Wednesday, 20th June 2018  

Vijayavani

ಐಟಿ ದೂರಿನಲ್ಲಿದೆ ಸ್ಫೋಟಕ ಮಾಹಿತಿ - ಎಐಸಿಸಿಗೆ ಕೋಟಿ ಕೋಟಿ ಕೊಟ್ಟಿದ್ರಾ ಡಿಕೆಶಿ - ಹವಾಲಾ ವ್ಯವಹಾರದಲ್ಲಿ ಡಿಕೆಶಿ ಹೆಸರು        ಉಪ್ಪು-ಹುಳಿ, ಖಾರ ಇಲ್ಲದ ಊಟ - ನಾನ್​ ವೆಜ್​​ನಿಂದ ದೂರ ದೂರ - ಪ್ರಕೃತಿ ಚಿಕಿತ್ಸಾಲಯದಲ್ಲಿ ಸಿದ್ದು ಫುಲ್ ಸಸ್ಯಹಾರಿ        ಕಾಶ್ಮೀರದಲ್ಲಿ ಯೋಧನ ಕಿಡ್ನಾಪ್​​​, ಹತ್ಯೆ ಪ್ರಕರಣ - ಮೃತನ ಮನೆಗೆ ರಕ್ಷಣಾ ಸಚಿವ ಭೇಟಿ - ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಿರ್ಮಲಾ ಸೀತಾರಾಮನ್​​        ರೈತ ಎಂದರೆ, ರಕ್ತ, ಬೆವರು ಸುರಿಸುವ ಅನ್ನದಾತ - ದೇಶದ ಅಭಿವೃದ್ಧಿಗೆ ದೇಶದ ರೈತರ ಕೊಡುಗೆ ಆಪಾರ - ರೈತರ ಜತೆ ಪ್ರಧಾನಿ ಮೋದಿ ಸಂವಾದ        ಬಿಸಿಲು ಬರೋವರೆಗೂ ಬಯಲಲ್ಲೇ ಪಾಠ - ಕುಸಿಯುತ್ತಿರೋ ಶಾಲೆಯಲ್ಲೇ ವಿದ್ಯಾರ್ಥಿಗಳ ನರಳಾಟ - ದಾವಣಗೆರೆಯ ಸರ್ಕಾರಿ ಶಾಲೆಗೆ ಬೇಕಿದೆ ಕಾಯಕಲ್ಪ        ಕಣಿವೆ ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಹಿನ್ನೆಲೆ - ಮೈತ್ರಿ ಮುರಿದ ಬೆನ್ನಲ್ಲೇ ರಾಜ್ಯಪಾಲರ ಆಡಳಿತ ಜಾರಿ- ಮಧ್ಯಾಹ್ನ 2:30ಕ್ಕೆ ಅಧಿಕಾರಿಗಳ ಸಭೆ ಕರೆದ ಗವರ್ನರ್       
Breaking News

ಚುನಾವಣೆ ಹೊಂದಾಣಿಕೆಗೆ ಸಿದ್ಧ

Sunday, 07.01.2018, 3:02 AM       No Comments

ಬಾಗಲಕೋಟೆ: ಎರಡು ರಾಷ್ಟ್ರೀಯ ಪಕ್ಷಗಳನ್ನು ಹೊರತು ಪಡಿಸಿ ಉಳಿದ ಚಿಕ್ಕಪುಟ್ಟ ಪಕ್ಷಗಳ ಜತೆ ಚುನಾವಣೆ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧವಿರುವುದಾಗಿ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ತಿಳಿಸಿದರು.

ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಕ್ರಾಂತಿ ವೇಳೆಗೆ ಮೊದಲನೇ ಹಂತದಲ್ಲಿ 150 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. 224 ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ ಎಂದು ತಿಳಿಸಿದರು.

ಜೆಡಿಎಸ್ ಪ್ರಣಾಳಿಕೆಗಳ ಕುರಿತು ರಾಜ್ಯದ ಜನರಿಗೆ ತಿಳಿಸಲು ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮುಂಬರುವ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ ಐವತ್ತರಿಂದ- ಅರವತ್ತು ಸ್ಥಾನ ಗೆಲ್ಲುವ ಗುರಿ ಇಟ್ಟು ಹೊರಟಿದ್ದೇವೆ ಎಂದರು.

ಧರ್ಮವನ್ನು ಗುತ್ತಿಗೆ ಕೊಟ್ಟಿಲ್ಲ: ರಾಜ್ಯದಲ್ಲಿ ಧರ್ಮಾಧಾರಿತ ಎಲ್ಲ ಸಂಘಟನೆಗಳನ್ನು ನಿಷೇಧ ಮಾಡಬೇಕು. ಧರ್ಮವನ್ನು ಯಾರಿಗೂ ಗುತ್ತಿಗೆ ಕೊಟ್ಟಿಲ್ಲ. ಧರ್ಮದ ಹೆಸರಿನಲ್ಲಿ ರಕ್ತದೋಕುಳಿಯಾಗುತ್ತಿದೆ. ಹಲವು ಜನರ ಕೊಲೆಗಳು ನಡೆದು ಹೋಗಿವೆ. ಕೇವಲ ಕರಾವಳಿ ಭಾಗದಲ್ಲಿ ಮಾತ್ರ ಕೋಮು ಗಲಭೆಗಳು ಯಾಕೆ ನಡೆಯುತ್ತಿವೆ? ಹುಬ್ಬಳ್ಳಿ, ಬಾಗಲಕೋಟೆ, ಬೆಳಗಾವಿಯಲ್ಲಿ ಯಾಕಿಲ್ಲ? ಎಂದು ಪ್ರಶ್ನಿಸಿದ ಅವರು, ಕರಾವಳಿ ಭಾಗದಲ್ಲಿ ಎರಡೂ ರಾಜಕೀಯ ಪಕ್ಷಗಳು ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿವೆ ಎಂದು ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ನಿವೃತ್ತರಾದರೆ ಅವರನ್ನು ನಂಬಿರುವ ಕಾರ್ಯಕರ್ತರು ಅನಾಥರಾಗುತ್ತಾರೆ. ಅವರು ನಿವೃತ್ತರಾಗುವುದು ನಮಗೆ ಇಷ್ಟವಿಲ್ಲ, ವಿರೋಧ ಪಕ್ಷದಲ್ಲಿಯೇ ಮುಂದುವರಿಯಲಿ.

| ಡಿ.ಕೆ.ಶಿವಕುಮಾರ್ ಸಚಿವ (ತುಮಕೂರಿನಲ್ಲಿ)

Leave a Reply

Your email address will not be published. Required fields are marked *

Back To Top