Thursday, 21st June 2018  

Vijayavani

ಮೈತ್ರಿ ಸರ್ಕಾರದಲ್ಲಿ ಮತ್ತೆ ತಾರತಮ್ಯತೆ - ರೇವಣ್ಣ ಕಾರ್​​​ಗೆ ಗೇಟ್​​ ಓಪನ್​​, ದೇಶಪಾಂಡೆಗೆ ನಟರಾಜ ಸರ್ವಿಸ್​​        ಅಂದು ಹೇಳಿದ್ದೊಂದು.. ಇಂದು ಮಾಡಿದ್ದೊಂದು - ಸಂಡೂರಿನಲ್ಲಿ ಕೊಟ್ಟು ಮಾತು ಮರೆತ ಸಿಎಂ - ಮತ್ತೆ ಗಣಿಗಾರಿಕೆಗೆ ಅವಕಾಶ        ಡಿಕೆಶಿ ಡೈರಿಯಲ್ಲಿ ಕೆಜಿ ಕೋಡ್​ ವಿಚಾರ - ದೆಹಲಿಯಿಂದ ಆಗಮಿಸಿದ ಇಡಿ ತಂಡ - ಡಿಕೆಶಿ ಸೇರಿ ಐವರು ವಿರುದ್ಧ ಇಡಿ FIR ಸಾಧ್ಯತೆ        ಶಕ್ತಿ ಭವನದಲ್ಲಿ ಬಜೆಟ್​​​ ಪೂರ್ವಭಾಗಿ ಸಭೆ - ಸಣ್ಣ ನೀರಾವರಿ ಇಲಾಖೆ ಜತೆ ಸಿಎಂ ಚರ್ಚೆ - ಅನುದಾನ ಭರವಸೆ ನೀಡಿದ ಎಚ್​ಡಿಕೆ        ಬಿಜಿಎಸ್​ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ - ನಡೆದಾಡುವ ದೇವರ ಕಾಣಲು ಗಣ್ಯರ ದಂಡು - ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​​ವೈ        ಜಿಲ್ಲಾಸ್ಪತ್ರೆಯಲ್ಲಿ ಅನಾಥವಾಯ್ತು ಕಂದಮ್ಮ - ಶಸ್ತ್ರಚಿಕಿತ್ಸೆಗೆ ಬಂದು ಮಗು ಬಿಟ್ಟೋದ ಹೆತ್ತಮ್ಮ - ರೋಧಿಸುತ್ತಿದೆ 3 ತಿಂಗಳ ಕೂಸು       
Breaking News

ಎರಡು ಅಪಘಾತ; ಐವರ ದುರ್ಮರಣ

Monday, 11.06.2018, 3:01 AM       No Comments

ಗಂಗಾವತಿ: ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾನುವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಐವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಶ್ರೀಪುರಂ ಜಂಕ್ಷನ್ ಬಳಿ ಭಾನುವಾರ ಸಂಜೆ ವಿದ್ಯುತ್ ಕಂಬ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಉರುಳಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಗಾವತಿ ತಾಲೂಕಿನ ಸುಳೆಕಲ್ಲ ಗ್ರಾಮದ ಕೂಲಿ ಕಾರ್ವಿುಕರಾದ ರಮೇಶ (25), ನಾಗರಾಜ (35), ಶರಣಪ್ಪ (19) ಸ್ಥಳದಲ್ಲೇ ಮೃತಪಟ್ಟರೆ, ಮಲ್ಲಿಕಾರ್ಜುನ (30) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಗಾಯಗೊಂಡ ಮೌಲಾಸಾಬ್, ಹನು ಮೇಶ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಸಲಮರಿ ಕ್ಯಾಂಪ್​ನಿಂದ ಸಿಂಧನೂರುವರೆಗೆ ವಿದ್ಯುತ್ ಕಂಬ ಅಳವಡಿಕೆ ಕಾರ್ಯ ನಡೆದಿದ್ದು, ಇದಕ್ಕಾಗಿ ಟ್ರ್ಯಾಕ್ಟರ್​ನಲ್ಲಿ ವಿದ್ಯುತ್ ಕಂಬ ಸಾಗಿಸುವಾಗ ಅಪಘಾತ ಸಂಭವಿಸಿದೆ. ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೇತುವೆಗೆ ಕಾರು ಡಿಕ್ಕಿ: ಕುಷ್ಟಗಿ ತಾಲೂಕಿನ ತಾವರಗೇರಾದ ಈದ್ಗಾ ಮೈದಾನದ ಹತ್ತಿರದ ಸೇತುವೆಗೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಳಿಯಾಳ ಹತ್ತಿರದ ಅಲ್ಲಾಪುರದ ವಿನಾಯಕ (27)ಮೃತ ಚಾಲಕ.

ಹುಬ್ಬಳ್ಳಿಯ ಹನುಮಂತಪ್ಪ, ಸವಿತಾ, ಮಹಾದೇವಿ, ರೇಣುಕಾ ಯಾದಗಿರಿಯ ಮಲ್ಲಯ್ಯ ದೇವರ ಹರಕೆ ತೀರಿಸಲು ಬಾಡಿಗೆ ಕಾರು ಮಾಡಿಕೊಂಡು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

Leave a Reply

Your email address will not be published. Required fields are marked *

Back To Top