Tuesday, 16th January 2018  

Vijayavani

ಮಹದಾಯಿ ಉಳಿಸಿಕೊಳ್ಳಲು ಏನು ಬೇಕಾದ್ರೂ ಮಾಡ್ತೀವಿ - ಮತ್ತೆ ಕ್ಯಾತೆ ತೆಗೆದ ಪಾಲ್ಯೇಕರ್​ - ಇತ್ತ ಗೋವಾ ಸಚಿವನ ವಿರುದ್ಧ ಪಾಟೀಲ್ ಕಿಡಿ        ನನ್ನ ವಿರುದ್ಧ ಸುಳ್ಳು ಕೇಸ್​ ದಾಖಲಿಸಲು ಯತ್ನ - ಕೇಂದ್ರ ಸರ್ಕಾರದ ವಿರುದ್ಧ ತೊಗಾಡಿಯಾ ಕಿಡಿ - ಕಣ್ಣೀರಿಟ್ಟು ಅಚ್ಚರಿ ಮೂಡಿಸಿದ ಫೈರ್ ಬ್ರ್ಯಾಂಡ್​        ಆನೆಗಳ ಹಿಂಡಿನಿಂದ ತಪ್ಪಿಸಿಕೊಂಡು ಬಾವಿಗೆ ಬಿದ್ದ ಮರಿ ಆನೆ - ಮರಿ ಮೇಲೆತ್ತಲು ಅರಣ್ಯ ಇಲಾಖೆ ಹರ ಸಾಹಸ - ತಮಿಳುನಾಡಿನ ರಾಯಕೋಟೆ ಬಳಿ ಘಟನೆ        ಭಾರತ ಪ್ರವಾಸದಲ್ಲಿ ಇಸ್ರೇಲ್​ ಪ್ರಧಾನಿ - ಮುಂಬೈಗೆ ಬಂದಿಳಿದ ಮುಂಬೈ ದಾಳಿ ಸಂತ್ರಸ್ತ ಮೋಶೆ - ಭಾರತಕ್ಕೆ ಬಂದಿದ್ದು ಖುಷಿ ತಂದಿದೆ ಎಂದ ಬಾಲಕ        ತಮಿಳುನಾಡಿನಲ್ಲಿ ಮುಂದುವರಿದ ಪೊಂಗಲ್ ಸಡಗರ - ಅಳಂಗನಲ್ಲೂರಿನಲ್ಲಿ ಜಲ್ಲಿಕಟ್ಟು ಕಿಕ್​ - ಸಿಎಂ, ಡಿಸಿಎಂ ರಿಂದ ಕ್ರೀಡೆ ಉದ್ಘಾಟನೆ       
Breaking News :

ಐಡಿಯಾಲಜಿ ಚುನಾವಣೆ

Sunday, 14.01.2018, 3:03 AM       No Comments

ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆ ನನ್ನ ಮತ್ತು ಯಡಿಯೂರಪ್ಪ ಅಥವಾ ನನ್ನ ಮತ್ತು ಮೋದಿ ನಡುವೆ ನಡೆಯವುದಿಲ್ಲ. ಬದಲಿಗೆ ಐಡಿಯಾಲಜಿ, ಕೋಮುವಾದ- ಜಾತ್ಯತೀತ ವಾದದ ಆಧಾರದಲ್ಲಿ ನಡೆಯುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಚುನಾವಣೆ ತಂತ್ರಗಾರಿಕೆ ರೂಪಿಸುವ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಇಲ್ಲ, ಜತೆಗೆ ಪ್ರಣಾಳಿಕೆಯಲ್ಲಿ ಹೇಳಿದ್ದನ್ನು ಈಡೇರಿಸಿದ್ದೇವೆ. ಪಕ್ಷದ ಎಲ್ಲ ನಾಯಕರೂ ನಮ್ಮ ಪ್ರಯತ್ನದ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದು, ಗೆಲ್ಲುವ ಆತ್ಮವಿಶ್ವಾಸದಿಂದಿದ್ದಾರೆ ಎಂದು ತಿಳಿಸಿದರು.

ನಾನೇಕೆ ಕ್ಷಮೆ ಕೇಳಬೇಕು

ಬಿಜೆಪಿ ಮತ್ತು ಸಂಘ ಪರಿವಾರದವರನ್ನು ಉಗ್ರವಾದಿಗಳು ಎಂದು ನಾನು ಹೇಳಿಲ್ಲ. ಮನುಷ್ಯತ್ವ ಇಲ್ಲದ ಹಿಂದುತ್ವ ಹಿಂದುತ್ವವೇ ಅಲ್ಲ ಎಂದಿದ್ದು ಎಂದರು. ಹಾಗೆಯೇ ಈ ವಿಚಾರದಲ್ಲಿ ನಾನೇಕೆ ಕ್ಷಮೆ ಕೇಳಬೇಕು ಎಂದು ಪ್ರಶ್ನೆಯೊಂದಕ್ಕೆ ಸಿಎಂ ಪ್ರತಿಕ್ರಿಯೆ ನೀಡಿದರು.

ಮೂರುವರೆ ತಾಸು ಸಭೆ

ಚುನಾವಣೆ ತಂತ್ರಗಾರಿಕೆ ರೂಪಿಸಲು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಸರ್ಕಾರ ಹಾಗೂ ಪಕ್ಷದ ಪ್ರಸ್ತುತ ಚಟುವಟಿಕೆ ಮತ್ತು ಮುಂದೇನು ಮಾಡಬೇಕೆಂಬ ಬಗ್ಗೆ ಚರ್ಚೆ ನಡೆದಿದ್ದು, ಪಕ್ಷದ ಅಧ್ಯಕ್ಷ ಮತ್ತು ಇತರೆ ನಾಯಕರಿಗೆ ಈವರೆಗಿನ ನಮ್ಮ ಚಟುವಟಿಕೆ ತೃಪ್ತಿ ತಂದಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದರು. ಮೂರೂವರೆ ತಾಸು ಸಭೆ ನಡೆದಿದ್ದು ಮುಂದಿನ ಅವಧಿಗೆ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆಂಬ ವಿಶ್ವಾಸ ಎಲ್ಲರಲ್ಲಿದೆ. ಚುನಾವಣೆಗೆ ಒಗ್ಗಟ್ಟಿನಿಂದ ಹೋಗುತ್ತೇವೆ ಎಂದರು.

ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ

ಕಾವೇರಿ ನೀರು ನೀಡುವಂತೆ ತಮಿಳುನಾಡು ಪತ್ರ ಬರೆದ ಕುರಿತು ಪ್ರತಿಕ್ರಿಯಿಸಿರುವ ಸಿಎಂ, ನಮಗೇ ನೀರಿಲ್ಲ. ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಮುಂದಿನ ತಿಂಗಳು ಕಾವೇರಿ ತೀರ್ಪು ಪ್ರಕಟವಾಗಲಿದ್ದು, ನಮ್ಮ ಪರವಾಗಿಯೇ ಬರುವ ನಿರೀಕ್ಷೆಯಿದೆ ಎಂದರು. ಮಹದಾಯಿ ವಿಷಯದಲ್ಲಿ ಶೀಘ್ರದಲ್ಲೆ ಸರ್ವಪಕ್ಷಗಳ ಸಭೆ ಕರೆದು ಎಲ್ಲರೊಂದಿಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಪ್ರಧಾನಿ ಮಧ್ಯಪ್ರವೇಶದಿಂದ ಮಾತ್ರ ಮಹಾದಾಯಿ ಸಮಸ್ಯೆಗೆ ಪರಿಹಾರ ಎಂಬುದನ್ನು ರಾಜ್ಯ ಬಿಜೆಪಿ ನಾಯಕರು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು ಎಂದರು.

Leave a Reply

Your email address will not be published. Required fields are marked *

Back To Top