Monday, 18th June 2018  

Vijayavani

ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರ - ಕೆಲವೇ ಕ್ಷಣಗಳಲ್ಲಿ ಮೋದಿ, ಎಚ್​ಡಿಕೆ ಭೇಟಿ - ಕುತೂಹಲ ಕೆರಳಿಸಿದ ಮಾತುಕತೆ        ಸಮುದ್ರ ತೀರದಲ್ಲಿ ವಿಹಾರಕ್ಕೆ ಹೋದಾಗ ಅನಾಹುತ - ಅಲೆಗಳ ಅಬ್ಬರಕ್ಕೆ ಸಿಲುಕಿ ಇಬ್ಬರು ನೀರುಪಾಲು - ಗೋವಾದಲ್ಲಿ ದುರಂತ        ಶಾಸಕಿ, ಸಚಿವೆ ಮಧ್ಯೆ ಸೇವೆಯ ಸಮರ - ಅಪಾರ್ಥ ಬೇಡವೆಂದ ಲಕ್ಷ್ಮಿ ಹೆಬ್ಬಾಳ್ಕರ್ - ಜಯಮಾಲಾಗೆ ಹೊಗಳಿಕೆ        ಅಧಿಕಾರಕ್ಕೆ ಬಂದು ತಿಂಗಳಾದ್ರೂ ಭರವಸೆ ಈಡೇರಿಲ್ಲ - ಅಪ್ಪ-ಮಗ ರೈತರಿಗೆ ಕೊಟ್ಟ ಭರವಸೆ ಈಡೇರಿಸಿಲ್ಲ - ಬಿಎಸ್​ವೈ ಕಿಡಿ        ರಾಜ್ಯಕ್ಕೆ ಎಚ್​​ಡಿಕೆ ಸಿಎಂ, ನನಗೆ ಸಿದ್ದು ಸಿಎಂ - ಸಚಿವನಾಗಲು ಸಿದ್ದರಾಮಯ್ಯರೇ ಕಾರಣ - ಸಚಿವ ಪುಟ್ಟರಂಗಶೆಟ್ಟಿ        ಪೋಷಕರ ಡಾಟಾ ಲೀಕ್​ ಆರೋಪ - ಬಾಲ್ಡ್​​​ವಿನ್​ ಶಾಲೆ ಮಾನ್ಯತೆ ರದ್ದಿಗೆ ಶಿಫಾರಸು       
Breaking News

ಡಿ.1-3 ಆಳ್ವಾಸ್ ನುಡಿಸಿರಿ

Thursday, 07.09.2017, 3:00 AM       No Comments

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ನಡೆಯುವ 14ನೇ ವರ್ಷದ ಕನ್ನಡ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ 2017’ ಡಿ.1ರಿಂದ 3ರವರೆಗೆ ವಿದ್ಯಾಗಿರಿಯಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದ್ದಾರೆ.

ಡಿ.1ರಂದು ಸಮ್ಮೇಳನ ಉದ್ಘಾಟನೆ ಗೊಳ್ಳಲಿದ್ದು, 3ರಂದು ಸಮಾಪನಗೊಳ್ಳ ಲಿದೆ. ಸಮ್ಮೇಳನದ ರೂಪುರೇಖೆಗಳ ಕುರಿತು ಚರ್ಚೆ ನಡೆಯುತ್ತಿದ್ದು, ಶೀಘ್ರ ಅಂತಿಮ ಸ್ಪರ್ಶ ನೀಡಲಾಗುವುದು. ಸಮ್ಮೇಳನವನ್ನು ಅತ್ಯಂತ ಅರ್ಥಪೂರ್ಣ ಮತ್ತು ಆಕರ್ಷಕವಾಗಿ ಆಯೋಜಿಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರತಿನಿಧಿಯಾಗ ಬಯಸುವ ಕನ್ನಡಾಭಿಮಾನಿ ಗಳು 100 ರೂ. ಶುಲ್ಕ ನೀಡಿ ಸದಸ್ಯರಾಗಬಹುದು, ವಿದ್ಯಾರ್ಥಿಗಳಿಗೆ ಉಚಿತ. ಸಮ್ಮೇಳನ ಆಯೋಜನೆಗೆ ಸಿದ್ಧತೆ ನಡೆಯುತ್ತಿದ್ದು, ಕನ್ನಡ ನಾಡು ನುಡಿ ಸಂಸ್ಕೃತಿ ಪ್ರಿಯ ಕನ್ನಡ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಆಳ್ವಾಸ್ ನುಡಿಸಿರಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ವಿವರಕ್ಕೆ nಛಜಿಠಜ್ಟಿಜಿಃಚ್ಝಡಚಠ ಟ್ಟಜ ಅಥವಾ 08258- 261229 ಸಂರ್ಪಸಿ.

Leave a Reply

Your email address will not be published. Required fields are marked *

Back To Top