Saturday, 18th November 2017  

Vijayavani

1. ಮುಷ್ಕರ ಬಿಕ್ಕಟ್ಟು ಇತ್ಯರ್ಥಕ್ಕೆ ಸಿಎಂ ಸಭೆ- ವೈದ್ಯಕೀಯ ಸಂಘದ ಜತೆ ಮೀಟಿಂಗ್- ಬಗೆಹರಿಯುತ್ತಾ ಖಾಸಗಿ ವಿಧೇಯಕ ಗೊಂದಲ 2. ಖಾಸಗಿ ವೈದ್ಯರ ಮುಷ್ಕರ ವಿಚಾರ- ಹೈಕೋರ್ಟ್‌ನಲ್ಲಿ ಪಿಐಎಲ್‌ ವಿಚಾರಣೆ- ಖಡಕ್‌ ಸೂಚನೆ ನೀಡುತ್ತಾ ಹೈಕೋರ್ಟ್..? 3. ಐದನೇ ದಿನ, ಬಲಿಯಾದವರು ಹನ್ನೊಂದು ಜನ- ವೈದ್ಯರ ಮುಷ್ಕರಕ್ಕೆ ಅಮಾಯಕರ ಸಾವು- ಪ್ರತಿಷ್ಠೆ ಬಿಡಿ, ಕರ್ತವ್ಯಕ್ಕೆ ಬನ್ನಿ 4. ಕಾವೇರಿ ಬಳಿಕ ತಮಿಳುನಾಡು ಮತ್ತೊಂದು ಕ್ಯಾತೆ- ಮೈಸೂರು ಪಾಕ ತಮ್ಮದೆಂದು ವಾದ- ಸೋಷಿಯಲ್ ಮೀಡಿಯಾದಲ್ಲಿ ಶುರು ಸಿಹಿ ಸಮರ 5. ಪತ್ರಕರ್ತೆ ಮೇಲೆ ಎರಗಿದ ಕಿಡಿಗೇಡಿ- ದೆಹಲಿ ಮೆಟ್ರೋ ಸ್ಟೇಷನ್‌ನಲ್ಲಿ ಲೈಂಗಿಕ ಕಿರುಕುಳ- ಸಿಸಿಟಿವಿ ಆಧರಿಸಿ ಆರೋಪಿ ಸೆರೆ
Breaking News :

ಕಾಡಾನೆ ಅಟ್ಟಲು ಕಾರ್ಯಾಚರಣೆ

Tuesday, 20.12.2016, 7:18 AM       No Comments

ಕುದೂರು/ ದಾಬಸ್​ಪೇಟೆ: ಮಾಗಡಿ ಮತ್ತು ನೆಲಮಂಗಲ ತಾಲೂಕಿನ ಲಕ್ಕಯ್ಯನಪಾಳ್ಯಕ್ಕೆ ಹೊಂದಿಕೊಂಡಿರುವ ವೀರಾಪುರ ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟಿರುವ ಐದು ಕಾಡಾನೆಗಳನ್ನು ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಅಟ್ಟಲು ದಸರಾ ಆನೆಗಳನ್ನು ಬಳಸಿಕೊಂಡು ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ಕಾರ್ಯಾಚರಣೆ ಆರಂಭಿಸಿದ್ದಾರೆ.

ನೂರಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಪಟಾಕಿ ಸಿಡಿಸಿ ಆನೆಗಳನ್ನು ಓಡಿಸಲು ಪ್ರಯತ್ನಿಸುತ್ತಿದ್ದಾರೆ. ಶಿವಗಂಗೆ ತಪ್ಪಲಿನಿಂದ ಆನೆಗಳನ್ನು ಓಡಿಸಿಕೊಂಡು ಬಂದು ಸಂಜೆಯ ವೇಳೆಗೆ ಮಾಗಡಿ ತಾಲೂಕಿನ ಕಾಚಕಲ್ಲಪ್ಪನ ಬೆಟ್ಟದ ಹಿಂಭಾಗದ ಲಕ್ಕಯ್ಯನಪಾಳ್ಯ ಕಾಡಿನಲ್ಲಿ ವಿರಮಿಸಲು ಬಿಡಲಾಗಿದೆ.

ಸಂಜೆವರೆಗೂ ಒಟ್ಟಾಗಿದ್ದ ಪುಂಡಾನೆಗಳು ನಂತರ ಹಿಂಡಿನಿಂದ ಬೇರ್ಪಟ್ಟಿವೆ. ಹೀಗಾಗಿ ಅವುಗಳನ್ನು ಕಾಡಿಗಟ್ಟುವ ಕೆಲಸ ಸವಾಲಾಗಿ ಪರಿಣಮಿಸಿದೆ.

ಕಾಡಾನೆಗಳಿಗೆ ಅರಿವಳಿಕೆ ಮದ್ದು ನೀಡಿ ಸೆರೆ ಹಿಡಿಯಲು ನಾಗರಹೊಳೆ ಅಭಯಾರಣ್ಯದ 31 ಅರಿವಳಿಕೆ ತಜ್ಞರನ್ನು ನಿಯೋಜಿಸಲಾಗಿದೆ. ಅರಿವಳಿಕೆ ತಜ್ಞರಿಗೆ ಹೊಸಕೋಟೆ, ದೊಡ್ಡಬಳ್ಳಾಪುರ, ರಾಮನಗರ, ಮಾಗಡಿ, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ನೆರವಾಗಲಿದ್ದಾರೆ.

Leave a Reply

Your email address will not be published. Required fields are marked *

Back To Top