Monday, 19th February 2018  

Vijayavani

ನನ್ನ ಮಗನನ್ನ ನಾನೇ ಸರೆಂಡರ್​ ಮಾಡಿಸುತ್ತೇನೆ - ಪೊಲೀಸರಿಗೆ ಶೀಘ್ರವೇ ಒಪ್ಪಿಸುತ್ತೇನೆ - ಗೂಂಡಾ ನಲಪಾಡ್​​ ಕುರಿತು ಹ್ಯಾರಿಸ್​ ಪ್ರತಿಕ್ರಿಯೆ        ನಿನ್ನೆ ಚಿಕ್ಕವನು.. ಇಂದು ಬೆಳೆದ ಮಗ - ಬೈದ ನಂತರ ಮೊಬೈಲ್​ ಸ್ವಿಚ್​​ ಆಫ್​​ ಮಾಡ್ಕೊಂಡಿದ್ದ - ಕೇಸ್​ ಭೀತಿಯಲ್ಲಿ ಉಲ್ಟಾ ಹೊಡೆದ ಹ್ಯಾರಿಸ್​​        ರಾಜ್ಯದಲ್ಲಿ ಇಡೀ ದಿನ ಮೋದಿ ಮೇನಿಯಾ - ಮಧ್ಯಾಹ್ನ ಬಾಹುಬಲಿ ಸನ್ನಿಧಿಗೆ ಪ್ರಧಾನಿ - ಮತ್ತಷ್ಟು ಮೇಳೈಸಲಿದೆ ಮಹಾಮಜ್ಜನ        ಪರಿವರ್ತನಾ ರ‍್ಯಾಲಿಯಲ್ಲಿಂದು ಮೋದಿ ಅಬ್ಬರ - ಬಿಜೆಪಿಯಿಂದ ಗಣಪತಿ ಉಡುಗೊರೆ - ಮೈಸೂರು ಪೇಟ ತೊಡಿಸಿ ಸ್ವಾಗತ        ರೈತ ನಾಯಕ, ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ವಿಧಿವಶ - ವಿದೇಶದಿಂದ ಮಕ್ಕಳ ಬಂದ ಬಳಿಕ ಅಂತ್ಯಕ್ರಿಯೆ - ಕಂಬನಿ ಮಿಡಿದ ಗಣ್ಯರು       
Breaking News

ಕುಮಾರೇಶ್ವರ ಸ್ವಾಮೀಜಿ ಅಂಚೆಚೀಟಿ ಬಿಡುಗಡೆ

Saturday, 20.05.2017, 3:00 AM       No Comments

ಹುಬ್ಬಳ್ಳಿ: ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ತರುವ ಮೂಲಕ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಕೊಡುಗೆ ನೀಡಿರುವ ಲಿಂ. ಹಾನಗಲ್ ಕುಮಾರೇಶ್ವರ ಸ್ವಾಮೀಜಿ ಭಾವಚಿತ್ರವುಳ್ಳ ಅಂಚೆ ಬಿಡುಗಡೆ ಮಾಡಿದ್ದು ನನ್ನ ಸೌಭಾಗ್ಯ ಎಂದು ಕೇಂದ್ರ ಸಂವಹನ ಮತ್ತು ರೈಲ್ವೆ ಇಲಾಖೆ ಸಹಾಯಕ ಸಚಿವ ಮನೋಜ್ ಸಿನ್ಹಾ ಹೇಳಿದರು.

ನಗರದ ಸಾಂಸ್ಕೃತಿಕ ಭವನದಲ್ಲಿ ಶುಕ್ರವಾರ ಜರುಗಿದ ಹಾನಗಲ್ ಕುಮಾರೇಶ್ವರ ಸ್ವಾಮೀಜಿ ಭಾವಚಿತ್ರವುಳ್ಳ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಹಲವಾರು ಸಂತರು, ಸನ್ಯಾಸಿಗಳು, ಮಠಾಧೀಶರು ಸಮಾಜಕ್ಕೆ ತಮ್ಮ ಜೀವನವನ್ನೇ ಅರ್ಪಿಸಿದ್ದಾರೆ. ಮುಂದಿನ ಪೀಳಿಗೆಗೆ ಅವರ ಕುರಿತು ಜಾಗೃತಿ ಮೂಡಿಸುವಂತಹ ಇಂತಹ ಕಾರ್ಯಗಳು ನಡೆಯಬೇಕು ಎಂದರು.

ಮೂರುಸಾವಿರಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಶ್ರೀ ಅಭಿನವ ಸಿದ್ಧಾರೂಢ ಸ್ವಾಮೀಜಿ, ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್, ಸಂಸದ ಪ್ರಲ್ಹಾದ ಜೋಶಿ, ಉಪಸ್ಥಿತರಿದ್ದರು.

23ರಿಂದ ವಾರಾಣಸಿಗೆ ರೈಲು

ಹುಬ್ಬಳ್ಳಿಯಿಂದ ವಾರಾಣಸಿ ಮತ್ತು ಮೈಸೂರಿಗೆ ಮೇ. 23ರಿಂದ ರೈಲು ಸಂಚಾರ ಸೇವೆ ಆರಂಭಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ರೈಲ್ವೆ ಸಹಾಯಕ ಸಚಿವ ಮನೋಜ್ ಸಿನ್ಹಾ ತಿಳಿಸಿದರು. ಹುಬ್ಬಳ್ಳಿ-ಮಂಗಳೂರು ರೈಲು ಸಂಚಾರ ಕುರಿತಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳು ವುದಾಗಿಯೂ ಅವರು ಭರವಸೆ ನೀಡಿದರು.

Leave a Reply

Your email address will not be published. Required fields are marked *

Back To Top