Wednesday, 18th October 2017  

Vijayavani

1. ರಾತ್ರಿ ಹಾಕಿದ ಟಾರು ಬೆಳಗ್ಗೆ ಕಿತ್ತುಬಂತು- ಸರ್ಕಾರದಿಂದ ಕಾಟಾಚಾರದ ಗುಂಡಿ ಮುಚ್ಚೋಕಾರ್ಯ- ಕೋಟ್ಯಾಂತರ ರೂಪಾಯಿ ನೀರಲ್ಲಿ ಹೋಮ 2. ಬರಿಗೈಯಲ್ಲಿ ಕಾರ್ಮಿಕನಿಂದ ಮಾನ್​ಹೋಲ್​ ಸ್ವಚ್ಛತೆ- ಸುರಕ್ಷಾ ಸಾಧನ ನೀಡಿದ ಮಹಾನಗರ ಪಾಲಿಕೆ- ಮಂಗಳೂರಿನಲ್ಲಿ ಅಮಾನವೀಯ ಘಟನೆ 3. ಪರಿಸರ ಉಳಿಸಿ, ಪಟಾಕಿ ತ್ಯಜಿಸಿ ಅಭಿಯಾನಕ್ಕೆ ಆಕ್ಷೇಪ- ವರ್ತಕರೊಂದಿಗೆ ಪರಿಸರ ಪ್ರೇಮಿಗಳ ವಾಗ್ವಾದ- ಮೈಸೂರಿನಲ್ಲಿ ಪಟಾಕಿ ಜಟಾಪಟಿ 4. ಅನೈತಿಕ ಸಂಬಂಧ ತಿಳಿದು ಗಂಡ ಬಿಟ್ಟ- ಪ್ರಿಯಕರನಿಗಾಗಿ ಮಗಳಿಗೆ ಕೊಟ್ಲು ಕಾಟ- ಗಂಗಾವತಿಯ ಹಿರೇಜಂತಕಲ್​ನಲ್ಲಿ ಕ್ರೂರಿ ತಾಯಿ 5. ನೋಟ್​ಬ್ಯಾನ್​ ವಿಚಾರದಲ್ಲಿ ಕಮಲ್​ ಉಲ್ಟಾ- ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಕ್ಷಮೆಯಾಚನೆ- ಇದು ಕಮಲ್​ ಹೊಸ ರಾಜಕೀಯ ಆಟ
Breaking News :

ಪಾರ್ವತಮ್ಮ ಆರೋಗ್ಯ ಸುಧಾರಣೆ

Saturday, 20.05.2017, 3:00 AM       No Comments

ಬೆಂಗಳೂರು: ಸ್ತನ ಕ್ಯಾನ್ಸರ್ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ನಿರ್ವಪಕಿ ಪಾರ್ವತಮ್ಮ ರಾಜ್​ಕುಮಾರ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

5 ದಿನಗಳಿಂದ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಬುಧವಾರ ರಾತ್ರಿ ಕಿಡ್ನಿ ವೈಫಲ್ಯಗೊಂಡು ಉಸಿರಾಟದ ತೊಂದರೆ ಉಂಟಾದ ಕಾರಣ ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಗುರುವಾರ ಮಧ್ಯಾಹ್ನ ಡಯಾಲಿಸಿಸ್ ಮಾಡಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ

ಕಂಡಿತ್ತು. ಶುಕ್ರವಾರ ಆರೋಗ್ಯ ಮತ್ತಷ್ಟು ಸುಧಾರಿಸಿದ್ದು, ಕೃತಕ ಉಸಿರಾಟದ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ.

2 ಬಾರಿ ಡಯಾಲಿಸಿಸ್: ‘ಕಿಡ್ನಿ ವೈಫಲ್ಯದ ನಂತರ 2 ಬಾರಿ ಡಯಾಲಿಸಿಸ್ ಮಾಡಲಾಗಿದೆ. ಪಾರ್ವತಮ್ಮ ಅವರ ಆರೋಗ್ಯದ ಸ್ಥಿತಿಯಲ್ಲಿ ಸುಧಾರಣೆ ಕಂಡಿದೆ. ಹೀಗಾಗಿ ಕೃತಕ ಉಸಿರಾಟದ ಪ್ರಮಾಣ ಕಡಿಮೆ ಮಾಡಲಾಗಿದೆ. ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ರಾಮಯ್ಯ ಆಸ್ಪತ್ರೆ ಮುಖ್ಯ ವೈದ್ಯ ಡಾ. ಸಂಜಯ್ ಕುಲಕರ್ಣಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗಣ್ಯರ ಭೇಟಿ: ನಿರ್ದೇಶಕರಾದ ಎಸ್.ನಾರಾಯಣ್, ಓಂ ಸಾಯಿಪ್ರಕಾಶ್, ಹಿರಿಯ ನಟ ಶ್ರೀನಾಥ್, ಸಾಹಿತಿ ಬರಗೂರು ರಾಮಚಂದ್ರಪ್ಪ, ಲಹರಿ ವೇಲು ಇನ್ನಿತರರು ಆಸ್ಪತ್ರೆಗೆ ಭೇಟಿ ನೀಡಿ ಪಾರ್ವತಮ್ಮ ಅವರ ಆರೋಗ್ಯ ವಿಚಾರಿಸಿದರು. ರಾಮಯ್ಯ ಆಸ್ಪತ್ರೆಯಲ್ಲಿ ಪೊಲೀಸ್ ಬಂದೋಬಸ್ತ್ ಮುಂದುವರಿಸಲಾಗಿದ್ದು, ಸದಾಶಿವನಗರದಲ್ಲಿರುವ ಮನೆ ಸಮೀಪದಲ್ಲೂ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ.

ರಾಮಯ್ಯ ಆಸ್ಪತ್ರೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಶನಿವಾರದ ವೇಳೆಗೆ ಆರೋಗ್ಯದಲ್ಲಿ ಇನ್ನಷ್ಟು ಸುಧಾರಣೆ ಕಾಣುವ ನಿರೀಕ್ಷೆಯಿದೆ. ನಮ್ಮನ್ನು ಗುರುತಿಸುವ ಮಟ್ಟಿಗೆ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

| ರಾಘವೇಂದ್ರ ರಾಜ್​ಕುಮಾರ್, ನಿರ್ವಪಕ, ಪಾರ್ವತಮ್ಮ ಪುತ್ರ

Leave a Reply

Your email address will not be published. Required fields are marked *

Back To Top