Thursday, 18th January 2018  

Vijayavani

ಹಿರಿಯ ನಟ ನಿರ್ದೇಶಕ ಕಾಶಿನಾಥ್ ಇನ್ನಿಲ್ಲ - ಬೆಂಗಳೂರಿನ ಶಂಕರ ಕ್ಯಾನ್ಸರ್​ ಆಸ್ಪ್ರೆಯಲ್ಲಿ ಕೊನೆಯುಸಿರು- ಕಳಚಿದ ಅನುಭವದ ಕೊಂಡಿ        ಡೈರೆಕ್ಟರ್​ ಎಪಿ ಅರ್ಜುನ್​ ಕಚೇರಿಯಲ್ಲಿ ಕಳ್ಳತನ - ಯಶ್​ ಬರ್ತಡೇ ದಿನ ಕೃತ್ಯ - ಮಾಜಿ ಕಾರು ಡ್ರೈವರ್ ವಿರುದ್ಧ ಅನುಮಾನದ ಹುತ್ತ         ಒಂಟಿ ಮಹಿಳೆಗೆ ಜಡೆ ಹಿಡಿದು ಥಳಿತ - ಕೊಪ್ಪಳ ಬಸ್​ಸ್ಟಾಪ್​ನಲ್ಲಿ ಪುರುಷರ ಅಟ್ಟಹಾಸ - ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್         ನೈಂಟಿ ಕೊಡ್ತೇವೆ ಅಂತ ಹರಕೆ ಹೊರ್ತಾರೆ ಭಕ್ತರು - ದೇವರ ಹೆಸರಲ್ಲಿ ಸಾಮೂಹಿಕ ಮದ್ಯಾರಾಧನೆ - ಕುಣಿಗಲ್‍ನ ಒಡೇಭೈರವನಿಗೆ ಬ್ರಾಂದಿ ವಿಸ್ಕಿಯೇ ನೈವೇದ್ಯ        ಕೃಷ್ಣನಗರಿಯಲ್ಲಿ ಪರ್ಯಾಯ ಸಂಭ್ರಮ - ಕೃಷ್ಣಪೂಜೆ ನೆರವೇರಿಸಿದ ಪಲಿಮಾರು ಶ್ರೀಗಳು - ಅದ್ಧೂರಿಯಿಂದ ಸರ್ವಜ್ಞ ಪೀಠಾರೋಹಣ       
Breaking News :

ಉದ್ಯೋಗಕ್ಕೆ ಆಶಾದೀಪ

Wednesday, 04.10.2017, 3:01 AM       No Comments

ಧಾರವಾಡ: ಸರ್ಕಾರ ಆಯೋಜಿಸುವ ಉದ್ಯೋಗ ಮೇಳಗಳಲ್ಲಿ ಪಾಲ್ಗೊಳ್ಳುವ ಖಾಸಗಿ ಕಂಪನಿಗಳು ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ‘ಆಶಾದೀಪ’ಯೋಜನೆಯನ್ನು ರಾಜ್ಯೋತ್ಸವ ಕೊಡುಗೆಯಾಗಿ ರಾಜ್ಯ ಸರ್ಕಾರ ಜಾರಿಗೊಳಿಸಲಿದೆ. ಈ ಮೇಳಗಳಲ್ಲಿ ಉದ್ಯೋಗ ಪಡೆಯುವ ಕನ್ನಡಿಗ ನೌಕರರ ಸಂಬಳದ ಶೇ.16ರಿಂದ 18 ವೇತನವನ್ನು ಎರಡು ವರ್ಷದವರೆಗೆ ಸರ್ಕಾರವೇ ಭರಿಸಲಿದೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾರ್ವಿುಕ ಸಚಿವ ಸಂತೋಷ್ ಲಾಡ್, ‘ಆಶಾದೀಪ’ ಯೋಜನೆಯಡಿ ಉದ್ಯೋಗ ಕಲ್ಪಿಸುವುದು ಸರ್ಕಾರದ ಉದ್ದೇಶ. ಈ ಮೂಲಕ ಕನ್ನಡಿಗ ನಿರುದ್ಯೋಗಿ ಯುವಕರಿಗೆ ರಾಜ್ಯೋತ್ಸವ ಕೊಡುಗೆ ನೀಡಲಾಗುವುದು. ಯೋಜನೆಯ ರೂಪುರೇಷೆ ಅಂತಿಮ ಗೊಳಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.

ಕಾರ್ವಿುಕ ಸಹಾಯಹಸ್ತ: ಕಾರ್ವಿುಕರ ಕಲ್ಯಾಣಕ್ಕಾಗಿ ಅಂಬೇಡ್ಕರ್ ಕಾರ್ವಿುಕ ಸಹಾಯಹಸ್ತ ಯೋಜನೆಯನ್ನು ಧಾರವಾಡ, ಬಳ್ಳಾರಿ, ಚಿತ್ರದುರ್ಗ, ಗದಗ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಲಾಡ್ ಹೇಳಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರು ಕಾರ್ವಿುಕ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸಿದ 75ನೇ ವರ್ಷಾಚರಣೆ ಪ್ರಯುಕ್ತ ‘ಅಂಬೇಡ್ಕರ್ ಕಾರ್ವಿುಕ ಸಹಾಯಹಸ್ತ ಯೋಜನೆ’ ಜಾರಿಗೆ ತರಲಾಗುತ್ತಿದೆ. ಇದರಡಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ವಿುಕರ ನೋಂದಣಿಗೆ ವಿಶೇಷ ಅಭಿಯಾನ ನಡೆಸಲಾಗುವುದು ಎಂದರು.

ಪ್ರತಿ ನೋಂದಾಯಿತ ಕಾರ್ವಿುಕರಿಗೆ ಅಂಬೇಡ್ಕರ್ ಕಾರ್ವಿುಕ ಸಹಾಯಹಸ್ತ ಸ್ಮಾರ್ಟ್ ಕಾರ್ಡ್ ವಿತರಣೆ, ಪ್ರತಿ ಕುಟುಂಬಕ್ಕೆ ಅಡುಗೆ ಅನಿಲದ ಸಂಪರ್ಕ ಮತ್ತು ತ್ರೖೆಮಾಸಿಕ ಅನಿಲ ತುಂಬುವಿಕೆ, ಪ್ರಮುಖ ಶಸ್ತ್ರಚಿಕಿತ್ಸೆಗೆ 2 ಲಕ್ಷ ರೂ.ವರೆಗೆ ಹಾಗೂ ಆಸ್ಪತ್ರೆಯ ಖರ್ಚಿಗಾಗಿ 10 ಸಾವಿರ ರೂ., ಕಾರ್ವಿುಕರ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣಕ್ಕಾಗಿ 2 ಸಾವಿರ ರೂ., ಮಾಧ್ಯಮಿಕ ಶಿಕ್ಷಣಕ್ಕಾಗಿ 3 ಸಾವಿರ ರೂ., ಪ್ರೌಢಶಿಕ್ಷಣಕ್ಕಾಗಿ 6 ಸಾವಿರ ರೂ., ಪದವಿಪೂರ್ವ 6ರಿಂದ 8 ಸಾವಿರ ರೂ., ಪದವಿ ಹಾಗೂ ಉನ್ನತ ಶಿಕ್ಷಣಕ್ಕೆ 10 ಸಾವಿರ ರೂ., ವೈದ್ಯಕೀಯ ಶಿಕ್ಷಣಕ್ಕೆ 25 ಸಾವಿರ, ಪಿ.ಎಚ್​ಡಿಗಾಗಿ 20 ಸಾವಿರ ರೂ.ವರೆಗೆ ಕೊಡಲಾಗುವುದು ಎಂದರು.

Leave a Reply

Your email address will not be published. Required fields are marked *

Back To Top