Friday, 22nd September 2017  

Vijayavani

1. ಸಮಾವೇಶಕ್ಕೆ ಲಕ್ಷ ಮಂದಿ ಸೇರಿಸೋ ಟಾರ್ಗೆಟ್​- ಬರದಿದ್ರೆ ಅಕ್ಕಿ ಕಟ್​​, ಬ್ಯಾಂಕ್​ ಸಬ್ಸಿಡಿಗೆ ಬ್ರೇಕ್​- ಫಲಾನುಭವಿಗಳಿಗೆ ಕೈ ಕಾರ್ಯಕರ್ತರ ಬೆದರಿಕೆ 2. ಕೊಟ್ಟ ಮಾತು ಮರೆತ ಸಿಎಂ ಸಿದ್ದರಾಮಯ್ಯ- 8 ತಿಂಗಳಾದ್ರೂ ಕುಟುಂಬಸ್ಥರಿಗೆ ಸಿಗದ ಪರಿಹಾರ- ಇದೇನಾ ನುಡಿದಂತೆ ನಡೆಯುವ ಸರ್ಕಾರ..? 3. ಎಸ್​​.ಎಂ.ಕೃಷ್ಣ ಅಳಿಯನ ಮನೆ ಕಚೇರಿ ತಲಾಷ್​​- ಎರಡನೇ ದಿನವೂ ಮುಂದುವರಿದ ಪರಿಶೀಲನೆ- ಹುಡುಕಿದಷ್ಟು ಪತ್ತೆಯಾಗ್ತಿದೆ ದಾಖಲೆ ಪತ್ರ 4. ಗದಗದಲ್ಲಿ ಹನಿ ನೀರಿಗಾಗಿ ಹೋರಾಟ- 6 ಸಾವಿರ ಜನಕ್ಕೆ ಟ್ಯಾಂಕರ್​ ನೀರೇ ಆಧಾರ- ಜನರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ 5. ಮೈಸೂರು ದಸರಾಗೆ ಜನವೋ ಜನ- ಅತ್ತೆ, ಸೊಸೆ ಜೊತೆ ಜೊತೆ ಮಾಡಿದ್ರು ನಳಪಾಕ- ಕೆಲವೇ ಕ್ಷಣಗಳಲ್ಲಿ ಯುವ ದಸರಾಗೆ ಚಾಲನೆ
Breaking News :

ಜಿಲ್ಲಾಸ್ಪತ್ರೆಗಳಲ್ಲಿ ಐ ಬ್ಯಾಂಕ್

Thursday, 14.09.2017, 3:00 AM       No Comments

ಬೆಂಗಳೂರು: ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಐ ಬ್ಯಾಂಕ್ ಸ್ಥಾಪಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ನಟರಾಜ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ನೇತ್ರಾಧಿಕಾರಿಗಳ ಸಂಘ ಬುಧವಾರ ಸರ್ಕಾರಿ ನೌಕರರ ಸಂಘದಲ್ಲಿ ಹಮ್ಮಿಕೊಂಡಿದ್ದ 6ನೇ ರಾಜ್ಯಮಟ್ಟದ ನೇತ್ರಾಧಿಕಾರಿಗಳ ಸಮ್ಮೇಳನ ಮತ್ತು ದೇಹದಾನ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಸದ್ಯ ರೋಟರಿ ಕ್ಲಬ್ ಸಹಯೋಗದೊಂದಿಗೆ 7 ಜಿಲ್ಲೆಗಳ ಜಿಲ್ಲಾ ಆಸ್ಪತ್ರೆಯಲ್ಲಿ ಐ ಬ್ಯಾಂಕ್ ಸ್ಥಾಪಿಸಲಾಗುವುದು ಎಂದರು. ಸರ್ಕಾರಿ ಸ್ವಾಮ್ಯದ ಆಸ್ಪತ್ರೆಗಳಲ್ಲಿ ಕಣ್ಣಿನ ಕ್ಯಾಟರ್ಯಾಕ್ಟ್ ಶಸ್ತ್ರಚಿಕಿತ್ಸೆ ಹೆಚ್ಚಾಗಬೇಕಿದೆ. ನೇತ್ರ ತಜ್ಞರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲು ನೇತ್ರಾಧಿಕಾರಿಗಳು ಸಹಕಾರಿಯಾಗಬೇಕೆಂದು ತಿಳಿಸಿದರು.

ರೆಟಿನಾ ಪರೀಕ್ಷೆಗೆ ಸಲಹೆ ನೀಡಿ: 45 ವರ್ಷ ಮೇಲ್ಪಟ್ಟವರಿಗೆ ಕನ್ನಡಕ ನೀಡುವ ಮೊದಲು ನೇತ್ರಾಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಸಾಮಾನ್ಯವಾಗಿ ಈ ವಯಸ್ಸಿನವರಿಗೆ ಮಧುಮೇಹ ಕಾಯಿಲೆ ಇರುವ ಸಾಧ್ಯತೆ ಅಧಿಕವಾಗಿರುತ್ತದೆ. ಆದ್ದರಿಂದ ಒಮ್ಮೆ ತಜ್ಞರನ್ನು ಸಂರ್ಪಸುವಂತೆ ಸಲಹೆ ನೀಡಿ. ಉಳಿದಂತೆ ಸರ್ಕಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಶೇ.15ರಿಂದ 20 ಮಾತ್ರ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಯುತ್ತಿದೆ. ಈ ಪ್ರಮಾಣ ಹೆಚ್ಚಬೇಕು ಎಂದು ನಟರಾಜ್ ಹೇಳಿದರು.

ಸಂಘದ ಗೌರವಾಧ್ಯಕ್ಷ ಎಸ್. ರಾಜು, ರಾಜ್ಯ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಸಚ್ಚಿದಾನಂದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ ಜಂಟಿ ನಿರ್ದೇಶಕ ಡಾ. ಪಾಟೀಲ್ ಓಂಪ್ರಕಾಶ್ ಇದ್ದರು. 90 ಮಂದಿ ದೇಹದಾನ ಮಾಡುವುದಾಗಿ ನೋಂದಣಿ ಮಾಡಿದರು.

 

ತಾಲೂಕು ಹಾಗೂ ಸಮುದಾಯ ಆಸ್ಪತ್ರೆಯಲ್ಲಿ ನೇತ್ರಾಧಿಕಾರಿ ಕೊರತೆಯಿದೆ. ವೇತನ, ಪದೋನ್ನತಿ ವಿಚಾರವಾಗಿಯೂ ಸರ್ಕಾರಕ್ಕೆ ಶಿಫಾರಸು ಮಾಡುತ್ತೇನೆ.

| ಡಾ. ನಟರಾಜ್ ಆರೋಗ್ಯ ಇಲಾಖೆ ನಿರ್ದೇಶಕ

 

ಮುಂಬಡ್ತಿ ವೇತನ ಶ್ರೇಣಿ ನೀಡಿ

2001ರಲ್ಲಿ ಇಲಾಖೆಯು 2 ಹಂತದ ಪದೋನ್ನತಿ ಜಾರಿಗೊಳಿಸಿ ಆದೇಶ ಹೊರಡಿಸಿತು. ಆದರೆ, ಇದರಲ್ಲಿ ಅನೇಕ ನ್ಯೂನತೆಗಳಿದ್ದವು. ಹಿರಿಯ ನೇತ್ರಾಧಿಕಾರಿ ಮತ್ತು ಮುಖ್ಯ ನೇತ್ರಾಧಿಕಾರಿಗೆ ಮುಂಬಡ್ತಿ ವೇತನ ಶ್ರೇಣಿ ನೀಡದೆ ಹಿಂಬಡ್ತಿ ವೇತನ ಶ್ರೇಣಿ ಜಾರಿಗೊಳಿಸಿದೆ. ಮುಖ್ಯ ನೇತ್ರಾಧಿಕಾರಿಗೆ 21,600-40,050 ರೂ. ವೇತನ ನಿಗದಿಪಡಿಸಿದಾಗ ನ್ಯಾಯ ಒದಗಿಸಿದಂತಾಗುತ್ತದೆ. ಮುಖ್ಯ ನೇತ್ರಾಧಿಕಾರಿ ಗಳ ಹುದ್ದೆ ಕೇವಲ 4 ಇದೆ. ಈ ಸಂಖ್ಯೆ ಹೆಚ್ಚಿಸಬೇಕು. ಗ್ರಾಮೀಣ ಭಾಗದದಲ್ಲಿ ಕಾರ್ಯನಿರ್ವಹಿಸುವರಿಗೆ ಗ್ರಾಮೀಣ ಭತ್ಯೆ ಸೇರಿದಂತೆ ನೇತ್ರಾಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಸಂಘದ ಅಧ್ಯಕ್ಷ ಡಿ.ಸಿ. ಸುಂದರ್​ರಾಜು ಆಗ್ರಹಿಸಿದರು.

Leave a Reply

Your email address will not be published. Required fields are marked *

Back To Top