Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :

ಕತಾರ್​ನಲ್ಲಿ ರಾಜ್ಯೋತ್ಸವ ಕಲರವ

Tuesday, 13.12.2016, 9:30 AM       No Comments

ಬೆಂಗಳೂರು: ಕತಾರ್ ಕರ್ನಾಟಕ ಸಂಘ ಆಯೋಜಿಸಿದ್ದ ನಲ್ಲಿರುವ ಕನ್ನಡಿಗರು 61ನೇ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವ ಮೂಲಕ ಕನ್ನಡ ಪ್ರೇಮ ಮೆರೆದರು. ಕಾರ್ಯಕ್ರಮವನ್ನು ನಟ ಶಿವರಾಜ್​ಕುಮಾರ್, ಹಿರಿಯ ಕವಿ ಡಾ. ದೊಡ್ಡರಂಗೇಗೌಡ, ಡಾ. ಪುತ್ತೂರಾಯ ಮತ್ತು ಉದ್ಘಾಟಿಸಿದರು.

ಬಳಿಕ ಮಾತನಾಡಿದ ದೊಡ್ಡರಂಗೇಗೌಡ, ಕೊಲ್ಲಿ ರಾಷ್ಟ್ರದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಆಚರಿಸುತ್ತಿರುವುದು ಶ್ಲಾಘನೀಯ ಎಂದರು.

ಗಣ್ಯರಿಗೆ ಗೌರವ: ಡಾ. ದೊಡ್ಡರಂಗೇ ಗೌಡ ಅವರಿಗೆ ‘ಕತಾರ್ ಕನ್ನಡ ಸಮ್ಮಾನ್’, ನಟ ಶಿವರಾಜ್​ಕುಮಾರ್ ಅವರಿಗೆ ‘ರಾಜ ಕಲಾರತ್ನ’ ಹಾಗೂ ಮತ್ತು ಸಂಗೀತ ಸಂಯೋಜಕ ಅಶ್ವಿನ್​ಗೆ ‘ರಾಗರತ್ನಾಕರ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೆಎಂಸಿಎ ಅಧ್ಯಕ್ಷ ನಿಯಾಜ್ ಅಹ್ಮದ್, ಕರ್ನಾಟಕ ಸಂಘದ ಸಲಹಾ ಸಮಿತಿ ಅಧ್ಯಕ್ಷ ದೀಪಕ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಗೀತಾ ಶಿವರಾಜ್​ಕುಮಾರ್ ಮತ್ತಿತರ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

Back To Top