Monday, 19th February 2018  

Vijayavani

ಶ್ರವಣಬೆಳಗೊಳದ ಮಹಾಮಜ್ಜನದಲ್ಲಿ ಮೋದಿ - ಮೆಟ್ಟಿಲುಗಳ, ಬಾಹುಬಲಿ ಆಸ್ಪತ್ರೆ ಉದ್ಘಾಟನೆ - ಚಾವುಂಡರಾಯ ವೇದಿಕೆಯಲ್ಲಿ ಭಾಷಣ.        ಮೈಸೂರಿನಲ್ಲಿ ಪರಿವರ್ತನಾ ಯಾತ್ರೆಗೆ ಕ್ಷಣಗಣನೆ - ಸಿಎಂ ತವರಲ್ಲಿ ಅಬ್ಬರಿಸಲಿದ್ದಾರೆ ಮೋದಿ - ಸಿದ್ದರಾಮಯ್ಯಗೆ ಟಾಂಗ್ ಕೊಡ್ತಾರಾ ಪ್ರಧಾನಿ?        ಮೋದಿ ಯಾತ್ರೆಗೆ ಬೆದರಿದ್ರಾ ಸಿದ್ದರಾಮಯ್ಯ - ಪ್ರಧಾನಿ ಪ್ರವಾಸದ ವೇಳೆಯೇ ರೌಂಡ್ಸ್ - ಜನರ ಸಮಸ್ಯೆ ಆಲಿಸಿದ ಸಿಎಂ.        ದರ್ಪ ಮೆರೆದಿದ್ದ ಗೂಂಡಾ ಅರೆಸ್ಟ್ - ಮಹಮ್ಮದ್‌ ವಿರುದ್ಧ ಸೆಕ್ಷನ್ 307 ಕೇಸ್ ದಾಖಲು - ಠಾಣೆ ಎದುರು ಕಾರ್ಯಕರ್ತರ ಹೈಡ್ರಾಮಾ.        ಕೆ.ಆರ್‌.ಆಸ್ಪತ್ರೆಯಲ್ಲಿ ಕೆ.ಎಸ್‌. ಪುಟ್ಟಣ್ಣಯ್ಯ ಪಾರ್ಥಿವ ಶರೀರ - ವಿದೇಶದಿಂದ ಪುತ್ರಿ ಬಂದ ಬಳಿಕ ಬುಧವಾರ ಅಂತ್ಯಕ್ರಿಯೆ - ಗಣ್ಯರಿಂದ ಸಂತಾಪ.       
Breaking News

ಇಂದು ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20

Tuesday, 13.02.2018, 3:02 AM       No Comments

ಪೊಚೆಫ್​ಸ್ಟ್ರೋಮ್ ಏಕದಿನ ಸರಣಿ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ ವಿಶ್ವಾಸದಲ್ಲಿರುವ ಭಾರತ ಮಹಿಳೆಯರ ತಂಡ, ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಸಜ್ಜುಗೊಂಡಿದೆ. ಮಂಗಳವಾರ ನಡೆಯಲಿರುವ ಸರಣಿಯ ಮೊದಲ ಪಂದ್ಯಕ್ಕೆ ಉಭಯ ತಂಡಗಳು ಸನ್ನದ್ಧವಾಗಿವೆ. 3 ಪಂದ್ಯಗಳ ಏಕದಿನ ಸರಣಿಯನ್ನು 2-1 ರಿಂದ ವಶಪಡಿಸಿಕೊಂಡ ಭಾರತ, ವಿದೇಶಿ ನೆಲದಲ್ಲಿ ಮತ್ತೊಂದು ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ. ಅಂತಿಮ ಏಕದಿನ ಪಂದ್ಯದಲ್ಲಿ ಸೋಲು ಕಂಡಿರುವ ಭಾರತ, ಆತಿಥೇಯ ತಂಡದ ವಿರುದ್ಧ ಗೆಲುವಿನ ಹಳಿಗೆ ಮರಳುವ ವಿಶ್ವಾಸದಲ್ಲಿದೆ.

ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಕ್ರಮವಾಗಿ 88 ಹಾಗೂ 178 ರನ್​ಗಳಿಂದ ಭರ್ಜರಿ ಜಯ ದಾಖಲಿಸಿದ್ದ ಮಿಥಾಲಿ ರಾಜ್ ಸಾರಥ್ಯದ ಪಡೆ ಎದುರಾಳಿ ತಂಡಕ್ಕೆ ತನ್ನ ಸಾಮರ್ಥ್ಯ ಸಾಬೀತು ಪಡಿಸಿದೆ. ಚುಟುಕು ಸರಣಿಗೆ ಸ್ಪೋಟಕ ಬ್ಯಾಟ್ಸ್​ವುಮನ್ ಹರ್ವನ್​ಪ್ರೀತ್ ಕೌರ್ ತಂಢದ ನಾಯಕಿಯಾಗಿದ್ದಾರೆ. ಭರ್ಜರಿ ಫಾಮರ್್​ನಲ್ಲಿರುವ ಸ್ಮೃತಿ ಮಂದನಾ, ಕನ್ನಡತಿ ವೇದಾ ಕೃಷ್ಣಮೂರ್ತಿ, ಆರಂಭಿಕ ಆಟಗಾರ್ತಿ ದೀಪ್ತಿ ಶರ್ಮ ತಂಡದ ಟ್ರಂಪ್ ಕಾರ್ಡ್ ಆಗಿದ್ದಾರೆ. ಜತೆಗೆ ಟಿ20 ತಜ್ಞರಾದ ಅನುಜಾ ಪಾಟೀಲ್, ಆಲ್ರೌಂಡರ್ ರಾಧಾ ಯಾದವ್ ಹಾಗೂ ವಿಕೆಟ್-ಕೀಪರ್ ನುಜಾತ್ ಪರ್ವೀನ್ ತಂಡ ಸೇರಿದ್ದಾರೆ. 19 ವಯೋಮಿತಿಯಲ್ಲಿ ಮಿಂಚಿರುವ ಮುಂಬೈನ 17 ವರ್ಷದ ಜೆಮಿಮಾ ರೊಡ್ರಿಗಸ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಲಿದ್ದಾರೆ.-ಏಜೆನ್ಸೀಸ್

Leave a Reply

Your email address will not be published. Required fields are marked *

Back To Top