Saturday, 21st July 2018  

Vijayavani

ಶೀರೂರು ಶ್ರೀಗಳ ಸಾವು ಕೊಲೆಯಲ್ಲ - ಅವರಿಗೆ ಮೊದಲಿಂದಲೂ ಅನಾರೋಗ್ಯ ಇತ್ತು - ಉಡುಪಿಯಲ್ಲಿ ಪೇಜಾವರ ಶ್ರೀ ಸ್ಪಷ್ಟನೆ        ರಾಹುಲ್‌ ಅಪ್ಪುಗೆಗೆ ಬಿಜೆಪಿ ಸಿಡಿಮಿಡಿ - ಸದನದಲ್ಲಿನ ವರ್ತನೆ ಬಗ್ಗೆ ಕೋಪ - ರಾಹುಲ್‌ಗೆ ಸ್ಪೀಕರ್‌ ನೀತಿಪಾಠ        ಭಾಷಣಕ್ಕಿಂತ ರಾಹುಲ್‌ ಕಣ್ಣೇಟು ಫೇಮಸ್‌ - ಪ್ರಿಯಾ ವಾರಿಯರ್‌ ವಿಡಿಯೋಗೆ ಲಿಂಕ್‌ - ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ವೈರಲ್‌        ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ - ಕಾವೇರಿಗೆ ಮುಖ್ಯಮಂತ್ರಿ ದಂಪತಿಯಿಂದ ಪೂಜೆ - ಸಚಿವ ಡಿಕೆಶಿ, ಮಹೇಶ್‌ ಸಾಥ್‌        ಸಿಬ್ಬಂದಿ ಒತ್ತಾಯದಿಂದ ಅಲ್ಲಿಗೆ ಹೋಗಿದ್ದೆ - ಮೊಗಸಾಲೆಯಲ್ಲಿ ಬರ್ತಡೇ ಪಾರ್ಟಿ ತಪ್ಪು - ಕ್ಷಮೆ ಕೋರಿದ ವಿಧಾನಸಭೆ ಕಾರ್ಯದರ್ಶಿ        ನಿನ್ನೆ ಬೌಬೌ ಬಿರಿಯಾನಿ - ಇಂದು ಮಿಯಾಂವ್‌ ಮಿಯಾಂವ್‌ ಮಸಾಲ - ಬೆಂಗಳೂರಿನ ವಿಜಯನಗರದಲ್ಲಿ ಬೆಕ್ಕು ನಾಯಿ ಭಕ್ಷ       
Breaking News

ಗೌರಿ ಲಂಕೇಶ್ ಹಂತಕ ಎಸ್​ಐಟಿ ವಶಕ್ಕೆ?

Saturday, 24.02.2018, 3:03 AM       No Comments

ಬೆಂಗಳೂರು: ಗುಂಡುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪಿ ಯೊಬ್ಬ ಕೇಂದ್ರ ಅಪರಾಧ ದಳ (ಸಿಸಿಬಿ) ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಈತನ ಕೈವಾಡವಿರುವ ಅನುಮಾನದ ಮೇಲೆ ಎಸ್​ಐಟಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಕೆಂಪೇಗೌಡ ಬಸ್ ನಿಲ್ದಾಣ ಬಳಿಯ ಕೆಎಸ್​ಆರ್​ಟಿಸಿ ಟರ್ವಿುನಲ್-1ರಲ್ಲಿ ಗುಂಡುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಮದ್ದೂರು ತಾಲೂಕು ಕದಲೂರು ನಿವಾಸಿ ಕೆ.ಟಿ.ನವೀನ್ ಕುಮಾರ್ (37) ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

ಭಾನುವಾರ (ಫೆ.18) ಸಂಜೆ 5.30ರಲ್ಲಿ ಗುಂಡುಗಳನ್ನು ವ್ಯಕ್ತಿಯೊಬ್ಬ ಮಾರಾಟ ಮಾಡಲು ಯತ್ನಿಸುತ್ತಿದ್ದಾನೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಇನ್​ಸ್ಪೆಕ್ಟರ್ ಬಿ.ರವಿ ನೇತೃತ್ವದ ತಂಡ ಮಫ್ತಿಯಲ್ಲಿ ತೆರಳಿ ವಶಕ್ಕೆ ಪಡೆದಿತ್ತು. ಪರಿಶೀಲಿಸಿದಾಗ ಪಾಯಿಂಟ್ 32 ರಿವಾಲ್ವರ್​ನ 5 ಗುಂಡುಗಳು ಪತ್ತೆಯಾಗಿವೆ. ಈ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿ ಬಂಧಿಸಿದ್ದರು.

ನವೀನ್ ಹಿಂದುಪರ ಸಂಘಟನೆಯೊಂದರ ಕಾರ್ಯಕರ್ತ ಎನ್ನಲಾಗಿದೆ. ಆತ ತನ್ನ ಫೇಸ್​ಬುಕ್ ಖಾತೆಯಲ್ಲಿ ಬಂದೂಕು ಹಿಡಿದಿರುವ ಫೋಟೋ ಅಪ್​ಲೋಡ್ ಮಾಡಿದ್ದಾನೆ. ಗೌರಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು, ಶಂಕೆ ಮೇರೆಗೆ ನವೀನ್​ನನ್ನು 9 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ ಆರೋಪಿ ಬಳಿ 15 ಗುಂಡುಗಳು ಸಿಕ್ಕಿವೆ.ಈ ಗುಂಡುಗಳ ಮೂಲ ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕೈವಾಡವಿರುವ ಬಗ್ಗೆ ಆರೋಪಿ ಬಳಿ ಸದ್ಯಕ್ಕೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ತನಿಖೆ ಮುಂದುವರಿದಿದೆ ಎಂದು ಎಸ್​ಐಟಿ ಅಧಿಕಾರಿಗಳು ‘ವಿಜಯವಾಣಿ’ಗೆ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮೂವರು ವಶಕ್ಕೆ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಗಾಗಿ ಎಸ್​ಐಟಿ ಮಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಬೀಡುಬಿಟ್ಟಿದ್ದು, ಶಂಕಿತ ಮೂವರನ್ನು ವಶಕ್ಕೆ ಪಡೆದಿದೆ. ಆದರೆ, ಬಗ್ಗೆ ಖಚಿತ ಮಾಹಿತಿ ಇಲ್ಲವೆಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಹೇಳಿದ್ದಾರೆ

Leave a Reply

Your email address will not be published. Required fields are marked *

Back To Top