Sunday, 22nd July 2018  

Vijayavani

ಶೀರೂರು ಶ್ರೀ ಸಾವಿನ ಹಿಂದೆ ರಮ್ಯಾ ಶೆಟ್ಟಿ ಕೈವಾಡ - ಗೋಡಂಬಿ ಜ್ಯೂಸ್ ಕುಡಿಸಿರೋ ಶಂಕೆ - ತನಿಖೆ ಚುರುಕುಗೊಳಿಸಿದ ಉಡುಪಿ ಪೊಲೀಸರು        ದೋಸ್ತಿ ಸರ್ಕಾರಕ್ಕೆ ಆಯುಷ್ಯ ಕಡಿಮೆ - ಜೆಡಿಎಸ್ ಜತೆ ಲೋಕ ಎಲೆಕ್ಷನ್​​ ಮೈತ್ರಿ ಬೇಡ - ತುಮಕೂರಿನಲ್ಲಿ ಮಾಜಿ ಶಾಸಕ ರಾಜಣ್ಣ ಅಪಸ್ವರ        ಡಿಸಿಎಂ ಪರಮೇಶ್ವರ್​ಗೆ ದೋಸ್ತಿ ಇಷ್ಟ - ದೊಡ್ಡಗೌಡರಿಗೆ ಆಗ್ತಿದೆಯಂತೆ ಕಷ್ಟ - ಲೋಕಸಭಾ ಮೈತ್ರಿಯಲ್ಲೇ ದೋಸ್ತಿ ಬಗ್ಗೆ ಎದ್ದಿದೆ ಗೊಂದಲ        ರಸ್ತೆಯಲ್ಲಿ ಬರ್ತಿದ್ದ ಬಾಲಕಿ ಮೇಲೆ ಹರಿದ ಕಾರು - ಪವಾಡ ಸದೃಶ್ಯ ರೀತಿಯಲ್ಲಿ ಪುಟಾಣಿ ಪಾರು - ಉತ್ತರ ಪ್ರದೇಶದಲ್ಲೊಂದು ಪವಾಡ        ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೂ ಸಂಚಕಾರ- ಹನುಮಂತ ಹುಟ್ಟಿದ ಸ್ಥಳ ಮುಜರಾಯಿ ಇಲಾಖೆ ವಶಕ್ಕೆ - ದೋಸ್ತಿ ಸರ್ಕಾರದ ಮತ್ತೊಂದು ವಿವಾದ        ಜಲಾಶಯದಿಂದ ತುಂಗಭದ್ರಾ ನದಿಗೆ ನೀರು - ಡ್ರೋಣ್ ಕಣ್ಣಲ್ಲಿ ಮನಮೋಹಕ ನೋಟ - ಎಲ್ಲೆಲ್ಲೂ ಹಸಿರ ಸಿರಿಯ ವೈಭವ       
Breaking News

ಉನ್ನತ ಶಿಕ್ಷಣ ಕಡ್ಡಾಯ ಸರ್ಕಾರದ ಉದ್ದೇಶ

Thursday, 21.09.2017, 3:00 AM       No Comments

ಕೋಲಾರ: ರಾಜ್ಯದಲ್ಲಿ ಉನ್ನತ ಶಿಕ್ಷಣ ಕಡ್ಡಾಯ ಗೊಳಿಸುವುದು ಸರ್ಕಾರದ ಉದ್ದೇಶ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ನಗರದ ಸಮೀಪ ನಿರ್ವಿುಸಿರುವ ಜಿಲ್ಲಾಡಳಿತ ಭವನ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದರು.

ಉತ್ತರ ವಿವಿ ನಿರ್ಮಾಣಕ್ಕೆ 300 ಕೋಟಿ ರೂ. ವೆಚ್ಚವಾಗಲಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಶಿಡ್ಲಘಟ್ಟ ಬಳಿ ವಿವಿ ಕಟ್ಟಡ ನಿರ್ವಿುಸುವ ಗುರಿ ಹೊಂದಲಾಗಿದೆ.

ರಾಜ್ಯದಲ್ಲಿ ಉನ್ನತ ಶಿಕ್ಷಣ ಪ್ರಮಾಣ ಶೇ.28ರಷ್ಟಿದ್ದು ಶೇ.48ಕ್ಕೆ ಏರಿಸುವುದು ಸರ್ಕಾರದ ಗುರಿ ಎಂದು ಹೇಳಿದರು.ವಿವಿಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಆರ್. ರಮೇಶ್​ಕುಮಾರ್, ಸಂಸದಕೆ.ಎಚ್. ಮುನಿಯಪ್ಪ, ಸಚಿವರಾದ ಕಾಗೋಡು ತಿಮ್ಮಪ್ಪ, ಕೃಷ್ಣ ಬೈರೇಗೌಡ, ಉಮಾಶ್ರೀ, ವಿವಿ ಕುಲಪತಿ ಕೆಂಪರಾಜು ಇನ್ನಿತರರು ಉಪಸ್ಥಿತರಿದ್ದರು.

 

ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ 1.96 ಲಕ್ಷ ವಿದ್ಯಾರ್ಥಿಗಳಿಗೆ ನವೆಂಬರ್​ನಲ್ಲಿ ಉಚಿತ ಲ್ಯಾಪ್​ಟಾಪ್ ವಿತರಿಸಲಾಗುವುದು.

| ಬಸವರಾಜ ರಾಯರೆಡ್ಡಿ ಉನ್ನತ ಶಿಕ್ಷಣ ಸಚಿವ

 

Leave a Reply

Your email address will not be published. Required fields are marked *

Back To Top