Sunday, 24th September 2017  

Vijayavani

1. 3ನೇ ಮ್ಯಾಚ್‌ನಲ್ಲೂ ಆಸೀಸ್‌ ಉಡೀಸ್‌- ರೋಹಿತ್,ರಹಾನೆ,ಪಾಂಡ್ಯ ಬೊಂಬಾಟ್‌ ಆಟ- ಭಾರತಕ್ಕೆ ಸರಣಿ ವಶ 2. ದೆಹಲಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ- ಜಾವ್ಡೇಕರ್ ನೇತೃತ್ವದಲ್ಲಿ ಮೀಟಿಂಗ್‌- ತಡವಾಗಿ ದೆಹಲಿ ವಿಮಾನ ಏರಿದ ಈಶ್ವರಪ್ಪ 3. ಸಿದ್ದಾರ್ಥ್​ ಮನೆ ಮೇಲೆ ಐಟಿ ದಾಳಿ ಪ್ರಕರಣ- 650 ಕೋಟಿ ಮೌಲ್ಯದ ಅಕ್ರಮ ಆದಾಯ ಪತ್ತೆ- ದಿಗ್ವಿಜಯ ನ್ಯೂಸ್​ಗೆ ಐಟಿ‌ ಮೂಲಗಳ ಮಾಹಿತಿ 4. ವಿಶ್ವಸಂಸ್ಥೆಯಲ್ಲಿ ಮತ್ತೆ ಬಾಲ ಬಿಚ್ಚಿದ ಪಾಕಿಸ್ತಾನ- ಮಡಿಲಲ್ಲಿ ಕೆಂಡ ಇಟ್ಕೊಂಡು ಭಾರತದತ್ತ ವಾಗ್ಬಾಣ- ಇಂಡಿಯಾ ಉಗ್ರವಾದದ ತಾಯಿ ಅಂತಾ ಪಾಕ್ ಉದ್ಧಟತನ 5. ಕೋಕ್ ಸ್ಟುಡಿಯೋದಿಂದ ಸಂಗೀತ ಸಂಜೆ- ಪೆಪೋನ್ ಗಾಯನಕ್ಕೆ ಮನಸೋತ ಯುವಜನ- ಹುಚ್ಚಿದ್ದು ಕುಣಿಸಿದ ಯುವದಸರಾ
Breaking News :

ಉತ್ತರ ಕೊರಿಯಾ ವಿರುದ್ಧ ವಿಶ್ವಸಂಸ್ಥೆ ಮತ್ತಷ್ಟು ನಿರ್ಬಂಧ

Wednesday, 13.09.2017, 3:03 AM       No Comments

 

ವಿಶ್ವಸಂಸ್ಥೆ: ಹಲವು ಎಚ್ಚರಿಕೆ ಹಾಗೂ ನಿರ್ಬಂಧದ ನಡುವೆಯೂ ಆರನೇ ಮತ್ತು ಅತ್ಯಂತ ದೊಡ್ಡಮಟ್ಟದಲ್ಲಿ ಪರಮಾಣು ಪರೀಕ್ಷೆ ನಡೆಸಿರುವ ಉತ್ತರ ಕೊರಿಯಾ ವಿರುದ್ಧ ವಿಶ್ವಸಂಸ್ಥೆ ಕಠಿಣ ನಿರ್ಬಂಧ ವಿಧಿಸಿದೆ. ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ಜವಳಿ, ತೈಲ ಮತ್ತಿತರ ಉತ್ಪನ್ನಗಳನ್ನು ಉತ್ತರ ಕೊರಿಯಾಕ್ಕೆ ಪೂರೈಕೆ ಮಾಡುವುದನ್ನು ಸ್ಥಗಿತಗೊಳಿಸಲಿವೆ. ಈ ಮೂಲಕ ಉತ್ತರ ಕೊರಿಯಾವನ್ನು ಮತ್ತಷ್ಟು ಏಕಾಂಗಿಯಾಗಿಸುವುದಲ್ಲದೆ ಆರ್ಥಿಕವಾಗಿ ಹಣಿಯುವ ಕೆಲಸವನ್ನು ವಿಶ್ವಸಂಸ್ಥೆ ಮುಂದುವರಿಸಿದೆ. ಚೀನಾ ಮತ್ತು ರಷ್ಯಾ ಬೆಂಬಲದೊಂದಿಗೆ ವಿಶ್ವಸಂಸ್ಥೆಯು ಹೊಸ ನಿರ್ಬಂಧಕ್ಕೆ ಅನುಮೋದನೆ ಸೂಚಿಸಿದೆ. ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾಯಿಸಿದ ಉತ್ತರ ಕೊರಿಯಾ ವಿರುದ್ಧ ಕಳೆದ ತಿಂಗಳು ಕಲ್ಲಿದ್ದಲು, ಸಮುದ್ರ ಖಾದ್ಯಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಪರಮಾಣು ಶಸ್ತ್ರಾಸ್ತ್ರ ಹೊಂದಿರುವ ಉ. ಕೊರಿಯಾವನ್ನು ಜಗತ್ತು ಒಪ್ಪಿಕೊಳ್ಳುವುದಿಲ್ಲ. ಅದು ದುರ್ಗಮ ಹಾದಿ ಆಯ್ಕೆ ಮಾಡಿಕೊಂಡರೆ ಮತ್ತಷ್ಟು ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಅಮೆರಿಕ ಹೇಳಿದೆ. –ಏಜೆನ್ಸೀಸ್

Leave a Reply

Your email address will not be published. Required fields are marked *

Back To Top