Monday, 19th February 2018  

Vijayavani

ನನ್ನ ಮಗನನ್ನ ನಾನೇ ಸರೆಂಡರ್​ ಮಾಡಿಸುತ್ತೇನೆ - ಪೊಲೀಸರಿಗೆ ಶೀಘ್ರವೇ ಒಪ್ಪಿಸುತ್ತೇನೆ - ಗೂಂಡಾ ನಲಪಾಡ್​​ ಕುರಿತು ಹ್ಯಾರಿಸ್​ ಪ್ರತಿಕ್ರಿಯೆ        ನಿನ್ನೆ ಚಿಕ್ಕವನು.. ಇಂದು ಬೆಳೆದ ಮಗ - ಬೈದ ನಂತರ ಮೊಬೈಲ್​ ಸ್ವಿಚ್​​ ಆಫ್​​ ಮಾಡ್ಕೊಂಡಿದ್ದ - ಕೇಸ್​ ಭೀತಿಯಲ್ಲಿ ಉಲ್ಟಾ ಹೊಡೆದ ಹ್ಯಾರಿಸ್​​        ರಾಜ್ಯದಲ್ಲಿ ಇಡೀ ದಿನ ಮೋದಿ ಮೇನಿಯಾ - ಮಧ್ಯಾಹ್ನ ಬಾಹುಬಲಿ ಸನ್ನಿಧಿಗೆ ಪ್ರಧಾನಿ - ಮತ್ತಷ್ಟು ಮೇಳೈಸಲಿದೆ ಮಹಾಮಜ್ಜನ        ಪರಿವರ್ತನಾ ರ‍್ಯಾಲಿಯಲ್ಲಿಂದು ಮೋದಿ ಅಬ್ಬರ - ಬಿಜೆಪಿಯಿಂದ ಗಣಪತಿ ಉಡುಗೊರೆ - ಮೈಸೂರು ಪೇಟ ತೊಡಿಸಿ ಸ್ವಾಗತ        ರೈತ ನಾಯಕ, ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ವಿಧಿವಶ - ವಿದೇಶದಿಂದ ಮಕ್ಕಳ ಬಂದ ಬಳಿಕ ಅಂತ್ಯಕ್ರಿಯೆ - ಕಂಬನಿ ಮಿಡಿದ ಗಣ್ಯರು       
Breaking News

ಕೆ.ಎಸ್.ಈಶ್ವರಪ್ಪಗೆ ಜೀವ ಬೆದರಿಕೆ ಕರೆ

Wednesday, 06.09.2017, 3:00 AM       No Comments

ಶಿವಮೊಗ್ಗ: ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಮಂಗಳವಾರ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಅವರು ಸೆ.6ರಂದು ದೂರು ದಾಖಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ಶಿವಮೊಗ್ಗದಲ್ಲಿ ಹಿಂದು ಮಹಾಸಭಾ ಗಣೇಶ ವಿಸರ್ಜನೆ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಮನೆಯಲ್ಲಿ ಈಶ್ವರಪ್ಪ ಸಿದ್ಧರಾಗುತ್ತಿದ್ದರು. ಈ ವೇಳೆ ಅವರ ಮೊಬೈಲ್​ಗೆ ಕರೆ ಮಾಡಿದ ವ್ಯಕ್ತಿಯೊಬ್ಬ, ‘ಮೆರವಣಿಗೆಗೆ ತೆರಳಿದರೆ ನಿಮಗೆ ತೊಂದರೆ ತಪ್ಪಿದ್ದಲ್ಲ, ಹುಷಾರ್…‘ ಎಂದು ಏರುಧ್ವನಿಯಲ್ಲಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಇದಕ್ಕೆ ಪ್ರತಿಯಾಗಿ ‘ಎದುರು ಬಂದು ಮಾತನಾಡು‘ ಎಂದು ಈಶ್ವರಪ್ಪ ಹೇಳಿದಾಗ ಕರೆ ಕಡಿತ ಮಾಡಿದ್ದಾನೆ ಎನ್ನಲಾಗಿದೆ.

Leave a Reply

Your email address will not be published. Required fields are marked *

Back To Top