Sunday, 15th July 2018  

Vijayavani

ಬಾಲಕನ ವಿಡಿಯೋ ಹಿಂದೆ ಬಿಜೆಪಿ ಕೈವಾಡ ಆರೋಪ - ವಿಡಿಯೋ ತನಿಖೆಗೆ ಸದಾನಂದಗೌಡ ಆಗ್ರಹ - ರಾಜಕಾರಣಿಗಳ ಆಟಕ್ಕೆ ಕೊಡವರ ಆಕ್ರೋಶ        26 ವರ್ಷ ಲಿಂಗಾಯತರೇ ರಾಜ್ಯ ಆಳಿದ್ದಾರೆ - ಕುಮಾರಸ್ವಾಮಿ ಸಿಎಂ ಆಗಿ 2 ತಿಂಗಳಾಗಿದೆ - ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ದೇವೇಗೌಡ ತಿರುಗೇಟು        ಕೊನೆಗೂ ಶಿರಾಡಿ ಘಾಟ್‌ ಲೋಕಾರ್ಪಣೆ - ವಾಸ್ತು ಪ್ರಕಾರ ರೇವಣ್ಣ ಉದ್ಘಾಟನೆ - ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ        ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು, ಮೊಟ್ಟೆ - 25 ಸಾವಿರ ಮಂದಿಗೆ ಭರ್ಜರಿ ಬಾಡೂಟ - ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಜಿಟಿಡಿ ಕೃತಜ್ಞತೆ        ಒಂದು ದೇಶ ಒಂದೇ ಚುನಾವಣೆ - ಮೋದಿ ಪರಿಕಲ್ಪನೆಗೆ ಸೂಪರ್‌ಸ್ಟಾರ್‌ ಬೆಂಬಲ - ಹಣ, ಸಮಯ ಉಳಿತಾಯ ಎಂದ ರಜನಿ        ಉಕ್ಕಿಹರಿಯುತ್ತಿರೋ ಕೃಷ್ಣೆ - ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ - ಇತ್ತ ತಮಿಳುನಾಡಿನಲ್ಲಿ ಕಾವೇರಿ ಭೋರ್ಗರೆತ       
Breaking News

ಆರ್​ಟಿಒ, ಇನ್ಸ್​ಪೆಕ್ಟರ್ ನೇಮಕ ಶೀಘ್ರ

Monday, 02.07.2018, 3:03 AM       No Comments

ದಾವಣಗೆರೆ: ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದಲ್ಲಿ ಖಾಲಿ ಇರುವ ಆರ್​ಟಿಒ, ಟ್ರಾಫಿಕ್ ಇನ್ಸ್​ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಚಿಂತಿಸಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.

ನಗರದ ಕೆಎಸ್ಸಾರ್ಟಿಸಿ ನಿಲ್ದಾಣಕ್ಕೆ ಭಾನುವಾರ ಭೇಟಿ ನೀಡಿ, ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಆರ್​ಟಿಒ, ಟ್ರಾಫಿಕ್ ಇನ್ಸ್​ಪೆಕ್ಟರ್​ಗಳ ಅನುಮೋದಿತ 676 ಹುದ್ದೆಗಳಿದ್ದರೆ, 260 ಮಂದಿ ಕಾರ್ಯನಿರ್ವಹಿಸು ತ್ತಿದ್ದಾರೆ. 416 ಹುದ್ದೆಗಳು ಖಾಲಿ ಇವೆ. ಮಹಾರಾಷ್ಟ್ರದ ವಾಹನಗಳ ಸಂಖ್ಯೆ, ನೇಮಕಾತಿ ಕ್ರಮದ ಬಗ್ಗೆ ವರದಿ ಪಡೆದು ನೇರ ಅಥವಾ ಕೆಪಿಎಸ್​ಸಿ ಮೂಲಕ ಭರ್ತಿ ಮಾಡಿ ಕೊಳ್ಳಬೇಕೆ ಎಂದು ನಿರ್ಧರಿಸಲಾಗುವುದು ಎಂದರು.

ರಾಜ್ಯದ ಎಲ್ಲ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಆದಾಯ ಬರುವಂತಿದ್ದಲ್ಲಿ ವಾಣಿಜ್ಯ ಸಂಕೀರ್ಣ ನಿರ್ವಿುಸಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಮಹಿಳಾ ಶೌಚಗೃಹ ಪ್ರವೇಶ!

ಚಿಕ್ಕಮಗಳೂರು: ನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣ ಪರಿಶೀಲಿಸಿದ ಸಚಿವ ಡಿ.ಸಿ.ತಮ್ಮಣ್ಣ, ಪ್ರಯಾಣಿಕರಿಗೆ ಕಲ್ಪಿಸಿರುವ ಮೂಲಸೌಕರ್ಯ, ಬಸ್​ಗಳ ವೇಳಾಪಟ್ಟಿ ಗಮನಿಸಿದರು. ನಂತರ ಶೌಚಗೃಹ ಪರಿಶೀಲನೆ ವೇಳೆ ದಿಢೀರನೆ ಮಹಿಳೆಯರ ಶೌಚಗೃಹ ಪ್ರವೇಶಿಸಿದರು. ಸಚಿವರಿಗೆ ಗೊತ್ತಿಲ್ಲದೆ ಈ ಪ್ರಮಾದ ನಡೆಯಿತಾದರೂ ಅಲ್ಲಿ ಯಾರೂ ಇರಲಿಲ್ಲವಾದ್ದರಿಂದ ಮುಜುಗರ ಸನ್ನಿವೇಶ ಸಂಭವಿಸಲಿಲ್ಲ. ಜತೆಗಿದ್ದ ಅಧಿಕಾರಿಗಳು ಮತ್ತು ಜೆಡಿಎಸ್ ಕಾರ್ಯಕರ್ತರು ಎಚ್ಚೆತ್ತುಕೊಳ್ಳುವಷ್ಟರಲ್ಲಿ ಈ ಘಟನೆ ಜರುಗಿತ್ತು. ನಂತರ ಶೌಚಗೃಹದ ಅನೈರ್ಮಲ್ಯ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

Leave a Reply

Your email address will not be published. Required fields are marked *

Back To Top