Tuesday, 21st November 2017  

Vijayavani

1. ಇಂಧನ ಇಲಾಖೆಯಲ್ಲಿ ಅವ್ಯವಹಾರ ಆರೋಪ – ವಿಧಾನಸಭೆಯಲ್ಲಿ ಸದನ ಸಮಿತಿ ವರದಿ ಮಂಡನೆ – ಸಂಸದೆ ಶೋಭಾ ವಿರುದ್ಧ ಡಿಕೆಶಿ ಅಸ್ತ್ರ 2. ಮದ್ಯಪಾನ ನಿಷೇಧಕ್ಕೆ ಸದನದಲ್ಲಿ ಗುದ್ದಾಟ – ಮದ್ಯ ವಿರೋಧಿ ಹೋರಾಟಕ್ಕೆ ಶೆಟ್ಟರ್​ ಸಾಥ್​​​​​ – ಸಿಎಂ ವಿರುದ್ಧ ಸಂಜಯ್​​ ಪಾಟೀಲ್​​ ಕಟು ಟೀಕೆ 3. 63ರಲ್ಲಿ ಬಿಡುಗಡೆಯಾಗಿತ್ತು ಪದ್ಮಾವತಿ ಚಿತ್ರ – ಆಗಿಲ್ಲದ ವಿವಾದ ಈಗ ಸೃಷ್ಟಿ – ವಿರೋಧಿ ಪಡೆಗೆ ಪ್ರಶ್ನೆ ಮುಂದಿಟ್ಟ ಚಿತ್ರತಂಡ 4. ತ್ರಿವಳಿ ತಲಾಖ್​ಗೆ ಸದ್ಯದಲ್ಲೇ ಬ್ರೇಕ್​ – ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ – ಕೇಂದ್ರ ಸರ್ಕಾರದ ಮಹತ್ವದ ನಡೆ 5. ಐಶ್ವರ್ಯ ಫೋಟೋ ತೆಗೆಯಲು ನೂಕುನುಗ್ಗಲು – ಮಾಧ್ಯಮದವರ ನಡೆಗೆ ಬಚ್ಚನ್​​​​​​​ ಸೊಸೆ ಕಣ್ಣೀರು – ಕೈಮುಗಿದು ಕಣ್ಣೀರಿಟ್ಟ ಐಶ್ವರ್ಯ
Breaking News :

ದೇಶದಲ್ಲೇ ಮಾದರಿ ರಾಜ್ಯ ನಿರ್ಮಾಣಕ್ಕೆ ಮತ್ತೆ ಕಾಂಗ್ರೆಸ್ ಬೆಂಬಲಿಸಿ

Wednesday, 13.09.2017, 3:08 AM       No Comments

ಬಳ್ಳಾರಿ: ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಮುಂದುವರಿಯಲು ಹಾಗೂ ದೇಶದಲ್ಲಿ ಮಾದರಿ ರಾಜ್ಯ ನಿರ್ಮಾಣಕ್ಕೆ ಮತ್ತೆ ಕಾಂಗ್ರೆಸ್​ಗೆ ಅಧಿಕಾರ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೋರಿದರು.

ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಮಂಗಳ ವಾರ ಜಿಲ್ಲಾಡಳಿತ, ಜಿಪಂನಿಂದ ಆಯೋಜಿಸಲಾಗಿದ್ದ ಬಳ್ಳಾರಿ ಅಭಿವೃದ್ಧಿ ಹಾಗೂ ಸಾಮಾಜಿಕ ಸಮಾವೇಶ ಮತ್ತು ಕಾರ್ವಿುಕ ಇಲಾಖೆಯ ನೂತನ ಯೋಜನೆ ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯ ಬಳಿಕ ಇದೇ ಮೊದಲ ಬಾರಿಗೆ ಒಂದೇ ಕಾರ್ಯಕ್ರಮದಲ್ಲಿ 2959 ಕೋಟಿ ರೂ. ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ 165 ಭರವಸೆಗಳ ಪೈಕಿ 155 ಭರವಸೆ ಈಡೇರಿಸಿದ್ದೇವೆ. ಪ್ರತಿ ಬಜೆಟ್​ನಲ್ಲೂ ಪ್ರಣಾಳಿಕೆಯ ಭರವಸೆಗಳಿಗೆ ಆದ್ಯತೆ ನೀಡಿದ್ದೇವೆ ಎಂದರು.

ಬಜೆಟ್ ತಯಾರಿಕೆ ವೇಳೆ ಬಡವರು, ರೈತರು, ಮಹಿಳೆಯರು, ಅಹಿಂದ ವರ್ಗದವರು ನನ್ನ ಕಣ್ಣಿಗೆ ಕಾಣಿಸುತ್ತಿದ್ದರು. ಸಾಮಾಜಿಕ ಹಾಗೂ ಆರ್ಥಿಕ ತಾರತಮ್ಯ ನಿವಾರಣೆಗೆ ಆದ್ಯತೆ ನೀಡಿದ್ದೇವೆ. ಸಾಮಾಜಿಕ ನ್ಯಾಯಕ್ಕೆ ನಾವು ಬದ್ಧ. ಸರ್ಕಾರದ ಯೋಜನೆಗಳು ನನಗೆ ತೃಪ್ತಿ ತಂದಿವೆ. ರಾಜ್ಯ ಸರ್ಕಾರ ಜಾರಿಗೆ ತಂದ ಹಲವು ಯೋಜನೆಗಳನ್ನು ದೇಶದ ಇತರೆ ರಾಜ್ಯಗಳು ಅನುಸರಿಸಲು ಮುಂದಾಗಿವೆ ಎಂದರು.

ಬಾಯಿಬಿಡದ ಬಿಜೆಪಿ: ರಾಜ್ಯದಲ್ಲಿ ವೀರಾವೇಶ ದಿಂದ ವರ್ತಿಸುವ ಬಿಜೆಪಿ ನಾಯಕರು ರೈತರ ಸಾಲಮನ್ನಾಕ್ಕಾಗಿ ದೆಹಲಿಗೆ ಸರ್ವಪಕ್ಷ ನಿಯೋಗ ಹೋದಾಗ ಪ್ರಧಾನಿ ನರೇಂದ್ರ ಮೋದಿ ಬಳಿ ಬಾಯಿ ಬಿಡಲಿಲ್ಲ. ಸಾಮರಸ್ಯಕ್ಕೆ ಧಕ್ಕೆಯಾಗುವ ಹಿನ್ನೆಲೆಯಲ್ಲಿ ಮಂಗಳೂರು ಚಲೋ ಬೈಕ್ ರ‍್ಯಾಲಿ ಬೇಡ, ಸಾಲಮನ್ನ್ನಾಕ್ಕಾಗಿ ದೆಹಲಿ ಚಲೋ ರ‍್ಯಾಲಿ ನಡೆಸಿ ಎಂದು ಹೇಳಿದೆ. ಆದರೆ, ಬಿ.ಎಸ್.ಯಡಿಯೂರಪ್ಪ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ರೈತರ ಬಗ್ಗೆ ಮಾತನಾಡಲು ನೈತಿಕತೆ ಇಲ್ಲದ ಬಿಜೆಪಿಯನ್ನು ಧಿಕ್ಕರಿಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ಸಚಿವ ಎಚ್. ಆಂಜನೇಯ ಮಾತನಾಡಿ, ನುಡಿದಂತೆ ನಡೆವ ಸಿದ್ಧಾಂತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಪ್ರವರ್ತಕ ಹಾಗೂ ಬಡವರ ಚಾಂಪಿಯನ್ ಆಗಿದ್ದಾರೆ. ಬಡವರ ಪರ ಕಾರ್ಯಕ್ರಮ ಸಹಿಸಿಕೊಳ್ಳದ ಕೆಲವರು ಸರ್ಕಾರವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿ ಈ ಸರ್ಕಾರ ಮುಂದುವರಿಯಬೇಕು. ರಾಜ್ಯದಲ್ಲಿ ವಿರೋಧ ಪಕ್ಷಗಳಿಗೆ ಅಸ್ತಿತ್ವ ಇಲ್ಲ. ಇದರಿಂದಾಗಿ ಸಿದ್ದರಾಮಯ್ಯ ಮತ್ತೆ ರಾಜ್ಯ ಆಳಲಿದ್ದಾರೆ ಎಂದರು. ಸಚಿವರಾದ ತನ್ವೀರ್ ಸೇಠ್, ಸಂತೋಷ್ ಲಾಡ್ ಸೇರಿ ಇತರರು ಇದ್ದರು.

ನಾನೂ ಮಣ್ಣಿನ ಮಗನೇ

ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ ಮಾತ್ರ ಮಣ್ಣಿನ ಮಕ್ಕಳಾ? ಹಾಗಾದರೆ ರೈತರ ಸಾಲಮನ್ನಾ ಮಾಡಿದ ನಾವು ಯಾರು? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ನಾನೂ ಮಣ್ಣಿನ ಮಗನೇ. ನಾನು ಯಾವಾಗಲೂ ದಲಿತರ ಜತೆಯೇ ಇರುತ್ತೇನೆ. ಯಡಿಯೂರಪ್ಪಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ಅವರೊಂದಿಗೆ ಸಂಬಂಧ ಬೆಳೆಸಲಿ. ಬಿಎಸ್​ವೈಗೆ ದಲಿತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ಖರ್ಗೆ ಮರೆತರು

ಕಾಂಗ್ರೆಸ್ ಪಕ್ಷ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಒತ್ತಡ ಹೇರಿದ್ದರಿಂದ ಅಂದಿನ ಪ್ರಧಾನಿ ಮನಮೋಹನ್​ಸಿಂಗ್ ಹೈದರಾಬಾದ್ ಕರ್ನಾಟಕಕ್ಕೆ ಕಲಂ 371(ಜೆ) ಮೂಲಕ ವಿಶೇಷ ಸ್ಥಾನಮಾನ ಕಲ್ಪಿಸಿದರು. ಜನಾರ್ದನರೆಡ್ಡಿ, ಶ್ರೀರಾಮುಲುಗೆ ಇದೆಲ್ಲಾ ತಿಳಿಯುತ್ತಾ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅಪ್ಪಿತಪ್ಪಿಯೂ ಇದಕ್ಕೆ ಶ್ರಮಿಸಿದ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪ ಮಾಡಲಿಲ್ಲ.

 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕೊಲೆ ಪ್ರಕರಣದಲ್ಲಿ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದವರು. ಅವರಿಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ.

| ಸಿದ್ದರಾಮಯ್ಯ ಮುಖ್ಯಮಂತ್ರಿ

 

ಕಾಂಗ್ರೆಸ್​ನಲ್ಲಿ ಕೋಟ್ಯಂತರ ಅಮಿತ್ ಷಾ ಗಳಿದ್ದಾರೆ. ಇದರಿಂದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಟ ರಾಜ್ಯದಲ್ಲಿ ನಡೆಯುವುದಿಲ್ಲ.

| ಉಮಾಶ್ರೀ ಸಚಿವೆ

Leave a Reply

Your email address will not be published. Required fields are marked *

Back To Top