Sunday, 24th June 2018  

Vijayavani

ಆಪ್ತರ ಜತೆ ಮಾಜಿ ಸಿಎಂ ಸಭೆ ಹಿನ್ನೆಲೆ - ಸಿದ್ದರಾಮಯ್ಯ ಭೇಟಿಗೆ ತೆರಳಿದ ಪರಂ - ರಾಜಕೀಯ ವಿಚಾರಗಳ ಬಗ್ಗೆ ನಾಯಕರ ಚರ್ಚೆ ಸಾಧ್ಯತೆ        ಪ್ರಕೃತಿ ಚಿಕಿತ್ಸಾಲಯದಿಂದ ಹೊರ ಬಂದ ಸಿದ್ದು - ಅಭಿಮಾನಿಗಳ ಜತೆ ಮಾಜಿ ಸಿಎಂ ಚರ್ಚೆ - ಕೈ ಕಾರ್ಯಕರ್ತರ ಜತೆ ಸೆಲ್ಫಿಗೆ ಫೋಸ್​​        ಶಿವಮೊಗ್ಗದಲ್ಲಿ ಮತ್ತೆ ಝಳಪಿಸಿದ ಮಾರಕಾಸ್ತ್ರ - ರೌಡಿ ಶೀಟರ್​​​ ಹಬೀಬ್​ ಬರ್ಬರ ಹತ್ಯೆ - ತುಂಗಾನಗರ ಠಾಣೆಯಲ್ಲಿ ಪ್ರಕರಣ        ಖಾತೆ ಹಂಚಿಕೆಯಾಯ್ತು, ಈಗ ಬಂಗಲೆ ಸರದಿ - ಒಂದೊಂದು ಬಂಗಲೆಗೆ ಮೂವರ ಪೈಪೋಟಿ - ಸಿಎಂ ಕುಮಾರಸ್ವಾಮಿಗೆ ಬಂಗಲೆ ಕೊಡೋದೇ ಚಿಂತೆ        ಹಿಟ್​​ಲಿಸ್ಟ್​​ನಲ್ಲಿದ್ದ 20 ಉಗ್ರರ ಪೈಕಿ ಇಬ್ಬರು ಫಿನಿಶ್ - ಕುಲ್ಗಾಮದಲ್ಲಿ ಇಬ್ಬರು ಎಲ್​​ಇಟಿ ಉಗ್ರರು ಉಡೀಸ್​ - ಶಸ್ತ್ರ ಸಹಿತ ಒಬ್ಬ ಟೆರರ್​ ಸರೆಂಡರ್        ಮನೆಗಾಗಿ ಕಣ್ಣೀರಿಟ್ಟ ವೃದ್ಧೆಗೆ ಶಾಸಕರ ಸಹಾಯ - 20 ಸಾವಿರ ಹಣ ನೀಡಿದ ಡಾ.ರಂಗನಾಥ - ದಿಗ್ವಿಜಯ ನ್ಯೂಸ್​ ವರದಿಗೆ ಸ್ಪಂದಿಸಿದ ಕುಣಿಗಲ್​ ಶಾಸಕ       
Breaking News

ತುಮಕೂರು ಮಹಾನಗರದಲ್ಲಿ ನೀರಿಗೆ ಹಾಹಾಕಾರ

Tuesday, 12.06.2018, 3:00 PM       No Comments

ತುಮಕೂರು:  ಮಳೆಗಾಲದಲ್ಲಿಯೇ ತುಮಕೂರು ಮಹಾನಗರ ಕುಡಿಯುವ ನೀರಿಗೆ ಹಾಹಾಕಾರ ಎದುರಿಸುವಂತಾಗಿದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ ಬುಗಡನಹಳ್ಳಿ, ಹೆಬ್ಬಾಕ ಕೆರೆಯಲ್ಲಿ ನೀರು ಖಾಲಿಯಾಗಿದ್ದು, ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚಿಸಿದರು.

ಕೊಳವೆಬಾವಿಗಳ ಮೂಲಕ ನಗರಕ್ಕೆ ನೀರು ಪೂರೈಸಲಾಗುತ್ತಿದೆ. ಹೇಮಾವತಿ ಜಲಾಶಯದಲ್ಲಿ ಈಗ 4 ಟಿಎಂಸಿ ನೀರಿದ್ದು, 20 ಟಿಎಂಸಿ ಶೇಖರಣೆಯಾದರೆ ಜಿಲ್ಲೆಗೆ ನೀರು ಹರಿಸಲು ಸಾಧ್ಯ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನೀರಿಗೆ ಹಾಹಾಕಾರ ಉಂಟಾಗಿರುವುದರಿಂದ ಮಹಾನಗರ ಪಾಲಿಕೆ ವಿಶೇಷ ಸಭೆ ಕರೆದು ವಿಶೇಷ ಅನುದಾನಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ವನಿಸಲಾಗಿದೆ. ಕೊಳವೆಬಾವಿ ನಿರ್ವಹಣೆ, ಹೊಸ ಕೊಳವೆಬಾವಿ ಕೊರೆಯಲು ಪಾಲಿಕೆ ಆಯುಕ್ತ ಮಂಜುನಾಥಸ್ವಾಮಿ ಕಿರಿಕಿರಿ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ನಗರದಲ್ಲಿ 564 ಕೊಳವೆಬಾವಿಗಳಿದ್ದು, ಇವುಗಳು ಎಲ್ಲಿವೆ ಎಂಬ ಮಾಹಿತಿ ಪಾಲಿಕೆ ಅಧಿಕಾರಿಗಳು ನೀಡಬೇಕಿದೆ. 2 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ 64 ಕೊಳವೆಬಾವಿ ಕೊರೆಯಲು ಪಾಲಿಕೆ ಸಭೆಯಲ್ಲಿ ಒಪ್ಪಿಗೆ ಸೂಚಿಸಿದ್ದರೂ ಪಾಲಿಕೆ ಆಯುಕ್ತ ವಿನಾಕಾರಣ ತಡ ಮಾಡುತ್ತಿದ್ದಾರೆ ಎಂದರು.

ಬುಗಡನಹಳ್ಳಿ ಕೆರೆಯಲ್ಲಿ ಹೂಳು ತೆಗೆಯಲು 63 ಕೋಟಿ ರೂ. ಯೋಜನೆಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಮಳೆ ಬಂದಿರುವುದು ಕಾಮಗಾರಿ ಆರಂಭಕ್ಕೆ ಅಡ್ಡಿಯಾಗಿದೆ. ಮೈದಾಳ ಕರೆ ಹೂಳು ತೆಗೆಯಲು 2008ರಲ್ಲಿ ಕೆಐಡಿಬಿಗೆ ಸಲ್ಲಿಸಿದ್ದ ಪ್ರಸ್ತಾವನೆ ಇನ್ನೂ ಅದೇ ಹಂತದಲ್ಲಿದೆ ಎಂದರು.

ಒತ್ತುವರಿ ತೆರವಿಗೆ ವಿಶೇಷ ಕಾರ್ಯಪಡೆ: ತುಮಕೂರು ಸುತ್ತಮುತ್ತಲ ಕೆರೆಗಳಲ್ಲಿ ನೀರು ಶೇಖರಿಸಿಕೊಳ್ಳದಿದ್ದರೆ ಉಳಿಗಾಲವಿಲ್ಲ. ಅಂತರ್ಜಲಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಅಮಾನಿಕೆರೆ ಹಾಗೂ ಮರಳೂರು ಕೆರೆಗಳಿಗೆ ಪೈಪ್​ಲೈನ್ ಮೂಲಕ ಹೇಮಾವತಿ ನೀರು ಹರಿಸಲು ಸರ್ಕಾರ ಒಪ್ಪಿಗೆ ನೀಡಬೇಕು. 71 ಎಂಸಿಎಫ್​ಟಿ ನೀರಿನಲ್ಲಿ ಈ ಎರಡೂ ಕೆರೆ ತುಂಬಿಸಲು ಸಾಧ್ಯವಿದೆ. ಕೆರೆಗೆ ಮಳೆ ನೀರು ಸರಾಗವಾಗಿ ಹರಿಯಲು ಒತ್ತುವರಿಯಾಗಿರುವ ರಾಜಕಾಲುವೆ ಒತ್ತುವರಿ ತೆರವಿಗೆ ವಿಶೇಷ ಕಾರ್ಯಪಡೆ ರಚಿಸಬೇಕು ಎಂದು ಜಿಲ್ಲಾಧಿಕಾರಿಗೆ ಈಗಾಗಲೇ ಮನವಿ ಮಾಡಿದ್ದೇನೆ. ಒತ್ತುವರಿ ತೆರವು ಮಾಡಿ ತಡೆಗೋಡೆ ನಿರ್ವಿುಸುವ ಕಾರ್ಯ ಮುಂದಿನ ದಿನಗಳಲ್ಲಿ ನಡೆಯಲಿದೆ ಎಂದು ಜಿ.ಬಿ.ಜ್ಯೋತಿಗಣೇಶ್ ಹೇಳಿದರು.

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪಾಲಿನ ಹೇಮಾವತಿ ನೀರು ಆರಂಭದಿಂದಲೇ ಪಡೆಯಲು ಡಿಸಿಎಂ ಡಾ.ಜಿ.ಪರಮೇಶ್ವರ್ ಹಾಗೂ ಸಚಿವರು ಕ್ರಮಕೈಗೊಳ್ಳಬೇಕು. ತುಮಕೂರು ನಗರದ ಪಾಲಿನ ನೀರಿನಲ್ಲಿಯೇ ಅಮಾನಿಕೆರೆ ಹಾಗೂ ಮರಳೂರು ಕೆರೆಗೆ ಪೈಪ್​ಲೈನ್ ಮೂಲಕ ಹೇಮಾವತಿ ನೀರು ಹರಿಸುವ ಯೋಜನೆಗೆ ಸರ್ಕಾರ ಒಪ್ಪಿಗೆ ನೀಡಬೇಕು.

| ಜಿ.ಬಿ.ಜ್ಯೋತಿಗಣೇಶ್ ಶಾಸಕ

ತುಮಕೂರಿಗೆ ಮೈದಾಳ ಕೆರೆಯೇ ಆಶ್ರಯ: ಮೈದಾಳ ಕೆರೆಯಲ್ಲಿ ಮಳೆಯಿಂದ ಶೇ.90 ನೀರು ಸಂಗ್ರಹವಾಗಿದ್ದು, ಕೋಡಿ ಬೀಳುವ ಹಂತದಲ್ಲಿದೆ. ಮೈದಾಳ ಕೆರೆಯಿಂದ ತುಮಕೂರು ನಗರಕ್ಕೆ ನೀರು ತರಲು 8 ಇಂಚು ಪೈಪು ಅಳವಡಿಸಲಾಗಿದ್ದು, ಇದು ಶಿಥಿಲವಾಗಿ ನೀರು ಹರಿಸುವಾಗ ತೊಂದರೆಯಾಗುತ್ತಿದೆ. ಇದರೊಂದಿಗೆ 10 ಇಂಚು ಅಳತೆಯ ಮತ್ತೊಂದು ಪೈಪ್ ಅಳವಡಿಸಲು ಪಾಲಿಕೆಯಲ್ಲಿ ಹಣವಿದ್ದು, ಯೋಜನೆಗೆ ಸರ್ಕಾರ ಅನುಮತಿ ನೀಡಬೇಕು ಎಂದು ಜ್ಯೋತಿಗಣೇಶ್ ಕೋರಿದರು.

Leave a Reply

Your email address will not be published. Required fields are marked *

Back To Top