Sunday, 15th July 2018  

Vijayavani

ಬಾಲಕನ ವಿಡಿಯೋ ಹಿಂದೆ ಬಿಜೆಪಿ ಕೈವಾಡ ಆರೋಪ - ವಿಡಿಯೋ ತನಿಖೆಗೆ ಸದಾನಂದಗೌಡ ಆಗ್ರಹ - ರಾಜಕಾರಣಿಗಳ ಆಟಕ್ಕೆ ಕೊಡವರ ಆಕ್ರೋಶ        26 ವರ್ಷ ಲಿಂಗಾಯತರೇ ರಾಜ್ಯ ಆಳಿದ್ದಾರೆ - ಕುಮಾರಸ್ವಾಮಿ ಸಿಎಂ ಆಗಿ 2 ತಿಂಗಳಾಗಿದೆ - ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ದೇವೇಗೌಡ ತಿರುಗೇಟು        ಕೊನೆಗೂ ಶಿರಾಡಿ ಘಾಟ್‌ ಲೋಕಾರ್ಪಣೆ - ವಾಸ್ತು ಪ್ರಕಾರ ರೇವಣ್ಣ ಉದ್ಘಾಟನೆ - ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ        ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು, ಮೊಟ್ಟೆ - 25 ಸಾವಿರ ಮಂದಿಗೆ ಭರ್ಜರಿ ಬಾಡೂಟ - ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಜಿಟಿಡಿ ಕೃತಜ್ಞತೆ        ಒಂದು ದೇಶ ಒಂದೇ ಚುನಾವಣೆ - ಮೋದಿ ಪರಿಕಲ್ಪನೆಗೆ ಸೂಪರ್‌ಸ್ಟಾರ್‌ ಬೆಂಬಲ - ಹಣ, ಸಮಯ ಉಳಿತಾಯ ಎಂದ ರಜನಿ        ಉಕ್ಕಿಹರಿಯುತ್ತಿರೋ ಕೃಷ್ಣೆ - ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ - ಇತ್ತ ತಮಿಳುನಾಡಿನಲ್ಲಿ ಕಾವೇರಿ ಭೋರ್ಗರೆತ       
Breaking News

ಜನಸಂಖ್ಯೆ ನಿಯಂತ್ರಿಸದಿದ್ದರೆ ಅಭಿವೃದ್ಧಿಗೆ ತೊಡಕು

Thursday, 12.07.2018, 3:00 AM       No Comments

ತುಮಕೂರು : ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಜಿಲ್ಲಾಸ್ಪತ್ರೆ ಆವರಣದಿಂದ ಆರಂಭವಾದ ‘ಜಾಗೃತಿ ಜಾಥಾ’ಗೆ ಬುಧವಾರ ಜಿಪಂ ಅಧ್ಯಕ್ಷೆ ಲತಾ ಚಾಲನೆ ನೀಡಿದರು.

ವಿವಿಧ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದ ಜಾಥಾ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೂ ಆಗಮಿಸಿತು. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಲತಾ, ಮಿತಿಮೀರಿದ ಜನಸಂಖ್ಯೆ ದೇಶದ ಸಮಗ್ರ ಅಭಿವೃದ್ಧಿಗೆ ತೊಡಕಾಗುವುದರಿಂದ ಎಲ್ಲರೂ ಜಾಗೃತರಾಗಬೇಕು ಎಂದರು.

ಡಿಎಚ್​ಒ ಡಾ.ಎಚ್.ವಿ.ರಂಗಸ್ವಾಮಿ ಮಾತನಾಡಿ, ರಾಜ್ಯದ ಜನಸಂಖ್ಯಾ ನಿಯಂತ್ರಣದಲ್ಲಿ ತುಮಕೂರು ಜಿಲ್ಲೆ ಮುಂಚೂಣಿಯಲ್ಲಿದೆ. ಮುಂದಿನ ದಿನಗಳಲ್ಲಿ ಜನಸಂಖ್ಯೆ ಮತ್ತಷ್ಟು ಇಳಿಮುಖವಾಗಲಿದೆ ಎಂದರು.

ಸಾರ್ಥಕತೆ ನಾಳೆಯ ಜೀವನಕ್ಕಾಗಿ ಕುಟುಂಬ ಯೋಜನೆಯ ಬಳಕೆ’ ಘೊಷವಾಕ್ಯದೊಂದಿಗೆ ಜನಸಂಖ್ಯಾ ನಿಯಂತ್ರಣ ಅರಿವು ಮೂಡಿಸಲಾಗುತ್ತಿದೆ. ತಾಯಂದಿರ, ಮಕ್ಕಳ ಮರಣ ಪ್ರಮಾಣ ಜಿಲ್ಲೆಯಲ್ಲಿ ಇಳಿಮುಖವಾಗಿದೆ. ಜಿಲ್ಲೆಯಲ್ಲಿರುವ ಜನಸಂಖ್ಯಾ ಪ್ರಮಾಣ ಇನ್ನೂ ಇಳಿಕೆ ಮಾಡಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಜನಸಂಖ್ಯೆ ಹೆಚ್ಚಳಕ್ಕೆ ಅನಕ್ಷರತೆಯೂ ಕಾರಣವಾಗಿದೆ. ಜನಸಂಖ್ಯೆ ಹೆಚ್ಚಳದಿಂದಾಗುವ ಪರಿಣಾಮದ ಬಗ್ಗೆ ಗ್ರಾಮೀಣ ಭಾಗದಲ್ಲಿ ವಿದ್ಯಾವಂತರು ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವೀರಭದ್ರಯ್ಯ ಮಾತನಾಡಿ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಿಗುವ ಎಲ್ಲ್ಲ ಸೇವೆ ಪಡೆದುಕೊಳ್ಳಬೇಕು ಎಂದರು.

ಜಿಪಂ ಸಿಇಒ ಅನ್ನಿಸ್ ಕೆ.ಜಾಯ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಪ್ರಶಾಂತ್, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಪುರುಷೋತ್ತಮ್ ಜಿಲ್ಲಾ ಆಯುಷ್ ಅಧಿಕಾರಿ ಡಾ. ಸಂಜೀವಮೂರ್ತಿ, ಡಾ.ಸನತ್, ಪ್ರಸೂತಿ ತಜ್ಞೆ ಡಾ.ರೇಖಾ, ವೆಂಕಟಲಕ್ಷ್ಮಮ್ಮ, ಶಾರದಮ್ಮ ಇದ್ದರು.

Leave a Reply

Your email address will not be published. Required fields are marked *

Back To Top