Wednesday, 19th September 2018  

Vijayavani

ಆಸ್ಪತ್ರೆಯಿಂದ ಸಚಿವ ಡಿ.ಕೆ. ಶಿವಕುಮಾರ್​​ ಡಿಸ್ಚಾರ್ಜ್ - ಕೆಲವೇ ಕ್ಷಣಗಳಲ್ಲಿ ಸುದ್ದಿಗೋಷ್ಠಿ - ಎಟಿಎಂ ಆರೋಪಕ್ಕೆ ಉತ್ತರಿಸ್ತಾರಾ?        ಗಾಂಧಿ ಕುಟುಂಬಕ್ಕೆ ಎಟಿಎಂ ಅಂತೆ ಡಿಕೆಶಿ - ಎಐಸಿಸಿಗೆ 600 ಕೋಟಿ ಆಗಿದ್ಯಂತೆ ಡೆಪಾಸಿಟ್ - ಡಿಕೆಶಿ ವಿರುದ್ಧ ಆರೋಪಗಳ ಪಟ್ಟಿ        ಇಡಿ ಪ್ರಕರಣದಲ್ಲಿ ಡಿಕೆಶಿ ಬಂಧನ ಖಚಿತ - ಅರೆಸ್ಟ್‌ ಬೆನ್ನಲ್ಲೇ ಮೈತ್ರಿ ಸರ್ಕಾರ ಖತಂ - ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಭವಿಷ್ಯ        ಬೆಂಗ್ಳೂರು ರಸ್ತೆ ಗುಂಡಿಗೆ ಹೈಕೋರ್ಟ್ ಗರಂ - ಬೆಳಗ್ಗೆಯೊಳಗೆ ಗುಂಡಿ ಮುಚ್ಚಿಸಿ - ಕೆಲ್ಸ ಮಾಡದಿದ್ರೆ ಬಿಬಿಎಂಪಿ ಬಂದ್ ಅಂದ್ರು ಸಿಜೆ        ನವಾಜ್​​ ಷರೀಫ್​ಗೆ ರಿಲೀಫ್ - ಜೈಲಿನಿಂದ ಪಾಕ್ ಮಾಜಿ ಪ್ರಧಾನಿ, ಪುತ್ರಿ ಬಿಡುಗಡೆ - ಇಸ್ಲಾಮಾಬಾದ್ ಹೈಕೋರ್ಟ್ ಆದೇಶ        ದುಬೈನಲ್ಲಿ ಏಷ್ಯಾಕಪ್ ಹಣಾಹಣಿ - ಹೈವೋಲ್ಟೇಜ್ ಮ್ಯಾಚ್​ಗೆ ಬದ್ಧ ವೈರಿಗಳು ಸಜ್ಜು - ಟಾಗ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ       
Breaking News

ಬಜೆಟ್​ಗೆ ಅಸಮಾಧಾನದ ಸರದಿ ಈಗ ಸಿದ್ದರಾಮಯ್ಯರದ್ದು!

Thursday, 12.07.2018, 3:02 AM       No Comments

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡಿಸಿದ ಬಜೆಟ್ ಬಗ್ಗೆ ಕಾಂಗ್ರೆಸ್ ಅಸಮಾಧಾನ ಒಬ್ಬೊಬ್ಬರಿಂದ ಹೊರಬರುತ್ತಿದೆ. ಉತ್ತರ ಕರ್ನಾಟಕ ಭಾಗದ ಪ್ರಭಾವಿ ರಾಜಕಾರಣಿಯಾದಿಯಾಗಿ ಈಗ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯವರೆಗೆ ವಿಸ್ತರಿಸಿದೆ. ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆಯಾಗಬೇಕಾದ ವಿಚಾರವನ್ನು ಸಿದ್ದರಾಮಯ್ಯ ಪತ್ರ ಮುಖೇನ ಕುಮಾರಸ್ವಾಮಿ ಗಮನಕ್ಕೆ ತಂದಿದ್ದಲ್ಲದೆ, ಪತ್ರದ ಗುಟ್ಟನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಬಹಿರಂಗಪಡಿಸಿದರು. ‘ಸಮ್ಮಿಶ್ರ ಸರ್ಕಾರದಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಿಕೊಂಡಿದ್ದೇವೆ. ಬಜೆಟ್​ನಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಏಳು ಕೆಜಿಯಿಂದ ಐದು ಕೆಜಿಗೆ ಇಳಿಸಿದ್ದಾರೆ. ಮತ್ತೆ ಎರಡು ಕೆಜಿ ಹೆಚ್ಚಿಸಬೇಕು ಮತ್ತು ಪೆಟ್ರೋಲ್-ಡೀಸೆಲ್ ಮೇಲೆ ತೆರಿಗೆ ಹೆಚ್ಚಿಸಿರುವ ದರ ಕಡಿಮೆ ಮಾಡಬೇಕು ಎಂದು ಸಿಎಂಗೆ ಪತ್ರ ಬರೆದಿದ್ದೇನೆ’ ಎಂದರು. ‘ಕಚ್ಛಾ ತೈಲಬೆಲೆ ಇಳಿದಿದ್ದರೂ ಕೇಂದ್ರ ಇಂಧನ ದರ ಹೆಚ್ಚಿಸಿದ್ದು, ಇದರ ವಿರುದ್ಧ ನಮ್ಮ ಪಕ್ಷ ಹೋರಾಡುತ್ತಿದೆ. ಹೀಗಾಗಿ ರಾಜ್ಯದಲ್ಲಿ ತೆರಿಗೆ ಕಡಿಮೆ ಮಾಡಬೇಕೆಂದು ಒತ್ತಾಯಿಸಿದ್ದೇನೆ’ ಎಂದು ಹೇಳಿದರು.

Leave a Reply

Your email address will not be published. Required fields are marked *

Back To Top