Sunday, 24th September 2017  

Vijayavani

1. 3ನೇ ಮ್ಯಾಚ್‌ನಲ್ಲೂ ಆಸೀಸ್‌ ಉಡೀಸ್‌- ರೋಹಿತ್,ರಹಾನೆ,ಪಾಂಡ್ಯ ಬೊಂಬಾಟ್‌ ಆಟ- ಭಾರತಕ್ಕೆ ಸರಣಿ ವಶ 2. ದೆಹಲಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ- ಜಾವ್ಡೇಕರ್ ನೇತೃತ್ವದಲ್ಲಿ ಮೀಟಿಂಗ್‌- ತಡವಾಗಿ ದೆಹಲಿ ವಿಮಾನ ಏರಿದ ಈಶ್ವರಪ್ಪ 3. ಸಿದ್ದಾರ್ಥ್​ ಮನೆ ಮೇಲೆ ಐಟಿ ದಾಳಿ ಪ್ರಕರಣ- 650 ಕೋಟಿ ಮೌಲ್ಯದ ಅಕ್ರಮ ಆದಾಯ ಪತ್ತೆ- ದಿಗ್ವಿಜಯ ನ್ಯೂಸ್​ಗೆ ಐಟಿ‌ ಮೂಲಗಳ ಮಾಹಿತಿ 4. ವಿಶ್ವಸಂಸ್ಥೆಯಲ್ಲಿ ಮತ್ತೆ ಬಾಲ ಬಿಚ್ಚಿದ ಪಾಕಿಸ್ತಾನ- ಮಡಿಲಲ್ಲಿ ಕೆಂಡ ಇಟ್ಕೊಂಡು ಭಾರತದತ್ತ ವಾಗ್ಬಾಣ- ಇಂಡಿಯಾ ಉಗ್ರವಾದದ ತಾಯಿ ಅಂತಾ ಪಾಕ್ ಉದ್ಧಟತನ 5. ಕೋಕ್ ಸ್ಟುಡಿಯೋದಿಂದ ಸಂಗೀತ ಸಂಜೆ- ಪೆಪೋನ್ ಗಾಯನಕ್ಕೆ ಮನಸೋತ ಯುವಜನ- ಹುಚ್ಚಿದ್ದು ಕುಣಿಸಿದ ಯುವದಸರಾ
Breaking News :

ಪ್ರಧಾನಿ ಜನ್ಮದಿನದಂದು ಸಚಿವರಿಂದ ಟಾಯ್ಲೆಟ್ ಕ್ಲೀನ್

Thursday, 14.09.2017, 3:00 AM       No Comments

 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ (ಸೆ.17) 67ನೇ ವಸಂತಕ್ಕೆ ಕಾಲಿರಿಸಲಿದ್ದು, ಅವರ ಜನ್ಮದಿನವನ್ನು ಸೇವಾ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದು ಸಂಪುಟ ಸಚಿವರಿಗೆ ಬೆಳಗ್ಗೆ 10ರಿಂದ ಮಧ್ಯಾಹ್ನದ ವರೆಗೆ ಸ್ವಚ್ಛ ಭಾರತ್ ಮಿಷನ್​ನಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಲಾಗಿದೆ. ಪ್ರಧಾನಿ ಸಮ್ಮುಖದಲ್ಲಿ ಕೇಂದ್ರ ಮಂತ್ರಿಗಳಿಗೆ ಈ ಸಂಬಂಧ ಈಚೆಗೆ ಪವರ್ ಪಾಯಿಂಟ್ ಪ್ರಸೆಂಟೇಷನ್ ನೀಡಲಾಗಿದ್ದು, ಪ್ರಚಾರಕ್ಕೆ ಆದ್ಯತೆ ನೀಡದೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಲಾಗಿದೆ. ಸೇವಾ ದಿವಸದ ಅಂಗವಾಗಿ ಕೇಂದ್ರ ಮಂತ್ರಿಗಳು, ಸಂಸದರಿಗೆ ಶೌಚಗೃಹ ಸೇರಿ ಸಾರ್ವಜನಿಕ ಸ್ಥಳ ಹಾಗೂ ಜನಪ್ರಿಯ ಪ್ರವಾಸಿ ಸ್ಥಳಗಳಾದ ಇಂಡಿಯಾ ಗೇಟ್, ಜುಹೂ ಬೀಚ್ ಹಾಗೂ ಇತರ 15 ಪ್ರವಾಸಿ ಸ್ಥಳಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಲಾಗಿದೆ. ಈ ಕಾರ್ಯದಲ್ಲಿ ಸಿನಿಮಾ ತಾರೆಗಳನ್ನು ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದ್ದು, ವಿವಿಧ ನಗರಗಳ ಕೊಳಚೆ ಪ್ರದೇಶಗಳನ್ನು ಸ್ವಚ್ಛಗೊಳಿಸುವಂತೆ ತಿಳಿಸಲಾಗಿದೆ.

Leave a Reply

Your email address will not be published. Required fields are marked *

Back To Top