Tuesday, 16th October 2018  

Vijayavani

ಉಪ ಮಹಾಸಂಗ್ರಾಮದ ಅಖಾಡ ಫೈನಲ್-ಕೊನೆದಿನ ಉಗ್ರಪ್ಪ, ಶಾಂತಾ, ಮಧು ನಾಮಪತ್ರ- ಎಲೆಕ್ಷನ್ ಗೆಲ್ಲಲು ತಂತ್ರ, ಪ್ರತಿತಂತ್ರ        ರಣಕಣದಲ್ಲಿ ಆರಂಭವಾಯ್ತಾ ಜಾತಿ ಮೇಲಾಟ?-ಡಿಕೆಗೆ ಪೋಸ್ ಲೀಡರ್ ಅಂತಾ ಜಾರಕಿಹೊಳಿ ಟಾಂಗ್- ಇನ್ನೂ ಆರದ ಕೈ ದಳ್ಳುರಿ.!        ನಾಮಿನೇಷನ್ ಆಯ್ತು ಈಗ ಯುದ್ಧ ಸ್ಟಾರ್ಟ್​- ಉಪಚುನಾವಣೆಯಲ್ಲಿ ಯಾರ ಪರ ಇದೆ ಜನಮತ- ದಿಗ್ವಿಜಯ ಗ್ರೌಂಡ್​ ರಿಪೋರ್ಟ್​        ನಾಳೆ ಶಬರಿಮಲೈ ದೇವಸ್ಥಾನ ಬಾಗಿಲು ಓಪನ್- ಪ್ರವೇಶಕ್ಕೆ ಕೆಲ ನಾರಿಯರ ಕಾತರ- ಮಹಿಳಾ ಎಂಟ್ರಿ ವಿರುದ್ಧ ಭುಗಿಲೆದ್ದ ಹೋರಾಟ        ಬಿಹಾರ ಲೋಕಗುರಿ ತಲುಪಲು ನಿತೀಶ್ ಹೊಸಬಾಣ- ಪ್ರಶಾಂತ್​ ಕಿಶೋರ್​​ ಗೆ ಪಕ್ಷದಲ್ಲಿ ಜವಾಬ್ದಾರಿ        ಮೈಸೂರು ದಸರಾದಲ್ಲಿ ಮತ್ತಷ್ಟು ವೈಭವ -2000 ಬೊಂಬೆಗಳ ಪ್ರದರ್ಶನ-ಆನೆಗಳಿಗೆ ಅಂತಿಮ ತಾಲೀಮು, ಕಳೆಗಟ್ಟಿದ ಪುಷ್ಪಲೋಕ       
Breaking News

ನನ್ನ ಸಾವಿನಿಂದಾದರೂ ಎಚ್ಚೆತ್ತು ಉದ್ಯೋಗ ಸೃಷ್ಟಿಸಿ

Wednesday, 04.07.2018, 3:03 AM       No Comments

ದಾವಣಗೆರೆ: ಯುವ ಜನರಿಗೆ ಉದ್ಯೋಗ ಸೃಷ್ಟಿಸಿ, ಬಡತನ ನಿವಾರಿಸಿ ಎಂದು ಸಿಎಂ ಕುಮಾರಸ್ವಾಮಿ ಅವರಿಗೆ ವಿನಂತಿಸುವ ವಿಡಿಯೋ ಚಿತ್ರೀಕರಿಸಿ ಯುವಕನೊಬ್ಬ ಮಂಗಳವಾರ ನೇಣಿಗೆ ಶರಣಾಗಿದ್ದಾನೆ.

ಚನ್ನಗಿರಿ ತಾಲೂಕು ಹೊಸನಗರದ ಬಿಎ ಪದವೀಧರ ಬಿ. ಅನಿಲ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಗ್ರಾಮದ ಜಮೀನಿನಲ್ಲಿ ಅನಿಲ್ ತನ್ನ ಹೇಳಿಕೆ ವಿಡಿಯೋ ಚಿತ್ರೀಕರಿಸಿ ಮರಕ್ಕೆ ನೇಣು ಬಿಗಿದುಕೊಂಡ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮರಣಪೂರ್ವ ಪತ್ರ ಬರೆದಿಟ್ಟಿರುವ ಯುವಕ, ಸರ್ಕಾರ ಹಾಗೂ ರಾಜಕಾರಣಿಗಳ ವಿರುದ್ಧ ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ-ರಾಜ್ಯ ಸರ್ಕಾರ ವಿಫಲವಾಗಿವೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ನೌಕರಿ ಸಿಗುತ್ತಿಲ್ಲ. ಸರ್ಕಾರದ ನಡೆಗೆ ಬೇಸತ್ತು ಸಾವನ್ನಪ್ಪುತ್ತಿದ್ದೇನೆ ಎಂದು ಬರೆದಿದ್ದಾನೆ. ಸರ್ಕಾರಗಳು ನನ್ನ ಸಾವಿನಿಂದಾದರೂ ಎಚ್ಚೆತ್ತು ವಿದ್ಯಾವಂತರಿಗೆ ಉದ್ಯೋಗ ಸೃಷ್ಟಿಸಿ, ಬಡತನ ನಿಮೂಲನೆ ಮಾಡಲಿ ಎಂದು ಕೇಳಿಕೊಂಡಿದ್ದಾನೆ.

Leave a Reply

Your email address will not be published. Required fields are marked *

Back To Top