Monday, 23rd April 2018  

Vijayavani

ಬಾದಾಮಿ ಕಾಂಗ್ರಸ್​​​​​ನಲ್ಲಿ ಭಿನ್ನಮತ- ಚಿಮ್ಮನಕಟ್ಟಿ, ದೇವರಾಜ್​​ ಪಾಟೀಲ್​​ ಕೋಲ್ಡ್​ವಾರ್​- ಪ್ರತ್ಯೇಕ ಸಭೆಗೆ ದೇವರಾಜ್​​ ಪಾಟೀಲ್ ನಿರ್ಧಾರ        ಇನ್ನೂ ಐದು ವರ್ಷ ಕ್ಷೇತ್ರಕ್ಕೆ ಬರಲ್ಲ- ನಾನು ಬರದಿದ್ರೆ ನಿಂಗೇನು ತೊಂದರೆ- ಕಾರ್ಯಕರ್ತರ ಕೋರಿಕೆಗೆ ಸಂತೋಷ್​​ ಲಾಡ್​​ ದರ್ಪ        ಇಂದು ಬೆಂಗಳೂರಲ್ಲಿ ಅಂಬಿ ಸುದ್ದಿಗೋಷ್ಠಿ- ಚುನಾವಣಾ ಕಣದಿಂದ ಹಿಂದೆ ಸರಿದ ಅಂಬರೀಷ್​​​​- ಹೈಕಮಾಂಡ್​ಗೆ ಅಂಬಿ ಮಾಹಿತಿ        ಅಖಾಡದಲ್ಲಿ ಮತ್ತೆ ಒಂದಾದ ರೆಡ್ಡಿ ಬ್ರದರ್ಸ್​- ಕರುಣಾಕರರೆಡ್ಡಿಗೆ ಜನಾರ್ದನ ರೆಡ್ಡಿ ಸಾಥ್​- ಶಮನವಾಯ್ತು ಮುನಿಷು        ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರ- ಇಂದು ಹೈಕೋರ್ಟ್​​​ನಲ್ಲಿ ವಿಚಾರಣೆ- ಸಿಎಟಿ ವಿರುದ್ಧ ಕೋರ್ಟ್​​ ಮೆಟ್ಟಿಲೇರಿರೋ ಜಿಲ್ಲಾಧಿಕಾರಿ        ಸಿಜೆಐ ವಿರುದ್ಧ ಮಹಾಭಿಯೋಗ ಪ್ರಸ್ತಾಪ- ಉಪರಾಷ್ಟ್ರಪತಿಯಿಂದ ವಿಪಕ್ಷಗಳ ನಿರ್ಣಯ ತಿರಸ್ಕಾರ- ಕಾಂಗ್ರೆಸ್​ಗೆ ಮತ್ತೆ ಮುಖಭಂಗ       
Breaking News

ನಾಲ್ಕನೇ ಬಾರಿ ಅಪ್ಪನಾದ ಪವನ್

Wednesday, 11.10.2017, 3:01 AM       No Comments

ಟ, ರಾಜಕಾರಣಿ ಪವನ್ ಕಲ್ಯಾಣ್ ಸೋಮವಾರ ನಾಲ್ಕನೇ ಮಗುವಿನ ತಂದೆಯಾಗಿದ್ದಾರೆ. ಅವರ ಮೂರನೇ ಪತ್ನಿ ಅನ್ನಾ ಲೆಜ್ನೇವಾ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಈ ದಂಪತಿಗೆ ಈಗಾಗಲೇ ಪೊಲೆನಾ ಎಂಬ ಮಗಳಿದ್ದಾಳೆ. ಪುತ್ರನೊಂದಿಗೆ ಪವನ್ ಇರುವ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೆ, ಪವನ್ ಈ ಹಿಂದೆ ನಟಿ ನಂದಿನಿ ಅವರನ್ನು ವಿವಾಹವಾಗಿದ್ದರು. 1997ರಲ್ಲಿ ನಂದಿನಿ ಜತೆ ಸಪ್ತಪದಿ ತುಳಿದಿದ್ದ ಪವನ್, 2007ರಲ್ಲಿ ಪತ್ನಿಗೆ ವಿಚ್ಛೇದನ ನೀಡಿದರು. ಆನಂತರ ಅವರೊಂದಿಗೆ ‘ಜಾನಿ’ ಚಿತ್ರದಲ್ಲಿ ನಟಿಸಿದ್ದ ನಟಿ ರೇಣು ದೇಸಾಯಿ ಜತೆ ಪ್ರೇಮಾಂಕುರವಾಗಿ 2009ರಲ್ಲಿ ಅವರನ್ನು ಮದುವೆಯಾಗಿದ್ದರು. ರೇಣು ಜತೆಗಿನ ದಾಂಪತ್ಯದಿಂದಾಗಿ ಅಕಿರ ಮತ್ತು ಆದ್ಯಾ ಎಂಬಿಬ್ಬರು ಮಕ್ಕಳಿದ್ದಾರೆ. 2013ರಲ್ಲಿ ರೇಣು ಅವರಿಗೂ ಡೈವೋರ್ಸ್ ನೀಡಿದರು. ನಂತರ ‘ತೀನ್ ಮಾರ್’ ಚಿತ್ರದಲ್ಲಿ ಪುಟ್ಟ ಪಾತ್ರವೊಂದನ್ನು ಮಾಡಿದ್ದ ಅನ್ನಾ ಲೆಜ್ನೇವಾ ಜತೆ ಹೊಸ ಪ್ರೇಮ ಕಥೆ ಶುರು ಮಾಡಿ, 2013ರಲ್ಲಿ ಅವರನ್ನೂ ವಿವಾಹವಾದ ಪವನ್​ಗೆ ಇದೀಗ ಒಟ್ಟು ನಾಲ್ವರು ಮಕ್ಕಳು ಳಿದ್ದಾರೆ. ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಪವನ್ ನಟಿಸುತ್ತಿದ್ದಾರೆ. ಜತೆಗೆ ತಮ್ಮ ಜನಸೇನಾ ಪಕ್ಷದ ಕಾರ್ಯಗಳಲ್ಲೂ ಅವರು ಕಾರ್ಯನ್ಮೋಖರಾಗಿದ್ದಾರೆ. -ಏಜೆನ್ಸೀಸ್

Leave a Reply

Your email address will not be published. Required fields are marked *

Back To Top