Tuesday, 17th July 2018  

Vijayavani

ಕಾಂಗ್ರೆಸ್‌ ಕಿರುಕುಳದಿಂದಲೇ ಸಿಎಂ ಕಣ್ಣೀರು - ಕಾಂಗ್ರೆಸ್‌ ನೆಚ್ಚಿಕೊಂಡು ಹೋದ್ರೆ ಇದೇ ಸ್ಥಿತಿ - ಎಚ್​ಡಿಕೆ  ಕಣ್ಣೀರಿಗೆ ಜೇಟ್ಲಿ ಟಾಂಗ್‌        ವಾಣಿಜ್ಯ ಬ್ಯಾಂಕ್‌ನಲ್ಲಿನ ಚಾಲ್ತಿ ಸಾಲವೂ ಮನ್ನಾ - ಸಿಎಂ ನಿರ್ಧಾರ - ರೈತರಿಗೆ ಮತ್ತೊಂದು ಕೊಡುಗೆ ನೀಡಿದ ಮುಖ್ಯಮಂತ್ರಿ        ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಶಾಸಕರ ಪುತ್ರ - ಪ್ರಶ್ನಿಸಿದ ಪೇದೆಗೆ ಅವಾಚ್ಯ ಶಬ್ದಗಳಿಂದ ನಿಂದನೆ        ಬಂಗಾಳದಲ್ಲಿ ಮೋದಿ ರ್ಯಾಲಿ ವೇಳೆ ಅವಗಢ - ಪೆಂಡಾಲ್ ಕುಸಿದು 22 ಜನರಿಗೆ ಗಾಯ - ಆರೋಗ್ಯ ವಿಚಾರಿಸಿದ ಪ್ರಧಾನಿ ನಮೋ        ಕರಾವಳಿಯಲ್ಲಿ ಭಾರಿ ಮಳೆಯ ಅವಾಂತರ - ಕುಸಿದುಬಿತ್ತು ಭಟ್ಕಳದ ಬಸ್ ನಿಲ್ದಾಣ - ಹೊರ ಓಡಿದ ಪ್ರಯಾಣಿಕರು        ಕೆಆರ್​​ಎಸ್​​​ನಿಂದ ಭಾರಿ ಪ್ರಮಾಣದ ನೀರು - ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣ ಮುಳುಗಡೆ - ಧುಮ್ಮಿಕ್ಕುತ್ತಿದೆ ಹೊಗೇನಕಲ್ ಫಾಲ್ಸ್       
Breaking News

ಕಿರಿಯರಿಗೆ ನಾಳೆ ಆಸೀಸ್ ಚಾಲೆಂಜ್

Saturday, 13.01.2018, 3:02 AM       No Comments

ಬೇಓವಲ್(ನ್ಯೂಜಿಲೆಂಡ್): ಭವಿಷ್ಯದಲ್ಲಿ ಟೀಮ್ ಇಂಡಿಯಾದ ಬಾಗಿಲು ತಟ್ಟಲು ಪ್ರಮುಖ ವೇದಿಕೆಯಾಗಿರುವ 19 ವಯೋಮಿತಿಯ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಭಾನುವಾರ ಅಭಿಯಾನ ಆರಂಭಿಸಲಿದೆ. ಮೂರು ಬಾರಿಯ ಚಾಂಪಿಯನ್ ಹಾಗೂ ಹಾಲಿ ರನ್ನರ್​ಅಪ್ ಆಗಿರುವ ಕನ್ನಡಿಗ ರಾಹುಲ್ ದ್ರಾವಿಡ್ ಮಾರ್ಗದರ್ಶನದ ಭಾರತ ತಂಡ ಬಿ ಗುಂಪಿನ ಮೊದಲ ಸವಾಲಿನಲ್ಲಿ 3 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

ಅಭ್ಯಾಸ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿರುವ ಭಾರತ ತಂಡ ಅದೇ ಆತ್ಮವಿಶ್ವಾಸದಿಂದ ಕಣಕ್ಕಿಳಿಯಲಿದೆ. ಕಳೆದ ಆವೃತ್ತಿಯ ಪ್ರಶಸ್ತಿ ಹೋರಾಟದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋತಿರುವ ಇದೇ ದ್ರಾವಿಡ್ ಮಾರ್ಗದರ್ಶನದ ತಂಡ ಈ ಬಾರಿ ವಿಭಿನ್ನ ರೀತಿಯಲ್ಲಿ ಸಜ್ಜಾಗಿದೆ. ಮಲೇಷ್ಯಾದಲ್ಲಿ ನಡೆದ ಕಳೆದ ಏಷ್ಯಾಕಪ್​ನಲ್ಲಿ ನೇಪಾಳದಂಥ ದುರ್ಬಲ ತಂಡಗಳೆದುರು ಸೋತಿದ್ದ ಭಾರತಕ್ಕೆ ನ್ಯೂಜಿಲೆಂಡ್ ನೆಲದಲ್ಲಿ ಕಠಿಣ ಸವಾಲು ಎದುರಾಗಲಿದೆ. ಬಾಂಗ್ಲಾದಲ್ಲಿ ನಡೆದ ಕಳೆದ ಆವೃತ್ತಿಯಿಂದ ಹೊರಗುಳಿದಿದ್ದ ಆಸೀಸ್ ತಂಡ ಪರಿಚಯವಿರುವ ಪಿಚ್​ನಲ್ಲಿ ಮಿಂಚುವ ನಿರೀಕ್ಷೆಯಲ್ಲಿದೆ. -ಏಜೆನ್ಸೀಸ್

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ 1

ಆರಂಭ: ಭಾನುವಾರ ಬೆಳಗ್ಗೆ 6.15

ಭಾರತದ ಲೀಗ್ ಪಂದ್ಯಗಳು

ಜ. 14: ಆಸ್ಟ್ರೇಲಿಯಾ

ಜ.16: ಪಪುವಾ ನ್ಯೂಗಿನಿಯಾ

ಜ.19: ಜಿಂಬಾಬ್ವೆ

Leave a Reply

Your email address will not be published. Required fields are marked *

Back To Top