Friday, 22nd June 2018  

Vijayavani

ಮೈತ್ರಿ ಸರ್ಕಾರದಲ್ಲಿ ಮತ್ತೆ ತಾರತಮ್ಯತೆ - ರೇವಣ್ಣ ಕಾರ್​​​ಗೆ ಗೇಟ್​​ ಓಪನ್​​, ದೇಶಪಾಂಡೆಗೆ ನಟರಾಜ ಸರ್ವಿಸ್​​        ಅಂದು ಹೇಳಿದ್ದೊಂದು.. ಇಂದು ಮಾಡಿದ್ದೊಂದು - ಸಂಡೂರಿನಲ್ಲಿ ಕೊಟ್ಟು ಮಾತು ಮರೆತ ಸಿಎಂ - ಮತ್ತೆ ಗಣಿಗಾರಿಕೆಗೆ ಅವಕಾಶ        ಡಿಕೆಶಿ ಡೈರಿಯಲ್ಲಿ ಕೆಜಿ ಕೋಡ್​ ವಿಚಾರ - ದೆಹಲಿಯಿಂದ ಆಗಮಿಸಿದ ಇಡಿ ತಂಡ - ಡಿಕೆಶಿ ಸೇರಿ ಐವರು ವಿರುದ್ಧ ಇಡಿ FIR ಸಾಧ್ಯತೆ        ಶಕ್ತಿ ಭವನದಲ್ಲಿ ಬಜೆಟ್​​​ ಪೂರ್ವಭಾಗಿ ಸಭೆ - ಸಣ್ಣ ನೀರಾವರಿ ಇಲಾಖೆ ಜತೆ ಸಿಎಂ ಚರ್ಚೆ - ಅನುದಾನ ಭರವಸೆ ನೀಡಿದ ಎಚ್​ಡಿಕೆ        ಬಿಜಿಎಸ್​ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ - ನಡೆದಾಡುವ ದೇವರ ಕಾಣಲು ಗಣ್ಯರ ದಂಡು - ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​​ವೈ        ಜಿಲ್ಲಾಸ್ಪತ್ರೆಯಲ್ಲಿ ಅನಾಥವಾಯ್ತು ಕಂದಮ್ಮ - ಶಸ್ತ್ರಚಿಕಿತ್ಸೆಗೆ ಬಂದು ಮಗು ಬಿಟ್ಟೋದ ಹೆತ್ತಮ್ಮ - ರೋಧಿಸುತ್ತಿದೆ 3 ತಿಂಗಳ ಕೂಸು       
Breaking News

ನರಗುಂದದಲ್ಲಿ ಇಂದು ರೈತ ಬೃಹತ್ ಸಮಾವೇಶ

Sunday, 16.07.2017, 3:00 AM       No Comments

ಗದಗ/ನರಗುಂದ: ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಜು.16ಕ್ಕೆ ಭರ್ತಿ 2 ವರ್ಷ ತುಂಬಲಿದ್ದು, ರಾಜ್ಯ ರೈತ ಸೇನಾ ಸಂಘಟನೆ ಹಾಗೂ ಮಹದಾಯಿ, ಕಳಸಾ-ಬಂಡೂರಿ ಹೋರಾಟ ಸಮನ್ವಯ ಸಮಿತಿ ನರಗುಂದ ಪಟ್ಟಣದಲ್ಲಿ ಬೃಹತ್ ರೈತ ಸಮಾವೇಶ ಹಮ್ಮಿಕೊಂಡಿವೆ.

ಸಮಾವೇಶದಲ್ಲಿ ವಿವಿಧ ಮಠಾಧೀಶರು, ರೈತ ಸಂಘಗಳ ಮುಖಂಡರು ಸೇರಿ ಬೆಳಗಾವಿ, ಬಾಗಲಕೋಟೆ, ಧಾರವಾಡ ಜಿಲ್ಲೆಗಳಿಂದ ಹತ್ತು ಸಾವಿರಕ್ಕೂ ಅಧಿಕ ರೈತರು ಭಾಗವಹಿಸುವ ನಿರೀಕ್ಷೆಯಿದ್ದು, ಬೆಳಗ್ಗೆ 10ಕ್ಕೆ ಬಾಬಾಸಾಹೇಬ ಬಾವೆ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನಾ ಮೆರವಣಿಗೆಗೆ ಚಾಲನೆ ಸಿಗಲಿದೆ.

ಸಂಘಟನೆಗಳ ಬೆಂಬಲ: ಶ್ರೀರಾಮಸೇನೆ, ಕನ್ನಡಪರ ಸಂಘಟನೆಗಳು, ವಕೀಲರ ಸಂಘ, ದಲಿತ ಸಂಘ ಸೇರಿ ಇತರ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿವೆ.

 ಪೊಲೀಸ್ ಬಂದೋಬಸ್ತ್

ಅಧಿಕೃತವಾಗಿ ನರಗುಂದ ಬಂದ್​ಗೆ ಕರೆ ನೀಡದೆ ಇದ್ದರೂ ಅಘೊಷಿತ ಬಂದ್ ಇರಲಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ 6 ಸಿಪಿಐ, 2 ಡಿಎಸ್ಪಿ, 20 ಮಹಿಳಾ ಪೊಲೀಸರು ಸೇರಿ 500ಕ್ಕೂ ಹೆಚ್ಚು ಕಾನ್ಸ್​ಟೇಬಲ್, 300 ಹೋಮ್ ಗಾರ್ಡ್ಸ್ ನಿಯೋಜಿಸಲಾಗಿದೆ.

 

ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮನವೊಲಿಸಬೇಕು. ಗೋವಾ, ಮಹಾರಾಷ್ಟ್ರದ ಪ್ರತಿಪಕ್ಷ ನಾಯಕರಿಗೂ ಪತ್ರ ಬರೆಯಬೇಕು. ಅದನ್ನು ಬಿಟ್ಟು ರಾಜಕೀಯ ಮಾಡಲು ಹೊರಟಿದ್ದಾರೆ.

| ಜಗದೀಶ ಶೆಟ್ಟರ್, ವಿಧಾನಸಭೆ ಪ್ರತಿಪಕ್ಷ ನಾಯಕ

 

ಉತ್ತಮ ಪ್ರತಿಕ್ರಿಯೆ

ಕರ್ನಾಟಕ ಜನಹಿತ ವೇದಿಕೆ ಶನಿವಾರ ಕರೆ ನೀಡಿದ್ದ ರೋಣ ಮತ್ತು ಗಜೇಂದ್ರಗಡ ಬಂದ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಭಟನಾ ನಿರತರು ಮೆರವಣಿಗೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೊಷಣೆ ಕೂಗಿದರು. ಕಳಸಾ-ಬಂಡೂರಿ ಯೋಜನೆಗೆ ಸಂಬಂಧಿಸಿದ ವ್ಯಾಜ್ಯಗಳನ್ನು ಶೀಘ್ರ ಬಗೆಹರಿಸಬೇಕೆಂದು ಆಗ್ರಹಿಸಿ ಹುಬ್ಬಳ್ಳಿಯ ಕುಸುಗಲ್ ರೈತರು ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆ ನಡೆಸಿದರು. ಈ ವೇಳೆ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿತ್ತು.

Leave a Reply

Your email address will not be published. Required fields are marked *

Back To Top