Thursday, 19th April 2018  

Vijayavani

ಬಿಜೆಪಿ ಕಚೇರಿಯಲ್ಲಿ ಅಮಿತ್‌ ಷಾ ಮೀಟಿಂಗ್ - ಸೋಶಿಯಲ್‌ ಮೀಡಿಯಾ ಬಗ್ಗೆ ಫುಲ್‌ ಮಾರ್ಕ್ಸ್‌ - ಎಚ್ಚರಿಕೆ ಹೆಜ್ಜೆ ಇಡಲು ಸಲಹೆ        ಒಂಟಿಸಲಗದ ಮನೆಗೆ ಬಂತು ಬಿ ಫಾರಂ ​​ - ಅಂಬಿ ಷರುತ್ತುಗಳಿಗೆ ಒಪ್ಪಿದ ಪರಂ - ಪಕ್ಷದ ನಡೆ ಬಗ್ಗೆ ರೆಬೆಲ್‌ಸ್ಟಾರ್‌ ಗರಂ        ಕೈ ಟಿಕೆಟ್​ ತಪ್ಪಿದ್ದಕ್ಕೆ ಶಶಿಕುಮಾರ್ ಅಸಮಾಧಾನ​ - ದೇವೆಗೌಡರ ಭೇಟಿಯಾದ ಕೊಲ್ಲೂರ ಕಾಳ - ಪದ್ಮನಾಭ ನಗರದ ನಿವಾಸದಲ್ಲಿ ಜೆಡಿಸ್​ ಸೇರ್ಪಡೆ        ಟಿಕೆಟ್​ಗಾಗಿ ಹೆಚ್ಚಿದ ಕಣ್ಣೀರಧಾರೆ - ಮಾಯಕೊಂಡದಲ್ಲಿ ಕಣ್ಣೀರಿಟ್ಟ ಮಾಜಿ ಶಾಸಕ - ತರೀಕೆರೆಯಲ್ಲಿ ಶಿವಶಂಕರಪ್ಪ ಭಾವುಕ        ಭವಾನಿ ಸೋಲಿಸಿ ಎಂದಿದ್ದು ನನ್ನನ್ನಲ್ಲ - ಕೈ ಅಭ್ಯರ್ಥಿ ವಿರುದ್ಧ ಮಾತನಾಡಿದ್ದಾರೆ - ಭವಾನಿ ವಿಡಿಯೋ ಬಗ್ಗೆ ಸಾ.ರಾ ಮಹೇಶ್‌ ಸ್ಪಷ್ಟನೆ        ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ - 6ನೇ ವೇತನ ಆಯೋಗದ ಶಿಫಾರಸು ಜಾರಿಗೆ ಗ್ರೀನ್​ಸಿಗ್ನಲ್ - ಚುನಾವಣಾ ಆಯೋಗದಿಂದ ಒಪ್ಪಿಗೆ       
Breaking News

ಆಸ್ಟ್ರೇಲಿಯಾ ನಾಯಕತ್ವಕ್ಕೆ ಸಿದ್ಧ

Monday, 16.04.2018, 3:02 AM       No Comments

ನವದೆಹಲಿ: ಚೆಂಡು ವಿರೂಪದ ಬಿರುಗಾಳಿಗೆ ಸಿಕ್ಕಿ ನಾಯಕನಿಲ್ಲದೆ ಹಿನ್ನಡೆ ಕಂಡಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡವನ್ನು ಮುಂದಿನ ದಿನಗಳಲ್ಲಿ ಮುನ್ನಡೆ ಸಿದ್ಧವಿರುವುದಾಗಿ ಆರಂಭಿಕ ಸ್ಪೋಟಕ ಬ್ಯಾಟ್ಸ್​ಮನ್ ಆರನ್ ಫಿಂಚ್ ಹೇಳಿದ್ದಾರೆ. ‘ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸುವ ಅವಕಾಶ ಸಿಕ್ಕಿದರೆ ಸ್ವೀಕರಿಸಲು ಸಿದ್ಧ. ಆದರೆ ಈ ಬಾರಿ ತಂಡವನ್ನು ಸಮರ್ಥವಾಗಿ ಸುಧಾರಣೆಯತ್ತ ಕೊಂಡೊಯ್ಯುವುದು ಸವಾಲಿದೆ. ಮುಂದಿನ ಕೆಲ ತಿಂಗಳಲ್ಲಿ ನಮಗೆ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಹಾಗೂ ಪಾಕಿಸ್ತಾನದ ವಿರುದ್ಧ ದುಬೈನಲ್ಲಿ ಟೆಸ್ಟ್ ಸರಣಿ ಇದೆ ಎಂದು ಆರನ್ ಫಿಂಚ್ ಹೇಳಿದ್ದಾರೆ. ಚೆಂಡು ವಿರೂಪದ ಕಳಂಕಿತ ಹಿಂದಿನ ನಾಯಕ ಸ್ಟೀವನ್ ಸ್ಮಿತ್ ಹಾಗೂ ಉಪನಾಯಕನಾಗಿದ್ದ ಡೇವಿಡ್ ವಾರ್ನರ್​ಗೂ ತಲಾ ಒಂದು ವರ್ಷದ ನಿಷೇಧದಲ್ಲಿರುವುದರಿಂದ ಆಸ್ಟ್ರೇಲಿಯಾ ತಂಡದ ನಾಯಕತ್ವದ ಬಗ್ಗೆ ಕುತೂಹಲ ಉಳಿದುಕೊಂಡಿದೆ. ಟೆಸ್ಟ್ ತಂಡಕ್ಕೆ ಟಿಮ್ ಪೇನ್ ನಾಯಕರಾಗಿದ್ದರೆ, ಏಕದಿನ ತಂಡಕ್ಕೆ ನಾಯಕನನ್ನು ಪ್ರಕಟಿಸಿಲ್ಲ. ಮೂಲಗಳ ಪ್ರಕಾರ ಆರನ್ ಫಿಂಚ್, ಆಸ್ಟ್ರೇಲಿಯಾ ಏಕದಿನ ಹಾಗೂ ಟಿ20 ತಂಡದ ನಾಯಕರಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

Back To Top