Friday, 21st September 2018  

Vijayavani

ಸಂಕಷ್ಟ ತಂದ ದಂಗೆ ಹೇಳಿಕೆ - ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು - ರಾಷ್ಟ್ರಪತಿಗಳಿಗೆ ಮಾಹಿತಿ ರವಾನೆ ಸಾಧ್ಯತೆ        ಸಿಎಂ ಬೇಜವಾಬ್ಧಾರಿ ಹೇಳಿಕೆಗೆ ರಾಜ್ಯಾದ್ಯಂತ ಖಂಡನೆ - ಬಿಜೆಪಿ ಕಾರ್ಯಕರ್ತರ ಪ್ರೊಟೆಸ್ಟ್​ - ಬಾಗಲಕೋಟೆಯಲ್ಲಿ ಬ್ಯಾನರ್​ ದಹನ        ಮಲೆನಾಡಲ್ಲಿ ಪ್ರವಾಹದ ಬೆನ್ನಲ್ಲೇ ಮತ್ತೊಂದು ಬರೆ - ನೆರೆ ಬಳಿಕ ಬತ್ತುತ್ತಿವೆ ನದಿಗಳು - ಆತಂಕದಲ್ಲಿ ಚಿಕ್ಕಮಗಳೂರು ಜನತೆ        ಶತಮಾನದ ಆಸ್ಪತ್ರೆಗೆ ಸರ್ಕಾರದ ಬೀಗ - ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಜಾಗ - ಉಡುಪಿಯಲ್ಲಿ ಉಚಿತ ಚಿಕಿತ್ಸೆ ಇನ್ನು ಮರೀಚಿಕೆ..?        ಮೈಸೂರಲ್ಲಿ ನಾಡಹಬ್ಬಕ್ಕೆ ತಯಾರಿ - ಮಾವುತರಿಗೆ ಜಿಲ್ಲಾಡಳಿತದ ಭೂರಿ ಭೋಜನ - ಕೇರಂ ಆಡಿ ಸಂತಸಪಟ್ಟ ಕಾವಾಡಿಗರು        ಹುಬ್ಬಳ್ಳಿಯಲ್ಲಿ ಅಷ್ಟವಿನಾಯಕ ಸ್ಪರ್ಧೆ - ಅಲಂಕಾರದಲ್ಲಿ ಹಿರೇಪೇಟೆಯ ವಿನಾಯಕ ಪ್ರಥಮ- ಗಾಂಧಿ ಚೌಕ್ ಗಣಪ ಉತ್ತಮ ವಿಗ್ರಹ       
Breaking News

ಖಾಸಗಿ ಬಸ್ ನಿಲ್ದಾಣ ಲೋಕಾರ್ಪಣೆಗೆ ಪಟ್ಟು

Tuesday, 12.06.2018, 1:32 PM       No Comments

ಚಿಕ್ಕಬಳ್ಳಾಪುರ: ಹೊಸ ಖಾಸಗಿ ಬಸ್ ನಿಲ್ದಾಣ ಲೋಕಾರ್ಪಣೆಗೊಳ್ಳದೆ ಹಾಳಾಗುತ್ತಿರುವ ಹಿನ್ನೆಲೆಯಲ್ಲಿ ಹೋರಾಟಗಾರರು ಸಾರ್ವಜನಿಕ ಸ್ಥಳದಲ್ಲಿ ಧಿಕ್ಕಾರದ ಭಿತ್ತಿಪತ್ರಗಳನ್ನು ಅಂಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೈರ್ಮಲ್ಯ ಕಾಪಾಡುವುದರ ಕುರಿತು ವ್ಯಾಪಕ ಜಾಗೃತಿ ಕಾರ್ಯಕ್ರಮ ಕೈಗೊಳ್ಳುತ್ತಿರುವ ಸ್ಥಳೀಯ ನಗರಸಭೆ ಅಧಿಕಾರಿಗಳು ತಮಗೆ ಸೇರಿದ ನಿಲ್ದಾಣ ಕಟ್ಟಡವು ಅಸ್ವಚ್ಛತೆ, ಅನೈತಿಕ ಚಟುವಟಿಕೆಗಳ ತಾಣವಾಗಿದ್ದರೂ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಹೋರಾಟಗಾರ ನಂದಿ ಪುರುಷೋತ್ತಮ್ ಮಾತನಾಡಿ, ಚೆನ್ನಯ್ಯ ಪಾರ್ಕ್ ಬಳಿ ಎಂಟು ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಖಾಸಗಿ ಬಸ್ ನಿಲ್ದಾಣ ಮತ್ತು ಅಂಗಡಿ ಮಳಿಗೆ ನಿರ್ವಿುಸಲಾಗಿದೆ. ಆದರೆ, ಕಟ್ಟಡ ಈವರೆಗೂ ಬಳಕೆಗೆ ಬಂದಿಲ್ಲ. ಇದು ಅನೈತಿಕ ಚಟುವಟಿಕೆಗಳ ತಾಣವಾಗಿ ಬದಲಾಗಿದೆ. ಇಲ್ಲಿಯೇ ಪ್ರಯಾಣಿಕರು ಎಲೆ ಅಡಕೆ ಜಿಗಿದು ಉಗಿಯುತ್ತಿರುವುದರ ಜತೆಗೆ ಮಲಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಹಲವು ತಿಂಗಳಿಂದಲೂ ಸ್ವಚ್ಛತಾ ಕಾರ್ಯ ಕೈಗೊಳ್ಳದ ಹಿನ್ನೆಲೆಯಲ್ಲಿ ಕಟ್ಟಡ ಧೂಳಿನಿಂದ ತುಂಬಿ ಹಾಳಾಗುತ್ತಿದೆ. ಆದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದರು.

ಮಳಿಗೆಯಲ್ಲಿನ ಅಂಗಡಿಗಳನ್ನು ತ್ವರಿತವಾಗಿ ಬಾಡಿಗೆ ನೀಡುವುದರಿಂದ ಸರ್ಕಾರಕ್ಕೆ ಆದಾಯ ಬರುತ್ತದೆ. ಕಟ್ಟಡ ಹಾಳಾಗುವಿಕೆ ತಪ್ಪುವುದರ ಜತೆಗೆ ಜನರಿಗೂ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ನಿಲ್ದಾಣದಲ್ಲಿ ಕಾಣದ ಸ್ವಚ್ಛತೆ, ಕಣ್ಣಿದು ಕುರುಡರಾಗಿರುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು, ನಿರ್ಲಕ್ಷ್ಯ್ಕೆ ಧಿಕ್ಕಾರ ಎಂಬ ಮಾಹಿತಿ ಭಿತ್ತಿಪತ್ರಗಳನ್ನು ಅಂಟಿಸಿರುವುದು ಸಾರ್ವಜನಿಕರ ಗಮನಸೆಳೆಯಿತು.

Leave a Reply

Your email address will not be published. Required fields are marked *

Back To Top