ. ಪತ್ತಾರ ವಂದಿಸಿದರು.

ಇದಕ್ಕೂ ಮೊದಲು ಬಾಲ ಕಾರ್ವಿುಕ ಪದ್ಧತಿ ವಿರೋಧಿ ಜಾಗೃತಿ ಜಾಥಾಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಎಸ್. ಸಂಗ್ರೇಶಿ ಚಾಲನೆ ನೀಡಿದರು. ಜಾಗೃತಿ ಜಾಥಾವು ನಗರದ ಗಾಂಧಿ ವೃತ್ತದಿಂದ ಆರಂಭಗೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜೆಟಿ ಕಾಲೇಜ್ ತಲುಪಿತು.

Leave a Reply

Your email address will not be published. Required fields are marked *

Back To Top