Friday, 21st September 2018  

Vijayavani

ಸಂಕಷ್ಟ ತಂದ ದಂಗೆ ಹೇಳಿಕೆ - ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು - ರಾಷ್ಟ್ರಪತಿಗಳಿಗೆ ಮಾಹಿತಿ ರವಾನೆ ಸಾಧ್ಯತೆ        ಸಿಎಂ ಬೇಜವಾಬ್ಧಾರಿ ಹೇಳಿಕೆಗೆ ರಾಜ್ಯಾದ್ಯಂತ ಖಂಡನೆ - ಬಿಜೆಪಿ ಕಾರ್ಯಕರ್ತರ ಪ್ರೊಟೆಸ್ಟ್​ - ಬಾಗಲಕೋಟೆಯಲ್ಲಿ ಬ್ಯಾನರ್​ ದಹನ        ಮಲೆನಾಡಲ್ಲಿ ಪ್ರವಾಹದ ಬೆನ್ನಲ್ಲೇ ಮತ್ತೊಂದು ಬರೆ - ನೆರೆ ಬಳಿಕ ಬತ್ತುತ್ತಿವೆ ನದಿಗಳು - ಆತಂಕದಲ್ಲಿ ಚಿಕ್ಕಮಗಳೂರು ಜನತೆ        ಶತಮಾನದ ಆಸ್ಪತ್ರೆಗೆ ಸರ್ಕಾರದ ಬೀಗ - ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಜಾಗ - ಉಡುಪಿಯಲ್ಲಿ ಉಚಿತ ಚಿಕಿತ್ಸೆ ಇನ್ನು ಮರೀಚಿಕೆ..?        ಮೈಸೂರಲ್ಲಿ ನಾಡಹಬ್ಬಕ್ಕೆ ತಯಾರಿ - ಮಾವುತರಿಗೆ ಜಿಲ್ಲಾಡಳಿತದ ಭೂರಿ ಭೋಜನ - ಕೇರಂ ಆಡಿ ಸಂತಸಪಟ್ಟ ಕಾವಾಡಿಗರು        ಹುಬ್ಬಳ್ಳಿಯಲ್ಲಿ ಅಷ್ಟವಿನಾಯಕ ಸ್ಪರ್ಧೆ - ಅಲಂಕಾರದಲ್ಲಿ ಹಿರೇಪೇಟೆಯ ವಿನಾಯಕ ಪ್ರಥಮ- ಗಾಂಧಿ ಚೌಕ್ ಗಣಪ ಉತ್ತಮ ವಿಗ್ರಹ       
Breaking News

ಚಿಕ್ಕಬಳ್ಳಾಪುರ ಕೆರೆಗಳ ಪುನಶ್ಚೇತನ

Monday, 11.06.2018, 1:04 PM       No Comments

ಚಿಕ್ಕಬಳ್ಳಾಪುರ: ಜಿಲ್ಲೆಯ ಬಹುತೇಕ ಕೆರೆಗಳಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೂಳು ತೆಗೆಯಲು ಮುಂದಾಗಿದೆ.

ಚಿಂತಾಮಣಿ ತಾಲೂಕು ಯಗವಕೋಟೆ ಊಡ ಕೆರೆ 10 ಲಕ್ಷ ರೂ., ಬಾಗೇಪಲ್ಲಿ ತಾಲೂಕು ಚೊಕ್ಕಂಪಲ್ಲಿ ಬೈರಾರೆಡ್ಡಿ ಕೆರೆ, ಚಿಕ್ಕಬಳ್ಳಾಪುರ ತಾಲೂಕು ಕಾಡದಿಬ್ಬೂರು ಬಂಡ್ಲ ಕೆರೆಗೆ ತಲಾ 9 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಶಿಡ್ಲಘಟ್ಟ ಹಾಗೂ ಗೌರಿಬಿದನೂರು ತಾಲೂಕಿನಲ್ಲಿ ತಲಾ ಒಂದು ಕೆರೆಯನ್ನು 9 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ. ಈ ಮೂಲಕ ಕೆರೆಗಳಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಿಸಲಾಗುತ್ತಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆ ಅಧಿಕಾರಿಗಳು ಮಾಹಿತಿ ನೀಡಿದರು.

ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ದೇವಾಲಯದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಿತಿಯು ಸ್ವಸಹಾಯ ಸಂಘ ರಚನೆ ಮೂಲಕ ಮಹಿಳಾ ಸಬಲೀಕರಣ, ಕೃಷಿಕರಿಗೆ ತರಬೇತಿ, ನಿರ್ಗತಿಕರಿಗೆ ಮಾಸಾಶನ, ಗ್ರಂಥಾಲಯ, ಹಾಲಿನ ಡೇರಿ ಕಟ್ಟಡ ಅಭಿವೃದ್ಧಿ, ದೇವಾಲಯ ಜೀಣೋದ್ಧಾರ ಸೇರಿ ಹಲವು ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಕೈಗೊಳ್ಳುವುದರ ಜತೆಗೆ ‘ನಮ್ಮೂರು ನಮ್ಮ ಕೆರೆ’ ಯೋಜನೆ ಮೂಲಕ ಕೆರೆಗಳನ್ನು ಅಭಿವೃದ್ಧಿಪಡಿಸುತ್ತಿದೆ.

ಚಿಕ್ಕಬಳ್ಳಾಪುರ ತಾಲೂಕು ಕಾಡದಿಬ್ಬೂರು ಬಂಡ್ಲ ಕೆರೆ 13 ಎಕರೆ ಇದ್ದು, ಜೂ.6ರಿಂದ ಹೂಳು ತೆಗೆಯುವ ಕಾರ್ಯ ನಡೆಯುತ್ತಿದೆ. ಈಗಾಗಲೇ ಕೆರೆಯಲ್ಲಿನ ಮಣ್ಣನ್ನು ರೈತರು ಸ್ವಯಂ ಪ್ರೇರಿತರಾಗಿ ಟ್ರ್ಯಾಕ್ಟರ್​ಗಳಲ್ಲಿ ಜಮೀನುಗಳಿಗೆ ಸಾಗಿಸುತ್ತಿದ್ದಾರೆ.

ಅಭಿವೃದ್ಧಿ ಸಮಿತಿ ರಚನೆ: ಈ ಹಿಂದೆ ಹಳ್ಳಿಗಾಡಿನ ಜನರು ಸ್ವಯಂ ಪ್ರೇರಿತರಾಗಿ ಕೆರೆಗಳನ್ನು ನಿರ್ವಿುಸಿ ಅಭಿವೃದ್ಧಿಪಡಿಸುತ್ತಿದ್ದರು. ಇದರಿಂದ ಅಂತರ್ಜಲಮಟ್ಟ ಹೆಚ್ಚಳವಾಗಿ ನೀರಿನ ಸಮಸ್ಯೆ ಉಂಟಾಗುತ್ತಿರಲಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಕೆರೆಗಳನ್ನು ಅಕ್ರಮ ಒತ್ತುವರಿ ಮಾಡಿಕೊಂಡ ಪರಿಣಾಮ ಬಹುತೇಕ ಕೆರೆ ಮತ್ತು ರಾಜಕಾಲುವೆಗಳು ಹಾಳಾಗಿವೆ. ಇದರಿಂದ ಮಳೆಗಾಲದಲ್ಲಿ ಕೆರೆಗಳಿಗೆ ನೀರು ಹರಿದು ಬರುತ್ತಿಲ್ಲ. ಪ್ರತಿವರ್ಷ ಸರ್ಕಾರದ ಕೋಟ್ಯಂತರ ರೂಪಾಯಿ ಅನುದಾನ ಖರ್ಚಾಗುತ್ತಿದ್ದರೂ ಕೆರೆಗಳಲ್ಲಿನ ಹೂಳು ಮಾತ್ರ ಖಾಲಿಯಾಗಿಲ್ಲ. ಇದರ ನಡುವೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಜನರ ಸಹಭಾಗಿತ್ವದಲ್ಲಿ ಸಮಿತಿ ರಚಿಸಿಕೊಂಡು ಕೆರೆಗಳ ಅಭಿವೃದ್ಧಿಗೆ ಮುಂದಾಗಿದೆ.

 ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಮಿತಿಯ ಸೇವಾ ಚಟುವಟಿಕೆಗಳಲ್ಲಿ ಕೆರೆಗಳ ಅಭಿವೃದ್ಧಿಯೂ ಒಂದಾಗಿದೆ. ಇದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಜೀವನಾಡಿಯಾಗಿರುವ ಕೆರೆಗಳಲ್ಲಿನ ಹೂಳು ತೆಗೆಸಿ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಿಸಲಾಗುತ್ತಿದೆ.

| ಬಿ.ವಸಂತ್, ಜಿಲ್ಲಾ ನಿರ್ದೇಶಕ, ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ.

Leave a Reply

Your email address will not be published. Required fields are marked *

Back To Top