Monday, 23rd April 2018  

Vijayavani

ಬಾದಾಮಿ ಕಾಂಗ್ರಸ್​​​​​ನಲ್ಲಿ ಭಿನ್ನಮತ- ಚಿಮ್ಮನಕಟ್ಟಿ, ದೇವರಾಜ್​​ ಪಾಟೀಲ್​​ ಕೋಲ್ಡ್​ವಾರ್​- ಪ್ರತ್ಯೇಕ ಸಭೆಗೆ ದೇವರಾಜ್​​ ಪಾಟೀಲ್ ನಿರ್ಧಾರ        ಇನ್ನೂ ಐದು ವರ್ಷ ಕ್ಷೇತ್ರಕ್ಕೆ ಬರಲ್ಲ- ನಾನು ಬರದಿದ್ರೆ ನಿಂಗೇನು ತೊಂದರೆ- ಕಾರ್ಯಕರ್ತರ ಕೋರಿಕೆಗೆ ಸಂತೋಷ್​​ ಲಾಡ್​​ ದರ್ಪ        ಇಂದು ಬೆಂಗಳೂರಲ್ಲಿ ಅಂಬಿ ಸುದ್ದಿಗೋಷ್ಠಿ- ಚುನಾವಣಾ ಕಣದಿಂದ ಹಿಂದೆ ಸರಿದ ಅಂಬರೀಷ್​​​​- ಹೈಕಮಾಂಡ್​ಗೆ ಅಂಬಿ ಮಾಹಿತಿ        ಅಖಾಡದಲ್ಲಿ ಮತ್ತೆ ಒಂದಾದ ರೆಡ್ಡಿ ಬ್ರದರ್ಸ್​- ಕರುಣಾಕರರೆಡ್ಡಿಗೆ ಜನಾರ್ದನ ರೆಡ್ಡಿ ಸಾಥ್​- ಶಮನವಾಯ್ತು ಮುನಿಷು        ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರ- ಇಂದು ಹೈಕೋರ್ಟ್​​​ನಲ್ಲಿ ವಿಚಾರಣೆ- ಸಿಎಟಿ ವಿರುದ್ಧ ಕೋರ್ಟ್​​ ಮೆಟ್ಟಿಲೇರಿರೋ ಜಿಲ್ಲಾಧಿಕಾರಿ        ಸಿಜೆಐ ವಿರುದ್ಧ ಮಹಾಭಿಯೋಗ ಪ್ರಸ್ತಾಪ- ಉಪರಾಷ್ಟ್ರಪತಿಯಿಂದ ವಿಪಕ್ಷಗಳ ನಿರ್ಣಯ ತಿರಸ್ಕಾರ- ಕಾಂಗ್ರೆಸ್​ಗೆ ಮತ್ತೆ ಮುಖಭಂಗ       
Breaking News

ಎನ್​ಆರ್​ಐ ಲುಕ್​ನಲ್ಲಿ ಸಂಜನಾ

Friday, 21.04.2017, 3:02 AM       No Comments

ಬೆಂಗಳೂರು: ನಟ ಅನಿರುದ್ಧ ನಟನೆಯ ‘ರಾಜಸಿಂಹ’ ಚಿತ್ರದಲ್ಲಿ ಸಂಜನಾ ಗಲ್ರಾನಿ ನಾಯಕಿಯಾಗಿ ನಟಿಸಲಿದ್ದಾರೆ ಎಂಬ ಮಾಹಿತಿ ಈ ಹಿಂದೆಯೇ ಬಹಿರಂಗಗೊಂಡಿತ್ತು. ಇದೀಗ ಅದು ಅಧಿಕೃತಗೊಂಡಿದೆ. ಸಂಜನಾ ‘ರಾಜಸಿಂಹ’ ಶೂಟಿಂಗ್​ನಲ್ಲಿ ಭಾಗವಹಿಸಿದ್ದಾರೆ. ಇದೇ ಮೊದಲ ಬಾರಿಗೆ ಎನ್​ಆರ್​ಐ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಅವರು, ಚಿತ್ರದಲ್ಲಿ ಆರ್ಕಿಟೆಕ್ಟ್ ಆಗಿರುತ್ತಾರಂತೆ.

‘ನನ್ನ ಕರಿಯರ್​ನಲ್ಲಿ ಎನ್​ಆರ್​ಐ ಪಾತ್ರ ಮಾಡುತ್ತಿರುವುದು ಇದೇ ಮೊದಲು. ಸಾಮಾನ್ಯವಾಗಿ ವಿದೇಶಗಳಲ್ಲಿ ಓದಿದವರು ಅಲ್ಲಿಯೇ ದುಡಿಯುತ್ತಾರೆ. ಅವರ ಪ್ರತಿಭೆಯನ್ನು ಆ ದೇಶಗಳ ಅಭಿವೃದ್ಧಿಗೆ ಬಳಸುತ್ತಾರೆ. ಆದರೆ ಈ ಪಾತ್ರ ಹಾಗಲ್ಲ. ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿದ್ದರೂ, ತನ್ನ ದೇಶಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ಉದ್ದೇಶದಿಂದ ಭಾರತಕ್ಕೆ ಬಂದಿರುತ್ತಾಳೆ. ಈ ರೀತಿಯಾದ ಸಂದೇಶವನ್ನು ನನ್ನ ಪಾತ್ರದ ಮೂಲಕ ನಿರ್ದೇಶಕರು ನೀಡಿದ್ದಾರೆ’ ಎಂದು ಪಾತ್ರದ ಬಗ್ಗೆ ಮಾಹಿತಿ ನೀಡುತ್ತಾರೆ ಸಂಜನಾ.

ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಕೆಂಗೇರಿ, ಮೈಸೂರು ಮುಂತಾದ ಕಡೆಗಳಲ್ಲಿ ಸಾಗುತ್ತಿದೆ. ಸುಮಾರು 20 ದಿನ ಸಂಜನಾ ಶೂಟಿಂಗ್​ನಲ್ಲಿ ಭಾಗವಹಿಸಲಿದ್ದಾರೆ. ಇದಿಷ್ಟು ‘ರಾಜಸಿಂಹ’ದ ವಿಚಾರವಾದರೆ, ಈಗಾಗಲೇ ನಟಿಸಿರುವ ಒಂದಷ್ಟು ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. 2012ರಲ್ಲಿ ತೆರೆಕಂಡು ಸೂಪರ್ ಹಿಟ್ ಎನಿಸಿಕೊಂಡಿದ್ದ ‘ದಂಡುಪಾಳ್ಯ’ ಚಿತ್ರದ ಸೀಕ್ವೆಲ್​ನಲ್ಲೂ ಸಂಜನಾ ಬಣ್ಣ ಹಚ್ಚಿದ್ದಾರೆ. ಈಗ ಪಾರ್ಟ್ 2ರ ಚಿತ್ರೀಕರಣ ಮುಕ್ತಾಯವಾಗಿದ್ದು, ಪಾರ್ಟ್ 3ರಲ್ಲೂ ಅವರು ಕಾಣಿಸಿಕೊಳ್ಳಲಿದ್ದಾರಂತೆ. ಈ ಚಿತ್ರ ಕನ್ನಡ-ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರೀಕರಣವಾಗಲಿದೆ.

ಅಲ್ಲದೆ, ಟಾಲಿವುಡ್​ನ ಖ್ಯಾತ ಹಾಸ್ಯನಟ ಸುನೀಲ್ ನಾಯಕರಾಗಿರುವ ಹೊಸ ತೆಲುಗು ಚಿತ್ರದಲ್ಲೂ ಸಂಜನಾ ಮುಖ್ಯಪಾತ್ರ ನಿಭಾಯಿಸುತ್ತಿದ್ದಾರೆ. ಈ ಚಿತ್ರದ ಬಹುತೇಕ ಚಿತ್ರೀಕರಣ ವಿದೇಶದಲ್ಲಿ ನಡೆಯಲಿರುವುದು ವಿಶೇಷ. ಕನ್ನಡ-ತೆಲುಗು ನಂತರ ಮಲಯಾಳಂ ಕಡೆಗೂ ಮುಖ ಮಾಡಿರುವ ಸಂಜನಾಗೆ ಅಲ್ಲಿಯೂ ಭರ್ಜರಿ ಅವಕಾಶವೊಂದು ದೊರೆತಿದೆ. ‘ಜನ್ನತ್’ ಶೀರ್ಷಿಕೆಯ ಹೊಸ ಸಿನಿಮಾದಲ್ಲೂ ಅವರು ನಟಿಸಿದ್ದು, ಶೀಘ್ರದಲ್ಲೇ ಆ ಚಿತ್ರ ತೆರೆಗೆ ಬರುವ ಸಾಧ್ಯತೆಗಳಿವೆ. ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ಸಂಜನಾ ಸಖತ್ ಬಿಜಿಯಾಗಿದ್ದು, ಸದ್ಯ ಕನ್ನಡದಲ್ಲಿ ‘ರಾಜಸಿಂಹ’, ‘ಚಾಕೋಲೇಟ್ ಬಾಯ್’ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

 ಒಟ್ಟೊಟ್ಟಿಗೆ ಇಷ್ಟೊಂದು ಸಿನಿಮಾಗಳಲ್ಲಿ ಕೆಲಸ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಪ್ರತಿ ಚಿತ್ರದಲ್ಲೂ ವಿಭಿನ್ನ ಪಾತ್ರ ಮಾಡುತ್ತಿರುವುದಕ್ಕೆ ಖುಷಿ ಇದೆ.

| ಸಂಜನಾ, ನಟಿ

Leave a Reply

Your email address will not be published. Required fields are marked *

Back To Top