Tuesday, 17th July 2018  

Vijayavani

ಬಜೆಟ್​​ನಲ್ಲಿ ಅನ್ನಭಾಗ್ಯ ಅಕ್ಕಿ ಕಡಿತ ವಿಚಾರ - 5 ಕೆಜಿ ಅಲ್ಲ, ನಾವು 7 ಕೆಜಿ ಕೊಡುತ್ತೇವೆ - ಆಹಾರ ಸಚಿವ ಜಮೀರ್ ಅಹಮ್ಮದ್ ಹೇಳಿಕೆ        ಲೋಕಸಭೆ ಅಧಿವೇಶನ, ಬಿಜೆಪಿ ಸಭೆ ಹಿನ್ನೆಲೆ- ಜುಲೈ 28ರಂದು ರಾಜ್ಯಕ್ಕೆ ಅಮಿತ್ ಷಾ ಬರೋದು ಡೌಟ್- ದಿಲ್ಲಿಯಲ್ಲೇ ಉಳೀತಾರಾ ಬಿಜೆಪಿ ರಾಷ್ಟ್ರಾಧ್ಯಕ್ಷ?        ಸಚಿವ ಡಿಕೆಶಿ ಒಬ್ಬ ಹುಚ್ಚು ದೊರೆ - ಮೊಹಮ್ಮದ್ ಬಿನ್ ತುಘಲಕ್ ರೀತಿ ಆಡ್ತಿದ್ದಾರೆ - ಮಿನಿಸ್ಟರ್ ವಿರುದ್ಧ ಗುಡುಗಿದ ಮಾಜಿ ಸಂಸದ ಬಸವರಾಜು        ಮಡಿಕೇರಿಯಲ್ಲಿ ಮುಂದುವರಿದ ವರುಣನ ಆರ್ಭಟ - ಹಾರಂಗಿಯಿಂದ ಭಾರಿ ಪ್ರಮಾಣದಲ್ಲಿ ನದಿಗೆ ನೀರು - ಶಾಲಾ ಕಾಲೇಜ್‌ಗಳಿಗೆ ರಜೆ ಮುಂದುವರಿಕೆ        ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ - ಪಾರ್ಲಿಮೆಂಟ್​ನಲ್ಲಿ ಪ್ರಧಾನಿ ಸರ್ವ ಪಕ್ಷ ಸಭೆ - ಸುಗಮ ಕಲಾಪಕ್ಕೆ ಸಹಕರಿಸುವಂತೆ ಮನವಿ        ಯುವತಿಗೆ ಕಿರುಕುಳ ನೀಡಿದ ಹೋಮ್‌ಗಾರ್ಡ್‌ - ಆರೋಪಿಯನ್ನ ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿತ - ಯುವತಿ ಹೊಡಿತಕ್ಕೆ ಹೋಮ್‌ಗಾರ್ಡ್‌ ಹಣ್ಣುಗಾಯಿ ನೀರ್‌ಗಾಯಿ       
Breaking News

ದ್ವಿಭಾಷಾ ಚಿತ್ರದಲ್ಲಿ ಧನಂಜಯ?

Wednesday, 13.06.2018, 3:03 AM       No Comments

ಬೆಂಗಳೂರು: ‘ಟಗರು’ ಚಿತ್ರದಲ್ಲಿ ಡಾಲಿ ಪಾತ್ರ ಮಾಡಿದ ಮೇಲೆ ನಟ ಧನಂಜಯ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ. ಅದರ ಯಶಸ್ಸಿನಿಂದ ಹೊಸ ಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಲೇಟೆಸ್ಟ್ ಮಾಹಿತಿ ಏನೆಂದರೆ, ಮೊದಲ ಬಾರಿಗೆ ದ್ವಿಭಾಷಾ ಚಿತ್ರವೊಂದರಲ್ಲಿ ಅವರು ನಟಿಸುತ್ತಿದ್ದಾರೆ. ಅದು ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ವ ಮಾರ್ಗದರ್ಶನದಲ್ಲಿ ಮೂಡಿಬರುತ್ತಿರುವ ಸಿನಿಮಾ.

ಕನ್ನಡದಲ್ಲಿ ಈಗಾಗಲೇ ‘ಅಂದರ್ ಬಾಹರ್’, ‘ಹೌರಾ ಬ್ರಿಡ್ಜ್’ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ರಾಶಿ ಕಂಬೈನ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡಲಿದ್ದು, ರಾಮ್ ಗೋಪಾಲ್ ವರ್ವ ಇದರ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡಲಿದ್ದಾರಂತೆ. ಅವರ ಸಹಾಯಕರೊಬ್ಬರು ಈ ಸಿನಿಮಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ ಎನ್ನಲಾಗಿದೆ. ಇದು ಹಳ್ಳಿ ಸೊಗಡಿನ ಕಥೆ ಹೊಂದಿರಲಿದ್ದು, ಜೂನ್ 15ರಂದು ಶೂಟಿಂಗ್ ಶುರುವಾಗಲಿದೆಯಂತೆ.

ಕೆಲ ದಿನಗಳ ಹಿಂದೆಯೇ ಧನಂಜಯ ಹೈದರಾಬಾದ್​ಗೆ ತೆರಳಿದ್ದರು. ಅದು ರಾಮ್ೋಪಾಲ್ ವರ್ವ ಅವರನ್ನು ಭೇಟಿ ಮಾಡುವುದಕ್ಕಾಗಿಯೇ ಎಂಬುದು ಆಗ ಸುದ್ದಿಯಾಗಿತ್ತು. ಅಲ್ಲದೆ, ‘ಟಗರು’ ಚಿತ್ರ ವೀಕ್ಷಿಸಲು ಬೆಂಗಳೂರಿಗೆ ಬಂದಿದ್ದ ಆರ್​ಜಿವಿ, ಧನಂಜಯ ನಟನೆ ಬಗ್ಗೆ ಸಾಕಷ್ಟು ಮೆಚ್ಚುಗೆ ಮಾತುಗಳನ್ನಾಡಿದ್ದರು. ಇದೀಗ ಅದು ಧನಂಜಯ ನಾಯಕತ್ವದಲ್ಲೇ ಸಿನಿಮಾ ಮಾಡುವ ಹಂತಕ್ಕೆ ಬಂದಿದೆ ಎನ್ನಲಾಗುತ್ತಿದೆ. ಈ ಚಿತ್ರ ಕನ್ನಡ-ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಸಿದ್ಧಗೊಳ್ಳಲಿದೆ. ಇದುವರೆಗೂ ಕನ್ನಡ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ ಧನಂಜಯ, ಈ ಮೂಲಕ ಮೊದಲ ಬಾರಿಗೆ ಪರಭಾಷೆಗೆ ಕಾಲಿಟ್ಟಂತಾಗಲಿದೆ. ಇನ್ನು, ತಾರಾಬಳಗದಲ್ಲಿ ಯಾರ್ಯಾರು ಇರಲಿದ್ದಾರೆ? ತಂತ್ರಜ್ಞರು ಯಾರ್ಯಾರು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಈ ಚಿತ್ರದ ಬಗ್ಗೆ ಚಿತ್ರತಂಡ ಇದುವರೆಗೂ ಅಧಿಕೃತ ಮಾಹಿತಿ ಬಿಟ್ಟುಕೊಟ್ಟಿಲ್ಲ.

Leave a Reply

Your email address will not be published. Required fields are marked *

Back To Top