Saturday, 23rd June 2018  

Vijayavani

ಬಜೆಟ್ ಪೂರ್ವಭಾವಿ ಸಭೆ ಆರಂಭ - ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆ ಸಭೆ -ಸಿಎಂ ನೇತೃತ್ವದಲ್ಲಿ ಮೀಟಿಂಗ್​​        ಟ್ರಾನ್ಸ್​​​ಫರ್​ಗೆ ನೋ ಬ್ರೋಕರ್ ಸಿಸ್ಟಂ - ಸಿಎಂ, ಡಿಸಿಎಂ ಹೆಸ್ರು ಬಳಸಿದ್ರೆ ದೂರವಿಡಿ - ಪೊಲೀಸ್​​​​ ಅಧಿಕಾರಿಗಳಿಗೆ ಸಿಎಂ ಆರ್ಡರ್​​​​        ಲಾರಿಗೆ ಸಿಲುಕಿ ಆತ್ಮಹತ್ಯೆಗೆ ಯುವಕನ ಯತ್ನ - ಚಕ್ರ ಹರಿದು ಎರಡೂ ಕಾಲು ಕಟ್​ - ಕೊಪ್ಪಳದ ಕುಕನೂರು ಪಟ್ಟಣದಲ್ಲಿ ಘಟನೆ        ಗಂಗಾಧರ ಚಡಚಣ ನಿಗೂಢ ಹತ್ಯ ಪ್ರಕರಣ - 6 ಮಂದಿ ಆರೋಪಿಗಳ ಸಿಐಡಿ ತನಿಖೆ ಪೂರ್ಣ        ಇಂದಿನಿಂದ ಮೆಟ್ರೋದ 6 ಬೋಗಿ ರೈಲು ಓಡಾಟ - ಬೈಯಪ್ಪನ ಹಳ್ಳಿಯಿಂದ ಮೈಸೂರು ರಸ್ತೆ ವರೆಗೆ ಸಂಚಾರ        ಹಜ್​ ಭವನಕ್ಕೆ ಟಿಪ್ಪು ಹೆಸರಿಡಲು ಪ್ರಸ್ತಾಪ- ವಕ್ಫ್​ ಸಚಿವ ಜಮೀರ್​ ವಿರುದ್ಧ ಆಕ್ರೋಶ- ಟಿಪ್ಪು ಹೆಸರಿಟ್ರೆ ಉಗ್ರ ಹೋರಾಟ ಎಂದ ಬಿಜೆಪಿ       
Breaking News

ಬನ್ನಿ ಬಜೆಟ್ ರೂ. 100 ಕೋಟಿ?

Thursday, 14.06.2018, 3:01 AM       No Comments

ಸ್ಟಾರ್ ನಟರುಗಳ ಸಿನಿಮಾಗಳು ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುವುದು ಸಾಮಾನ್ಯ. ಹಾಗಂತ ಇದು ಕೇವಲ ಬಾಲಿವುಡ್​ಗೆ ಸೀಮಿತವಾಗಿಲ್ಲ. ದಕ್ಷಿಣ ಭಾರತದಲ್ಲೂ ಈ ಸಂಸ್ಕೃತಿ ನಡೆದುಕೊಂಡು ಬಂದಿದೆ. ಟಾಲಿವುಡ್ ನಟ ಅಲ್ಲು ಅರ್ಜುನ್ ಕೂಡ ಇದೇ ವಿಚಾರಕ್ಕೆ ಈಗ ಸುದ್ದಿಯಾಗಿದ್ದಾರೆ. ಅವರ ಮುಂದಿನ ಚಿತ್ರ ಬರೋಬ್ಬರಿ 100 ಕೋಟಿ ರೂ. ಮೊತ್ತದಲ್ಲಿ ಸಿದ್ಧಗೊಳ್ಳಲಿದೆಯಂತೆ. ‘ನಾ ಪೇರು ಸೂರ್ಯ’ ಚಿತ್ರದ ಯಶಸ್ಸಿನ ನಂತರ ಅವರು ಯಾವ ಚಿತ್ರ ಒಪ್ಪಿಕೊಳ್ಳಲಿದ್ದಾರೆ ಎಂಬ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ. ಈಗ ಕೇಳಿ ಬರುತ್ತಿರುವ ಮಾತೇನೆಂದರೆ, ಖ್ಯಾತ ನಿರ್ದೇಶಕ ವಿಕ್ರಮ್ ಕುಮಾರ್ ಜತೆ ಅಲ್ಲು ಅರ್ಜುನ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ 100 ಕೋಟಿ ರೂ. ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿದೆ ಎಂಬ ವಿಚಾರ ಟಾಲಿವುಡ್ ಅಂಗಳದಲ್ಲಿ ದೊಡ್ಡ ಚರ್ಚೆ ಹುಟ್ಟುಹಾಕಿದೆ. ‘ಬನ್ನಿ’ ಸದ್ಯ ಪ್ಯಾರಿಸ್ ಪ್ರವಾಸದಲ್ಲಿದ್ದಾರೆ. ಅವರು ಭಾರತಕ್ಕೆ ವಾಪಸಾದ ನಂತರದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆಯಂತೆ. ಸದ್ಯ ಕಥೆ ಕೇಳಿರುವ ಬನ್ನಿ, ಅದನ್ನು ಇಷ್ಟ ಪಟ್ಟಿದ್ದಾರಂತೆ. ಇಷ್ಟು ದೊಡ್ಡ ಮೊತ್ತದಲ್ಲಿ ಸಿನಿಮಾ ಸಿದ್ಧಗೊಳ್ಳುತ್ತಿರುವುದರಿಂದ ಚಿತ್ರದ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. -ಏಜೆನ್ಸೀಸ್

Leave a Reply

Your email address will not be published. Required fields are marked *

Back To Top