Wednesday, 19th September 2018  

Vijayavani

ಆಸ್ಪತ್ರೆಯಿಂದ ಸಚಿವ ಡಿ.ಕೆ. ಶಿವಕುಮಾರ್​​ ಡಿಸ್ಚಾರ್ಜ್ - ಕೆಲವೇ ಕ್ಷಣಗಳಲ್ಲಿ ಸುದ್ದಿಗೋಷ್ಠಿ - ಎಟಿಎಂ ಆರೋಪಕ್ಕೆ ಉತ್ತರಿಸ್ತಾರಾ?        ಗಾಂಧಿ ಕುಟುಂಬಕ್ಕೆ ಎಟಿಎಂ ಅಂತೆ ಡಿಕೆಶಿ - ಎಐಸಿಸಿಗೆ 600 ಕೋಟಿ ಆಗಿದ್ಯಂತೆ ಡೆಪಾಸಿಟ್ - ಡಿಕೆಶಿ ವಿರುದ್ಧ ಆರೋಪಗಳ ಪಟ್ಟಿ        ಇಡಿ ಪ್ರಕರಣದಲ್ಲಿ ಡಿಕೆಶಿ ಬಂಧನ ಖಚಿತ - ಅರೆಸ್ಟ್‌ ಬೆನ್ನಲ್ಲೇ ಮೈತ್ರಿ ಸರ್ಕಾರ ಖತಂ - ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಭವಿಷ್ಯ        ಬೆಂಗ್ಳೂರು ರಸ್ತೆ ಗುಂಡಿಗೆ ಹೈಕೋರ್ಟ್ ಗರಂ - ಬೆಳಗ್ಗೆಯೊಳಗೆ ಗುಂಡಿ ಮುಚ್ಚಿಸಿ - ಕೆಲ್ಸ ಮಾಡದಿದ್ರೆ ಬಿಬಿಎಂಪಿ ಬಂದ್ ಅಂದ್ರು ಸಿಜೆ        ನವಾಜ್​​ ಷರೀಫ್​ಗೆ ರಿಲೀಫ್ - ಜೈಲಿನಿಂದ ಪಾಕ್ ಮಾಜಿ ಪ್ರಧಾನಿ, ಪುತ್ರಿ ಬಿಡುಗಡೆ - ಇಸ್ಲಾಮಾಬಾದ್ ಹೈಕೋರ್ಟ್ ಆದೇಶ        ದುಬೈನಲ್ಲಿ ಏಷ್ಯಾಕಪ್ ಹಣಾಹಣಿ - ಹೈವೋಲ್ಟೇಜ್ ಮ್ಯಾಚ್​ಗೆ ಬದ್ಧ ವೈರಿಗಳು ಸಜ್ಜು - ಟಾಗ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ       
Breaking News

ಉದ್ಯಮವಾಗಿ ಬದಲಾಗುತ್ತಿದೆ ಪತ್ರಿಕಾರಂಗ

Tuesday, 10.07.2018, 3:50 AM       No Comments

ಕನಕಪುರ: ಪತ್ರಿಕಾರಂಗ ಉದ್ಯಮವಾಗಿ ಮಾರ್ಪಡುತ್ತಿದ್ದು, ಲಾಭ, ನಷ್ಟಗಳ ಲೆಕ್ಕಾಚಾರದಲ್ಲಿ ನಡೆಯುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿ.ಕೆ. ಸುರೇಶ್ ತಿಳಿಸಿದರು.

ನಗರದ ರೋಟರಿ ಭವನದಲ್ಲಿ ಭಾನುವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು. ಪತ್ರಕರ್ತರು ಲಾಭ ನಷ್ಟದ ಲೆಕ್ಕಚಾರ ಮಾಡಿದರೆ, ಪಕ್ಷತೀತವಾಗಿ ವರದಿ ಮಾಡಲು ಸಾಧ್ಯವಾಗುವುದಿಲ್ಲ ಎಂದರು.

ದೃಶ್ಯ ಮಾಧ್ಯಮಗಳು ಸುದ್ದಿ ನೀಡುವ ಬರದಲ್ಲಿ ನೈಜತೆ ಮರೆ ಮಾಚುತ್ತಿವೆ. ಯಾವುದೇ ವಿಚಾರಗಳನ್ನು ಹೇಳುವಾಗ ಮಾಧ್ಯಮಗಳು ವಸ್ತುನಿಷ್ಠ ವರದಿ ನೀಡಬೇಕೆಂದರು.

ವಿಧಾನ ಪರಿಷತ್ ಸದಸ್ಯ ಎಸ್. ರವಿ ಮಾತನಾಡಿ, ಓದುಗರು ಪತ್ರಿಕೆಗಳಿಂದ ನಿಸ್ಪಕ್ಷಪಾತ ವರದಿ ಬಯಸುತ್ತಾರೆ. ಅವರ ಅಭಿರುಚಿಗೆ ತಕ್ಕಂತೆ ವರದಿ ನೀಡಿದಾಗ ಪತ್ರಿಕೆಗಳ ಪ್ರಸಾರ ಸಂಖ್ಯೆ ಹೆಚ್ಚಾಗುತ್ತದೆ ಎಂದು ತಿಳಿಸಿದರು. ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಡಾ. ತೇಜಸ್ವಿ ನವಿಲೂರು ಮಾತನಾಡಿದರು. ಸಂಘದ ರಾಜ್ಯ ಉಪಾಧ್ಯಕ್ಷ ಮತ್ತಿಕೆರೆ ಜಯರಾಮು, ಜಿಲ್ಲಾಧ್ಯಕ್ಷ ಎಂ.ಎಚ್. ಪ್ರಕಾಶ್, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ನಂದಕುಮಾರ್, ಜೆಡಿಎಸ್ ತಾಲೂಕು ಅಧ್ಯಕ್ಷ ಬಿ.ನಾಗರಾಜು, ಬಿಎಂಆರ್​ಡಿ ಮಾಜಿ ಅಧ್ಯಕ್ಷ ಹೊನ್ನಿಗಾನಹಳ್ಳಿ ಶ್ರೀಕಂಠು, ಚನ್ನಪಟ್ಟಣ್ಣ ತಾಲೂಕು ಅಧ್ಯಕ್ಷ ಗುರುಮೂರ್ತಿ, ಮಾಗಡಿ ತಾಲೂಕು ಅಧ್ಯಕ್ಷ ಗಂಗಾಧರ್, ಜಿಲ್ಲಾ ಉಪಾಧ್ಯಕ್ಷ ಮಹಲಿಂಗಯ್ಯ, ಕನಕಪುರ ತಾಲೂಕು ಅಧ್ಯಕ್ಷ ಕೆ. ಕಬ್ಬಾಳಯ್ಯ ಮತ್ತಿತರರಿದ್ದರು. ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

 

Leave a Reply

Your email address will not be published. Required fields are marked *

Back To Top