Thursday, 19th April 2018  

Vijayavani

ಬಿಜೆಪಿ ಕಚೇರಿಯಲ್ಲಿ ಅಮಿತ್‌ ಷಾ ಮೀಟಿಂಗ್ - ಸೋಶಿಯಲ್‌ ಮೀಡಿಯಾ ಬಗ್ಗೆ ಫುಲ್‌ ಮಾರ್ಕ್ಸ್‌ - ಎಚ್ಚರಿಕೆ ಹೆಜ್ಜೆ ಇಡಲು ಸಲಹೆ        ಒಂಟಿಸಲಗದ ಮನೆಗೆ ಬಂತು ಬಿ ಫಾರಂ ​​ - ಅಂಬಿ ಷರುತ್ತುಗಳಿಗೆ ಒಪ್ಪಿದ ಪರಂ - ಪಕ್ಷದ ನಡೆ ಬಗ್ಗೆ ರೆಬೆಲ್‌ಸ್ಟಾರ್‌ ಗರಂ        ಕೈ ಟಿಕೆಟ್​ ತಪ್ಪಿದ್ದಕ್ಕೆ ಶಶಿಕುಮಾರ್ ಅಸಮಾಧಾನ​ - ದೇವೆಗೌಡರ ಭೇಟಿಯಾದ ಕೊಲ್ಲೂರ ಕಾಳ - ಪದ್ಮನಾಭ ನಗರದ ನಿವಾಸದಲ್ಲಿ ಜೆಡಿಸ್​ ಸೇರ್ಪಡೆ        ಟಿಕೆಟ್​ಗಾಗಿ ಹೆಚ್ಚಿದ ಕಣ್ಣೀರಧಾರೆ - ಮಾಯಕೊಂಡದಲ್ಲಿ ಕಣ್ಣೀರಿಟ್ಟ ಮಾಜಿ ಶಾಸಕ - ತರೀಕೆರೆಯಲ್ಲಿ ಶಿವಶಂಕರಪ್ಪ ಭಾವುಕ        ಭವಾನಿ ಸೋಲಿಸಿ ಎಂದಿದ್ದು ನನ್ನನ್ನಲ್ಲ - ಕೈ ಅಭ್ಯರ್ಥಿ ವಿರುದ್ಧ ಮಾತನಾಡಿದ್ದಾರೆ - ಭವಾನಿ ವಿಡಿಯೋ ಬಗ್ಗೆ ಸಾ.ರಾ ಮಹೇಶ್‌ ಸ್ಪಷ್ಟನೆ        ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ - 6ನೇ ವೇತನ ಆಯೋಗದ ಶಿಫಾರಸು ಜಾರಿಗೆ ಗ್ರೀನ್​ಸಿಗ್ನಲ್ - ಚುನಾವಣಾ ಆಯೋಗದಿಂದ ಒಪ್ಪಿಗೆ       
Breaking News

ಇಂದು ಆಸೀಸ್ ಅಭ್ಯಾಸ

Tuesday, 12.09.2017, 3:00 AM       No Comments

ಚೆನ್ನೈ: ಭಾರತ ತಂಡದ ವಿರುದ್ಧ ಸೀಮಿತ ಓವರ್​ಗಳ ಸರಣಿಯನ್ನು ಪ್ರವಾಸಿ ಆಸ್ಟ್ರೇಲಿಯಾ ತಂಡ, ದ್ವಿತೀಯ ದರ್ಜೆಯ ಅಧ್ಯಕ್ಷರ ಇಲೆವೆನ್ ತಂಡವನ್ನು ಎದುರಿಸುವ ಮೂಲಕ ಆರಂಭಿಸಲಿದೆ. ಸೆ. 17ರಂದು ಆರಂಭವಾಗಲಿರುವ ಐದು ಪಂದ್ಯಗಳ ಏಕದಿನ ಸರಣಿ ಹಾಗೂ ಆ ನಂತರದ ಮೂರು ಪಂದ್ಯಗಳ ಟಿ20 ಸರಣಿಗಾಗಿ ಆಸ್ಟ್ರೇಲಿಯಾ ತಂಡ ಆಡಲಿರುವ ಏಕೈಕ ಅಭ್ಯಾಸ ಪಂದ್ಯ ಇದಾಗಿದೆ.

ಮೊದಲ ಏಕದಿನ ಪಂದ್ಯಕ್ಕೆ ಆತಿಥ್ಯ ವಹಿಸಿಕೊಂಡಿರುವ ಚೆನ್ನೈನ ಎಂ.ಎ.ಚಿದಂಬರಂ ಮೈದಾನದಲ್ಲಿಯೇ ಅಭ್ಯಾಸ ಪಂದ್ಯ ನಡೆಯಲಿದ್ದು, ಸ್ಪೋಟಕ ಆರಂಭಿಕ ಆರನ್ ಫಿಂಚ್ ಹಾಗೂ ಹಿಲ್ಟನ್ ಕಾರ್ಟ್​ರೈಟ್​ಗೆ ಪ್ರವಾಸಿ ತಂಡ ವಿಶ್ರಾಂತಿ ನೀಡಿದೆ. ಫಿಂಚ್ ಮೊದಲ ಏಕದಿನ ಪಂದ್ಯಕ್ಕೆ ಲಭ್ಯರಿದ್ದರೆ, ಆಲ್ರೌಂಡರ್ ಕಾರ್ಟ್​ರೈಟ್ ಅನಾರೋಗ್ಯದ ಕಾರಣ ಮೊದಲ ಪಂದ್ಯದ ವೇಳೆ ಆಯ್ಕೆಗೆ ಅನುಮಾನವಾಗಿದೆ.

ದೇಶೀಯ ಕ್ರಿಕೆಟ್​ನ ಸ್ಟಾರ್ ಆಟಗಾರರು ದುಲೀಪ್ ಟ್ರೋಫಿ ಆಡುತ್ತಿರುವ ಕಾರಣ, ದ್ವಿತೀಯ ದರ್ಜೆಯ ಅಧ್ಯಕ್ಷರ ಇಲೆವೆನ್ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಪಂಜಾಬ್​ನ ಗುರುಕೀರತ್ ಮಾನ್ ಸಿಂಗ್ ತಂಡದ ನಾಯಕರಾಗಿದ್ದಾರೆ. ಶ್ರೀವತ್ಸ ಗೋಸ್ವಾಮಿ, ಕನ್ನಡಿಗ ಮಯಾಂಕ್ ಅಗರ್ವಾಲ್ ಹಾಗೂ ನಿತೇಶ್ ರಾಣಾ ತಂಡದಲ್ಲಿರುವ ಪ್ರಮುಖ ಆಟಗಾರರು. ಹಾಲಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡಕ್ಕೆ ಸ್ಪಿನ್ ಬೌಲಿಂಗ್ ಎದುರಿಸುವುದೇ ಸಂಕಷ್ಟವಾಗಲಿದೆ. ಆ ನಿಟ್ಟಿನಲ್ಲಿ ಅಲ್ಪ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಭ್ಯಾಸ ಪಂದ್ಯದಲ್ಲಿ ಆಡಲಿರುವುದಾಗಿ ನಾಯಕ ಸ್ಟೀವನ್ ಸ್ಮಿತ್ ಹೇಳಿದ್ದಾರೆ.

Leave a Reply

Your email address will not be published. Required fields are marked *

Back To Top