Friday, 20th July 2018  

Vijayavani

ಶೀರೂರು ಶ್ರೀಗಳ ಸಾವು ಕೊಲೆಯಲ್ಲ - ಅವರಿಗೆ ಮೊದಲಿಂದಲೂ ಅನಾರೋಗ್ಯ ಇತ್ತು - ಉಡುಪಿಯಲ್ಲಿ ಪೇಜಾವರ ಶ್ರೀ ಸ್ಪಷ್ಟನೆ        ರಾಹುಲ್‌ ಅಪ್ಪುಗೆಗೆ ಬಿಜೆಪಿ ಸಿಡಿಮಿಡಿ - ಸದನದಲ್ಲಿನ ವರ್ತನೆ ಬಗ್ಗೆ ಕೋಪ - ರಾಹುಲ್‌ಗೆ ಸ್ಪೀಕರ್‌ ನೀತಿಪಾಠ        ಭಾಷಣಕ್ಕಿಂತ ರಾಹುಲ್‌ ಕಣ್ಣೇಟು ಫೇಮಸ್‌ - ಪ್ರಿಯಾ ವಾರಿಯರ್‌ ವಿಡಿಯೋಗೆ ಲಿಂಕ್‌ - ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ವೈರಲ್‌        ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ - ಕಾವೇರಿಗೆ ಮುಖ್ಯಮಂತ್ರಿ ದಂಪತಿಯಿಂದ ಪೂಜೆ - ಸಚಿವ ಡಿಕೆಶಿ, ಮಹೇಶ್‌ ಸಾಥ್‌        ಸಿಬ್ಬಂದಿ ಒತ್ತಾಯದಿಂದ ಅಲ್ಲಿಗೆ ಹೋಗಿದ್ದೆ - ಮೊಗಸಾಲೆಯಲ್ಲಿ ಬರ್ತಡೇ ಪಾರ್ಟಿ ತಪ್ಪು - ಕ್ಷಮೆ ಕೋರಿದ ವಿಧಾನಸಭೆ ಕಾರ್ಯದರ್ಶಿ        ನಿನ್ನೆ ಬೌಬೌ ಬಿರಿಯಾನಿ - ಇಂದು ಮಿಯಾಂವ್‌ ಮಿಯಾಂವ್‌ ಮಸಾಲ - ಬೆಂಗಳೂರಿನ ವಿಜಯನಗರದಲ್ಲಿ ಬೆಕ್ಕು ನಾಯಿ ಭಕ್ಷ       
Breaking News

ದುಲೀಪ್ ಟ್ರೋಫಿಯಿಂದ ಹೊರಬಿದ್ದ ಕೆ.ಗೌತಮ್

Thursday, 14.09.2017, 3:00 AM       No Comments

ಕಾನ್ಪುರ: ಕರ್ನಾಟಕದ ಆಲ್ರೌಂಡರ್ ಕೆ. ಗೌತಮ್ ಅನಾರೋಗ್ಯದಿಂದಾಗಿ ದುಲೀಪ್ ಟ್ರೋಫಿಯ ಮುಂದಿನ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಇಂಡಿಯಾ ರೆಡ್ ತಂಡದ ನಾಯಕ ದಿನೇಶ್ ಕಾರ್ತಿಕ್ ಹೇಳಿದ್ದಾರೆ. ಅವರ ಬದಲು ಮುಂಬೈ ಎಡಗೈ ಸ್ಪಿನ್ನರ್ ವಿಜಯ್ ಗೋಹಿಲ್ ರೆಡ್ ಪರ ಕಣಕ್ಕಿಳಿದಿದ್ದಾರೆ. ಅನಾರೋಗ್ಯದ ನಡುವೆಯೂ ಗೌತಮ್ ಮಂಗಳವಾರ ಕೆಪಿಎಲ್​ನಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡದ ಪರ ಆಡಿದ್ದರು. ದುಲೀಪ್ ಟ್ರೋಫಿಯ ಫೈನಲ್ ಸೆ. 25ರಿಂದ 29ರವರೆಗೆ ನಡೆಯಲಿದೆ. ಇದೇ ಸಮಯದಲ್ಲಿ ನ್ಯೂಜಿಲೆಂಡ್ ಎ ತಂಡದ ವಿರುದ್ಧ ಭಾರತ ಎ ತಂಡದ ಮೊದಲ ಚತುರ್ದಿನ ಟೆಸ್ಟ್ ಸೆ. 23ರಂದು ಆರಂಭವಾಗಲಿದೆ. ಭಾರತ ಎ ತಂಡದ ಪರ ಆಡುವ ದೃಷ್ಟಿಯಿಂದ ಗೌತಮ್ ವಿಶ್ರಾಂತಿ ಪಡೆಯಲಿದ್ದಾರೆ.

Leave a Reply

Your email address will not be published. Required fields are marked *

Back To Top