Friday, 15th December 2017  

Vijayavani

1. ಸನ್ನಿ ನೈಟ್​ಗೆ ವ್ಯಾಪಕ ವಿರೋಧ ಹಿನ್ನೆಲೆ- ಕಾರ್ಯಕ್ರಮ ರದ್ದುಗೊಳಿಸಿದ ರಾಜ್ಯ ಸರ್ಕಾರ- ಸಾವಿರಾರು ಅಭಿಮಾನಿಗಳಿಗೆ ನಿರಾಸೆ 2. ಆಟೋ ಮತ್ತು ಕಾರಿನ ಮೇಲೆ ಟಿಪ್ಪರ್ ಪಲ್ಟಿ- ಸ್ಥಳದಲ್ಲೇ ಮೂವರ ದುರ್ಮರಣ – ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ 3. ಶನಿಮುಖಿ ಸುನೀಲ್​ಗೆ ಸುಪಾರಿ ಕೇಡು- ವಾರದ ಅಚ್ಚರಿಯಲ್ಲಿ ಕ್ರೈಂ ವರದಿ ಕಿಂಗ್ ಲೇಖನ – ಇನ್ನೂ ಬರೆಯೋದು ಇದೆ ಎಂದ ಬೆಳಗೆರೆ 4. ಜಿಲ್ಲಾಧ್ಯಕ್ಷರ ಬದಲಾವಣೆಗೆ ಪಟ್ಟು- ಜೆಡಿಎಸ್ ಸಭೆಯಲ್ಲಿ ಮಾರಾಮಾರಿ- ಬಾಗಲಕೋಟೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು 5. ಗುಜರಾತ್ ವಿಧಾನಸಭೆಯಲ್ಲಿ ಯಾರು ಗೆಲ್ತಾರೆ- ನಾಯಿ ಬೊಗಳುತೈತೆ ಭವಿಷ್ಯ – ವೈರಲ್ ಆಯ್ತು ಬೌಬೌ ವಿಡಿಯೋ
Breaking News :

ಎರಡಕ್ಕಿಂತ ಹೆಚ್ಚು ಮಕ್ಕಳ ದತ್ತು ಪಡೆಯಬಹುದು

Wednesday, 11.10.2017, 3:01 AM       No Comments

ಧಾರವಾಡ: ಮಕ್ಕಳಿಲ್ಲದ ದಂಪತಿ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದಾಗ ಹೆಣ್ಣು- ಗಂಡು ಎಂದು ಭೇದ ಮಾಡದೆ ಎರಡಕ್ಕಿಂತ ಹೆಚ್ಚು ಅನಾಥ ಮಕ್ಕಳನ್ನು ದತ್ತು ಪಡೆಯಬಹುದು ಎಂದು ಇಲ್ಲಿನ ಹೈಕೋರ್ಟ್ ಪೀಠ ಮಂಗಳವಾರ ಮಹತ್ವದ ಆದೇಶ ಹೊರಡಿಸಿದೆ.

ಬೆಳಗಾವಿ ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಅಮೆರಿಕ ಮೂಲದ ದಂಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಶ್ರೀನಿವಾಸ ಹರೀಶಕುಮಾರ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

ಅರ್ಜಿದಾರರು ವಿದೇಶಿ ಮೂಲದವರಾದರೂ ಆರ್ಥಿಕವಾಗಿ ಸದೃಢರಾಗಿದ್ದು, ಇನ್ನೊಂದು ಹೆಣ್ಣು ಮಗುವನ್ನು ದತ್ತು ಪಡೆಯಬಹುದು. ಅಲ್ಲದೇ ಕೇಂದ್ರ ಸರ್ಕಾರ 2015ರಲ್ಲಿ ಹೊಸದಾಗಿ ರೂಪಿಸಿರುವ ನಿಯಮಾವಳಿಗೆ ಅನುಗುಣವಾಗಿ ಮಕ್ಕಳಿಲ್ಲದ ದಂಪತಿ ನಾಲ್ಕು ಮಕ್ಕಳವರೆಗೆ ದತ್ತು ಪಡೆಯಬಹುದು. ಅದಕ್ಕೆ ಅರ್ಜಿದಾರರು ಅರ್ಹರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ನೊಂದು ಮಗುವನ್ನು ದತ್ತು ಪಡೆಯಬಹುದು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ರಿಟ್ ಅರ್ಜಿಯನ್ನು ಎತ್ತಿಹಿಡಿದಿದೆ.

ಭಾರತೀಯರು ದತ್ತು ಪಡೆಯಲು ಮುಂದೆ ಬಾರದೇ ಇದ್ದಾಗ, ವಿದೇಶಿ ದಂಪತಿಗಳು ಅರ್ಜಿ ಸಲ್ಲಿಸಿದರೆ ಅವರು ಅನಾಥ ಮಗುವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಸರ್ಕಾರ ರೂಪಿಸಿರುವ ನಿಯಮಾವಳಿಯಲ್ಲಿದೆ ಎಂದು ಅರ್ಜಿದಾರರ ಪರ ವಕೀಲ ಸಂಗ್ರಾಮ ಕುಲಕರ್ಣಿ ತಿಳಿಸಿದರು.

ಏನಿದು ಪ್ರಕರಣ?

ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದಲ್ಲಿ 2014ರ ಏ. 5ರಂದು ಕಸದ ತೊಟ್ಟಿಯಲ್ಲಿ ಅನಾಥ ಹೆಣ್ಣು ಶಿಶು ಸಿಕ್ಕಿತ್ತು. ಅದನ್ನು ಬೆಳಗಾವಿಯ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನಕ್ಕೆ ಸೇರಿಸಿ, ಮಂಜುಳಾ ಎಂದು ಹೆಸರು ಇಡಲಾಗಿತ್ತು. ಈ ಮಗುವನ್ನು ದತ್ತು ಪಡೆಯಲು ಅಮೆರಿಕ ಮೂಲದ ಸಿ. ವರ್ಗಿಸ್ ಎಂಬ ದಂಪತಿ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರು ಈ ಮೊದಲೇ ಹೆಣ್ಣು ಮಗುವನ್ನು ದತ್ತು ಪಡೆದಿದ್ದಾರೆ ಎಂದು ಆಶ್ರಮದ ಸಮಿತಿ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ವಿಚಾರಣೆ ಮಾಡಿದ್ದ ಬೆಳಗಾವಿ ನ್ಯಾಯಾಲಯ, ವರ್ಗಿಸ್ ದಂಪತಿ ಈಗಾಗಲೇ ಒಂದು ಹೆಣ್ಣು ಮಗುವನ್ನು ದತ್ತು ಪಡೆದುಕೊಂಡಿದ್ದಾರೆ. ಆದ್ದರಿಂದ ಇನ್ನೊಂದು ಹೆಣ್ಣು ಮಗುವನ್ನು ದತ್ತು ಪಡೆಯಲು ಅರ್ಹರಲ್ಲ ಎಂದು ಆದೇಶ ನೀಡಿತ್ತು. ಅದನ್ನು ಪ್ರಶ್ನಿಸಿ ದಂಪತಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅಮೆರಿಕದ ವರ್ಗಿಸ್ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಅವರ ಪತ್ನಿ ಅಮೆರಿಕದಲ್ಲಿ ಸ್ವ ಉದ್ಯೋಗ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

Back To Top