Monday, 22nd January 2018  

Vijayavani

ಸರಹದ್ದು ಮೀರಿ ವರ್ತಿಸ್ತಿದೆ ಪಾಪಿ ಪಾಕ್​- ಐದು ದಿನಗಳಿಂದ ಗುಂಡಿನ ದಾಳಿಗೆ ಪರಿಸ್ಥಿತಿ ಉಲ್ಭಣ- ಗಡಿಯಲ್ಲಿ ಯುದ್ಧ ಸ್ಥಿತಿ ನಿರ್ಮಾಣ        ದಾವೋಸ್​ನಲ್ಲಿ 48ನೇ ವಿಶ್ವ ಆರ್ಥಿಕ ವೇದಿಕೆ ಸಮಾವೇಶ- ಸ್ವಿಸ್​ಗೆ ಹಾರಿದ ಪ್ರಧಾನಿ ಮೋದಿ- ವಿದೇಶಿ ಬಂಡವಾಳ ಸೆಳೆಯುವತ್ತ ಹಲವುಸೂತ್ರ        ಗ್ಯಾಸ್​ ರೀಫಿಲ್ಲಿಂಗ್ ವೇಳೆ ಲೀಕ್​ಆಗಿ ಹೊತ್ತಿಕೊಂಡ ಬೆಂಕಿ- ಆರು ಜನರಿಗೆ ಗಂಭೀರ ಗಾಯ- ಬೆಂಗಳೂರಿನಲ್ಲಿ ತಪ್ಪಿದ ಭಾರಿ ದುರಂತ        ಬೀದರ್​ನಲ್ಲಿ ವೀರಭದ್ರನ ಪಲ್ಲಕ್ಕಿ ಉತ್ಸವ- ಶಸ್ತ್ರಧಾರಣೆ ಮೂಲಕ ಭಕ್ತಿಯ ಪರಾಕಷ್ಠೆ- ಅತ್ತ ಮಂಗಳೂರಿನಲ್ಲಿ ಕಲವರದ ಪುತ್ತೂರು ಕಂಬಳ        ರಿಲೀಸ್​ ಡೇಟ್ ಫಿಕ್ಸ್​ ಆದ್ರೂ ಪದ್ಮಾವತ್​​ಗೆ ಸಂಕಷ್ಟ- 25ಕ್ಕೆ ಬಿಡುಗಡೆಯಾದ್ರೆ ದೇಶಾದ್ಯಂತ ಬಂದ್​- ಕರ್ಣಿಸೇನಾ ರಕ್ತಪಾತದ ಡೈಲಾಗ್​ಗೆ ಬೆವರಿದ ಬನ್ಸಾಲಿ       
Breaking News :

ಒಟ್ಟಿಗೆ ಪಾಸಾದ ಪಿಡಿಒ ದಂಪತಿ

Monday, 24.04.2017, 3:00 AM       No Comments

ಬೆಳಗಾವಿ: ಬೆಳಗಾವಿ ತಾಲೂಕಿನ ಬಡಸ ಕೆ.ಎಚ್. ಗ್ರಾಮದ ಪಿಡಿಒ ಅಶೋಕ ಮಿರ್ಜಿ ಹಾಗೂ ಅವರ ಪತ್ನಿ ಮಚ್ಛೆ ಪಿಡಿಒ ಭಾವನಾ ನಾಯಕ್ 2104ರ ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅಥಣಿ ತಾಲೂಕಿನ ಐಗಳಿ ಗ್ರಾಮದ ಅಶೋಕ ಮಿರ್ಜಿ, ಜಿಲ್ಲಾ ಸಶಸ್ತ್ರ ಮೀಸಲು ದಳದಲ್ಲಿ ಪೊಲೀಸ್ ಪೇದೆಯಾಗಿ ಸೇರಿ ಜತೆಗೇ ಎಂಎ ಪದವಿ ಪೂರ್ಣಗೊಳಿಸಿದರು. 2002ರಿಂದ 2011ರವರೆಗೆ ಪೊಲೀಸ್ ಪೇದೆಯಾಗಿ, 2011ರಿಂದ 2013ರವರೆಗೆ ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಜ್ಯೂನಿಯರ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, 2013ರಲ್ಲಿ ಪಿಡಿಒ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಪತ್ನಿ ಭವಾನಿ ಮಿರ್ಜಿ (ನಾಯ್ಕ) ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪ ಗ್ರಾಮದ ಹಸುಅಂಟೆ ಎಂಬ ಕುಗ್ರಾಮದವರು. 2010ರಿಂದ ಪಿಡಿಒ ಆಗಿದ್ದರು. ಈಗ ಪತಿ-ಪತ್ನಿ ಇಬ್ಬರೂ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿ ನೇಮಕವಾಗಿದ್ದಾರೆ.


ಜವಾನನ ಮಗ ಈಗ ತಹಸೀಲ್ದಾರ್

ಕಾನಹೊಸಹಳ್ಳಿ(ಬಳ್ಳಾರಿ): ತಂದೆ, ಪಶು ಆಸ್ಪತ್ರೆಯಲ್ಲಿ ಜವಾನನಾಗಿದ್ದಾರೆ. ಮಗನಿಗೆ ಅದೇ ಆಸ್ಪತ್ರೆಯಲ್ಲಿ ವೈದ್ಯನಾಗ ಬೇಕೆಂಬ ಕನಸು ಇತ್ತು. ಆದರೆ, ಸತತ ಓದಿನಿಂದ ಅದಕ್ಕೂ ಮೀರಿದ ಹುದ್ದೆ ಸಿಕ್ಕಿದೆ. ಚಿಕ್ಕಜೋಗಿಹಳ್ಳಿ ಗ್ರಾಮದ ವೆಂಕಟೇಶ್ ನಾಯ್ಕ ಅವರು ಕೆಎಎಸ್ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗಿದ್ದು, ವಿಜಯವಾಣಿಯ ವಿದ್ಯಾರ್ಥಿ ಮಿತ್ರದಿಂದ ಸಹಾಯವಾಯಿತು ಎಂದು ಪ್ರತಿಕ್ರಿಯಿಸಿದ್ದಾರೆ. ತಂದೆ ಆರ್. ನಾಗರಾಜ್ ಗ್ರಾಮದ ಪಶು ಆಸ್ಪತ್ರೆಯಲ್ಲಿ ಜವಾನರಾಗಿದ್ದಾರೆ.

Leave a Reply

Your email address will not be published. Required fields are marked *

Back To Top