Sunday, 23rd July 2017  

Vijayavani

1. ಕೊಪ್ಪಳದ ಖೋಟಾನೋಟು ಪ್ರಕರಣಕ್ಕೆ ಹೊಸ ಟ್ವಿಸ್ಟ್​- ಐವರಲ್ಲಿ ಮೂವರು ಆರೋಪಿಗಳು ಅರೆಸ್ಟ್- ವೈಯಕ್ತಿಕ ದ್ವೇಷಕ್ಕೆ ಬಲಿಯಾಗಿದ್ದ ಉಪನ್ಯಾಸಕ 2. ಮಳೆಗೆ ಹಾರಂಗಿ ಜಲಾಶಯ ಬಹುತೇಕ ಭರ್ತಿ- ಡ್ಯಾಂನಿಂದ 1,200 ಕ್ಯೂಸೆಕ್ ನೀರು ಬಿಡುಗಡೆ- ನದಿಪಾತ್ರದ ಜನರಿಗೆ ಎಚ್ಚರದಿಂದಿರಲು ಸೂಚನೆ 3. ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶ್ವಕರ್ಮ ಸಮಾವೇಶ- ಸಮುದಾಯದಿಂದ ಬಿಎಸ್​ವೈಗೆ ಸನ್ಮಾನ- ಬಿಜೆಪಿ ಹಲವು ಮುಖಂಡರು ಹಾಜರ್‌ 4. ಕಾಂಗ್ರೆಸ್​ ಕದ ತಟ್ಟಿದ ಜೆಡಿಎಸ್​ ರೆಬೆಲ್ಸ್​- ಇನ್ನೆರಡು ತಿಂಗಳಲ್ಲಿ ಸೇರ್ಪಡೆ ಖಚಿತ- ಇನ್ನೂ ಏಳು ಜನ ಬರ್ತಾರೆಂದು ಜಮೀರ್​ ಬಾಂಬ್​ 5. ವನಿತೆಯರ ವಿಶ್ವಕಪ್‌ನಲ್ಲಿ ಇಂಡೋ- ಇಂಗ್ಲೆಂಡ್‌ ಫೈಟ್- ಟಾಸ್‌ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ- ಟೀಂ ಇಂಡಿಯಾಗೆ ದೇಶ ಜನರಿಂದ ಆಲ್​ ದ ಬೆಸ್ಟ್​
Breaking News :

ಕಡೆಗೂ ಮೌನ ಮುರಿದ ರಾಜಮೌಳಿ

Friday, 21.04.2017, 3:02 AM       No Comments

ಬೆಂಗಳೂರು: ರಾಜ್ಯಾದ್ಯಂತ ‘ಬಾಹುಬಲಿ 2’ ಚಿತ್ರ ಬಿಡುಗಡೆ ಆಗಬಾರದೆಂದು ಕನ್ನಡಪರ ಹೋರಾಟಗಾರರು ಪ್ರತಿಭಟನೆ ಶುರುವಿಟ್ಟುಕೊಂಡಿದ್ದಾರೆ. ಏ. 28ರಂದು ಕರ್ನಾಟಕದಲ್ಲಿ ‘ಬಾಹುಬಲಿ 2’ ತೆರೆಕಾಣಿಸುವುದಕ್ಕಾಗಿ ನಿರ್ವಪಕರು ತೆರೆಮರೆಯ ಕಸರತ್ತು ಆರಂಭಿಸಿದ್ದಾರೆ. ಆದರೆ, ಕನ್ನಡಿಗರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಕಟ್ಟಪ್ಪ ಅಲಿಯಾಸ್ ಸತ್ಯರಾಜ್, ಕನ್ನಡಿಗರ ಕ್ಷಮೆ ಕೇಳುವವರೆಗೂ ಚಿತ್ರ ತೆರೆಕಾಣುವುದು ಬಹುತೇಕ ಅನುಮಾನ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ನಿರ್ದೇಶಕ ಎಸ್.ಎಸ್. ರಾಜಮೌಳಿ ‘ಬಾಹುಬಲಿ 2’ಗೆ ಅಡ್ಡಿ ಮಾಡಬೇಡಿ ಎಂದು ಕನ್ನಡಿಗರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಒಂದೂವರೆ ನಿಮಿಷದ ವಿಡಿಯೋ ಮಾಡಿರುವ ರಾಜಮೌಳಿ, ಕನ್ನಡದಲ್ಲಿಯೇ ಮಾತನಾಡಿದ್ದಾರೆ. ‘ನನ್ನ ಮೊದಲ ಚಿತ್ರದಿಂದ ಹಿಡಿದು ಕಳೆದ ‘ಬಾಹುಬಲಿ’ವರೆಗೂ ಕನ್ನಡಿಗರು ನನ್ನನ್ನು ಬೆಂಬಲಿಸಿದ್ದೀರಿ. ಈಗ ‘ಬಾಹುಬಲಿ 2’ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದಲ್ಲಿ ನಟಿಸಿರುವ ಸತ್ಯರಾಜ್ ಅವರ ಕೆಲವು ಮಾತುಗಳು ಕನ್ನಡಿಗರಿಗೆ ನೋವುಂಟು ಮಾಡಿವೆ. ಆದರೆ, ಸತ್ಯರಾಜ್ ಹೇಳಿಕೆಗೂ ನಮ್ಮ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಒಂದು ಪಾತ್ರದಲ್ಲಿ ನಟಿಸಿದ್ದಾರೆ ಮತ್ತು ಅದಕ್ಕಾಗಿ ಸಂಭಾವನೆ ಪಡೆದುಕೊಂಡಿದ್ದಾರೆ. ಒಬ್ಬ ವ್ಯಕ್ತಿಯ ವೈಯಕ್ತಿಕ ಅಭಿಪ್ರಾಯದಿಂದಾಗಿ, ಆತ ನಟಿಸಿರುವ ಸಿನಿಮಾಕ್ಕೆ ತೊಂದರೆ ಆಗಬಾರದೆಂಬುದು ನಮ್ಮ ಉದ್ದೇಶ’ ಎಂದಿದ್ದಾರೆ ರಾಜಮೌಳಿ.

 ಕನ್ನಡಿಗರು ಮೊದಲಿನಿಂದಲೂ ನಮ್ಮ ಮೇಲೆ ಪ್ರೀತಿ ತೋರಿದ್ದೀರಿ. ದಯವಿಟ್ಟು ಸತ್ಯರಾಜ್ ಮೇಲಿನ ಕೋಪವನ್ನು ‘ಬಾಹುಬಲಿ 2’ ಮೇಲೆ ತೋರಿಸಬಾರದೆಂದು ವಿನಂತಿಸಿಕೊಳ್ಳುತ್ತೇನೆ.

| ಎಸ್.ಎಸ್.ರಾಜಮೌಳಿ, ನಿರ್ದೇಶಕ

Leave a Reply

Your email address will not be published. Required fields are marked *

6 + seventeen =

Back To Top