Thursday, 20th September 2018  

Vijayavani

Breaking News

ಕೆಸರುಗದ್ದೆಯಂತಾದ ಬಸ್ ನಿಲ್ದಾಣ

Friday, 17.08.2018, 9:54 PM       No Comments

ಗಜೇಂದ್ರಗಡ: ಸಮೀಪದ ರಾಜೂರು ಗ್ರಾಮದ ಬಸ್ ನಿಲ್ದಾಣದ ಮುಂದಿನ ರಸ್ತೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗದೆ ಕೆಸರು ಗದ್ದೆಯಂತಾಗಿದ್ದು, ವಾಹನ ಸವಾರರು, ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಜಿಟಿಜಿಟಿ ಮಳೆಯಿಂದಾಗಿ ರಸ್ತೆ ಎರಡು ಪಕ್ಕದಲ್ಲಿ ನೀರು ನಿಂತಿದೆ. ವಿದ್ಯಾರ್ಥಿಗಳು ಕೆಸರಿನಲ್ಲೇ ಬಸ್ ಹತ್ತಬೇಕಾಗಿದೆ. ಅಲ್ಲದೆ, ಕೆಲ ದಿನಗಳ ಹಿಂದೆ ಕೇಬಲ್ ಅಳವಡಿಸಲು ಗುಂಡಿ ತೋಡಿದ್ದ ಮೊಬೈಲ್ ಕಂಪನಿಯವರು ಗುಂಡಿಗಳನ್ನು ಸಮರ್ಪಕವಾಗಿ ಮುಚ್ಚದ ಕಾರಣ ಗುಂಡಿಯಲ್ಲಿ ನೀರು ನಿಂತು ವಾಹನಗಳು ಸಿಲುಕಿ ಸವಾರರು ಪರದಾಡುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಗುಂಡಿಗಳನ್ನು ಮುಚ್ಚಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

 

Leave a Reply

Your email address will not be published. Required fields are marked *

Back To Top