Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :

ನೂರೆಂಟು ಸಮಸ್ಯೆ! ಮಾಜಿ ಗೃಹ ಸಚಿವರ ಕ್ಷೇತ್ರದಲ್ಲಿಲ್ಲ ಆಂಬ್ಯುಲೆನ್ಸ್ ಸೇವೆ

Wednesday, 04.10.2017, 9:38 AM       No Comments

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಪರಿಸ್ಥಿತಿ ನಿಭಾಯಿಸಲು ಒಂದೂ ಆಂಬ್ಯುಲೆನ್ಸ್ ಇಲ್ಲ. ಇದರಿಂದ ಆಸ್ಪತ್ರೆಯನ್ನೇ ಅವಲಂಬಿಸಿರುವ ಸುತ್ತಮುತ್ತಲ 100 ಗ್ರಾಮಗಳ ಜನ ಅಸಹಾಯಕರಾಗಿದ್ದಾರೆ. ಬೇಸರದ ಸಂಗತಿಯಂದರೆ ಇದು ಮಾಜಿ ಗೃಹ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್​ ಸ್ವಕ್ಷೇತ್ರದ ಸ್ಥಿತಿ.

ಹೊಳವನಹಳ್ಳಿಯಲ್ಲಿರುವ ಸರ್ಕಾರಿ ಆಸ್ಪತ್ರೆಯ ಸುತ್ತಲಿನ 15-20 ಕಿ. ಮೀ ವ್ಯಾಪ್ತಿಗೂ ಇರೋ ಹಳ್ಳಿಗಳಲ್ಲಿ ಆಂಬ್ಯುಲೆನ್ಸ್ ಇಲ್ಲದೆ ಜನ ಪರದಾಡುತ್ತಿದ್ದಾರೆ. ಪ್ರತಿ ವಾರ ಅವಘಡದಲ್ಲಿ ಜನ ಸಾಯುತ್ತಿದ್ದು, ತುರ್ತು ಸಂದರ್ಭಕ್ಕೆ ಬರಲು ಆಂಬ್ಯುಲೆನ್ಸ್ ಇಲ್ಲದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. 108ಕ್ಕೆ ಕರೆ ಮಾಡಿದರೂ ಅಕ್ಕಪಕ್ಕದ ತಾಲೂಕಿನಿಂದ ಆಂಬ್ಯುಲೆನ್ಸ್ ಬರಬೇಕಾದ ಸ್ಥಿತಿ ಇದೆ.

ಹಲವು ವರ್ಷಗಳಿಂದ ಈ ಸಮಸ್ಯೆ ಇದೆ. ಡಾ. ಜಿ. ಪರಮೇಶ್ವರ್‍ ಇದೇ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದವರು. ಆದರೂ ಪರಿಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡು ಬಂದಿಲ್ಲ. ಇದುವರೆಗೂ ಜನರ ಕಷ್ಟ ನಿವಾರಣೆ ಆಗದಿರುವುದನ್ನ ಗಮನಿಸಿದರೆ ಸದ್ಯದ ಶಾಸಕ ಸುಧಾಕರ್​ ಲಾಲ್​ ಅವರಿಗೂ ಕೂಡ ಪರಮೇಶ್ವರ್​ ಹಾಗೆಯೇ ಇಲ್ಲಿನ ತುರ್ತು ಪರಿಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ಇಲ್ವಾ ಅನ್ನೋ ಪ್ರಶ್ನೆ ಉದ್ಭವಿಸಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top