Monday, 11th December 2017  

Vijayavani

1. ಸಿಗರೇಟ್​ ಕೊಟ್ರೆ ಮಾತ್ರ ಕಾರ್​ ಹತ್ತಿನಿ – ಇಲ್ಲಾಅಂದ್ರೆ ಡೋರ್ ಹಾಕೋದಕ್ಕೂ ಬಿಡಲ್ಲ – ಪೊಲೀಸರ ಎದ್ರು ಬೆಳಗೆರೆ ಹೈ ಡ್ರಾಮ್​ 2. ನಿನ್ನೆ ಮೌಖಿಕ, ಇಂದು ಲಿಖಿತ ಹೇಳಿಕೆ – ಸಿಸಿಬಿಯಿಂದ ರವಿ 2ನೇ ಪತ್ನಿ ಯಶೋಮತಿ ವಿಚಾರಣೆ – ಅತ್ತ ಸುನೀಲ್​ರಿಂದ ರಕ್ಷಣೆಗೆ ಮನವಿ 3. ಕನ್ನಡ ಜನರ ಓಟು ಪಡೆದು ಶಾಸಕರ ಮರಾಠಿ ಪ್ರೇಮ – ಸಂಜಯ್ ಪಾಟೀಲ್​ರಿಂದ ಕನ್ನಡ ವಿರೋಧಿ ಹೇಳಿಕೆ – ಶಾಸಕರ ನಡೆಗೆ ಜನರು ಕಿಡಿ 4. ಲಿಂಗಾಯತ ಸಮಾವೇಶದಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ – ತಗ್ಲಾಕೊಂಡವನಿಗೆ ಬಿತ್ತು ಹಿಗ್ಗಾಮುಗ್ಗಾ ಗೂಸಾ – ಒದ್ದು ಪೊಲೀಸರಿಗೆ ಒಪ್ಪಿಸಿದ ಜನ 5. ಗೋಲ್ಡ್​ ಆಗ್ತಿದಾರೆ ಅಕ್ಷಯ್ ಕುಮಾರ್ – ಧೋತಿಯಲ್ಲಿ ಕಿಲಾಡಿ ಚೇರ್​ ಸ್ಟಂಟ್ – ಸೋಶೀಯಲ್ ಮೀಡಿಯಾದಲ್ಲಿ ದೃಶ್ಯ ವೈರಲ್
Breaking News :

ಪಂಜಾಬ್​ನಲ್ಲಿ ಶೇ.36.5, ಗೋವಾದಲ್ಲಿ ಶೇ.53 ಮತದಾನ

Saturday, 04.02.2017, 1:18 PM       No Comments

ಪಣಜಿ/ಚಂಡೀಗಢ: ಪಂಚರಾಜ್ಯ ಚುನಾವಣೆ ಆರಂಭಗೊಂಡಿದ್ದು, ಮೊದಲ ದಿನವಾದ ಶನಿವಾರ ಗೋವಾ ಮತ್ತು ಪಂಜಾಬ್​ನಲ್ಲಿ ಮೊದಲ ಹಂತದ ಮತದಾನ ಆರಂಭಗೊಂಡಿದೆ. ಪಂಜಾಬ್​ನ 117, ಗೋವಾದ 40 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಕ್ಷಣಾ ಇಲಾಖೆಯ ಸಿಬ್ಬಂದಿಗಾಗಿ ಆರಂಭಿಸಲಾಗಿರುವ ನೂತನ ಇ-ಮತ ಚಲಾವಣೆ ವ್ಯವಸ್ಥೆಯು ಎರಡೂ ರಾಜ್ಯಗಳಲ್ಲಿದೆ. ಉಭಯ ರಾಜ್ಯಗಳ ಪ್ರಮುಖ ಬೂತ್​ಗಳಿಗೆ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳನ್ನು ನೇಮಿಸಲಾಗಿದ್ದು, ರಾಜ್ಯ ಪೊಲೀಸರೊಂದಿಗೆ ಪ್ಯಾರಾಮಿಲಿಟರಿ ಪಡೆ ಬಿಗಿಭದ್ರತೆ ಆಯೋಜಿಸಿದೆ.

ಗೋವಾ: 40 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಗೋವಾದಲ್ಲಿ 11 ಲಕ್ಷಕ್ಕೂ ಅಧಿಕ ಮತದಾರರಿದ್ದಾರೆ. ಬಿಜೆಪಿ 37, ಕಾಂಗ್ರೆಸ್ 38 ಮತ್ತು ಆಪ್​ನ 40 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳಗ್ಗೆ 7ರಿಂದ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ಸಂಜೆ 5ರ ವರೆಗೆ ಮುಂದುವರಿಯಲಿದೆ. 1,642 ಬೂತ್​ಗಳಲ್ಲಿ ಮತದಾನ ಜರುಗುತ್ತಿದೆ.

ಪಂಜಾಬ್: 117 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪಂಜಾಬ್​ನಲ್ಲಿ 1.98 ಕೋಟಿ ಮತದಾರರಿದ್ದಾರೆ. ಒಟ್ಟು 22,615 ಕೇಂದ್ರಗಳಲ್ಲಿ ಮತದಾನ ನಡೆಯಲಿದೆ.

-ಏಜೆನ್ಸೀಸ್

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿ)

Leave a Reply

Your email address will not be published. Required fields are marked *

Back To Top