Sunday, 24th September 2017  

Vijayavani

1. 3ನೇ ಮ್ಯಾಚ್‌ನಲ್ಲೂ ಆಸೀಸ್‌ ಉಡೀಸ್‌- ರೋಹಿತ್,ರಹಾನೆ,ಪಾಂಡ್ಯ ಬೊಂಬಾಟ್‌ ಆಟ- ಭಾರತಕ್ಕೆ ಸರಣಿ ವಶ 2. ದೆಹಲಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ- ಜಾವ್ಡೇಕರ್ ನೇತೃತ್ವದಲ್ಲಿ ಮೀಟಿಂಗ್‌- ತಡವಾಗಿ ದೆಹಲಿ ವಿಮಾನ ಏರಿದ ಈಶ್ವರಪ್ಪ 3. ಸಿದ್ದಾರ್ಥ್​ ಮನೆ ಮೇಲೆ ಐಟಿ ದಾಳಿ ಪ್ರಕರಣ- 650 ಕೋಟಿ ಮೌಲ್ಯದ ಅಕ್ರಮ ಆದಾಯ ಪತ್ತೆ- ದಿಗ್ವಿಜಯ ನ್ಯೂಸ್​ಗೆ ಐಟಿ‌ ಮೂಲಗಳ ಮಾಹಿತಿ 4. ವಿಶ್ವಸಂಸ್ಥೆಯಲ್ಲಿ ಮತ್ತೆ ಬಾಲ ಬಿಚ್ಚಿದ ಪಾಕಿಸ್ತಾನ- ಮಡಿಲಲ್ಲಿ ಕೆಂಡ ಇಟ್ಕೊಂಡು ಭಾರತದತ್ತ ವಾಗ್ಬಾಣ- ಇಂಡಿಯಾ ಉಗ್ರವಾದದ ತಾಯಿ ಅಂತಾ ಪಾಕ್ ಉದ್ಧಟತನ 5. ಕೋಕ್ ಸ್ಟುಡಿಯೋದಿಂದ ಸಂಗೀತ ಸಂಜೆ- ಪೆಪೋನ್ ಗಾಯನಕ್ಕೆ ಮನಸೋತ ಯುವಜನ- ಹುಚ್ಚಿದ್ದು ಕುಣಿಸಿದ ಯುವದಸರಾ
Breaking News :

ಗುಂಡಿಗಳಿಗೆ ಕಳಪೆ ಕಾಮಗಾರಿ ಕಾರಣ

Thursday, 14.09.2017, 3:00 AM       No Comments

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ 17 ತಿಂಗಳಲ್ಲಿ ರಸ್ತೆ ಡಾಂಬರೀಕರಣಕ್ಕಾಗಿ ಸರ್ಕಾರ 1,015 ಕೋಟಿ ರೂ. ಖರ್ಚು ಮಾಡಿದ್ದರೂ ಕಳಪೆ ಕಾಮಗಾರಿಯಿಂದಾಗಿ 707 ಕಿ.ಮೀ. ಉದ್ದದ ರಸ್ತೆ ಸಂಪೂರ್ಣ ಹಾಳಾಗಿದೆ ಎಂದು ಬಿಜೆಪಿ ನಗರ ವಕ್ತಾರ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.

ರಸ್ತೆ ಡಾಂಬರೀಕರಣದ ಮೂಲಕ ನೂರಾರು ಕೋಟಿ ರೂ. ಭ್ರಷ್ಟಾಚಾರವೆಸಗಿರುವುದು ಇತ್ತೀಚೆಗೆ ಬಿದ್ದ ಮಳೆಯಿಂದ ಬಯಲಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬೆಂಗಳೂರಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 7,300 ಕೋಟಿ ರೂ. ಬಿಡುಗಡೆ ಮಾಡಿದ್ದು, ಅದರಲ್ಲಿ 2,075 ಕೋಟಿ ರೂ. ರಸ್ತೆ ಅಭಿವೃದ್ಧಿಗೆಂದೇ ನಿಗದಿಪಡಿಸಲಾಗಿದೆ. ಆದರೆ, ಈ ಹಣದಲ್ಲಿ ಎಲ್ಲಿಯೂ ಗುಣಮಟ್ಟದ ಕಾಮಗಾರಿ ಆಗಿಲ್ಲ ಎಂದು ರಮೇಶ್ ದೂರಿದರು.

ರಾಜ್ಯದ ಹೆದ್ದಾರಿಗಳನ್ನು ನಿರ್ಮಾಣ ಮಾಡುವ ಲೋಕೋಪಯೋಗಿ ಇಲಾಖೆ ಮೂಲಕ ನಗರದಲ್ಲಿ 217.43 ಕಿ.ಮೀ. ರಸ್ತೆಯನ್ನು 227.74 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಈ ರಸ್ತೆಯೂ ಕಳಪೆ ಕಾಮಗಾರಿ ಯಿಂದ ಹಾಳಾಗಿದೆ ಎಂದು ತಿಳಿಸಿದರು.

ಗುಂಡಿಗಳ ನಗರ: ಆಸ್ಟ್ರೇಲಿಯಾದ ಪತ್ರಿಕೆಯೊಂದು ‘ಬೆಂಗಳೂರು ಗುಂಡಿಗಳ ನಗರ’ ಎಂದು ಕಳೆದ ವಾರ ವರದಿ ಮಾಡಿದೆ. ವಿಶ್ವಮಟ್ಟದಲ್ಲಿ ಬೆಂಗಳೂರಿನ ಮಾನ ಹರಾಜಾಗಿದೆ. ಪುರಭವನ-ಶಿರಸಿ ವೃತ್ತದವರೆಗಿನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆ ರಸ್ತೆಯೂ ಹಾಳಾಗಿದೆ. ಒಂದೂವರೆ ತಿಂಗಳ ಹಿಂದಷ್ಟೆ 6.80 ಕೋಟಿ ರೂ. ವೆಚ್ಚದಲ್ಲಿ ಡಾಂಬರೀಕರಣ ಮಾಡಲಾಗಿತ್ತು. ಆದರೆ, ಈಗ ಮೇಲ್ಸೇತುವೆಯಲ್ಲಿ ರಸ್ತೆ ಗುಂಡಿಗಳು ಕಾಣಿಸಿಕೊಂಡಿವೆ ಎಂದು ರಮೇಶ್ ತಿಳಿಸಿದರು.

Leave a Reply

Your email address will not be published. Required fields are marked *

Back To Top