Tuesday, 17th October 2017  

Vijayavani

1. ಅಕ್ರಮ ಕಸಾಯಿಖಾನೆ ಮಾಲೀಕರ ದರ್ಪ – ನೋಟಿಸ್​​​ ನೀಡಲು ಹೋದ ಪೊಲೀಸರ ಮೇಲೆಯೇ ಹಲ್ಲೆ – ಹೊಯ್ಸಳ ಸೇರಿ ನಾಲ್ಕು ವಾಹನಗಳು ಜಖಂ 2. ದಿಗ್ವಿಜಯ ಸಿಂಗ್​​ ಸಂಬಂಧಿ ಟೆಂಡರ್​ ಟೋಪಿ – ಗುತ್ತಿಗೆ​​​​​​ ನೆಪದಲ್ಲಿ ಕೋಟಿ ಕೋಟಿ ಪಂಗನಾಮ – ಭವಾನಿ ಸಿಂಗ್​​​ ವಿರುದ್ಧ ವಂಚನೆ ಆರೋಪ 3. ಉಸ್ತುವಾರಿ ಎದುರಲ್ಲೇ ಕಾಂಗ್ರೆಸ್​ ಗಲಾಟೆ – ಕೈಗೆ ಸಿಕ್ಕ ಕುರ್ಚಿಗಳು ಪೀಸ್ ಪೀಸ್​- ಚಿತ್ರದುರ್ಗದಲ್ಲಿ ಮನೆ ಮನೆ ಪ್ರಚಾರದ ವೇಳೆ ಕಿತ್ತಾಟ 4. ಜನರಕ್ಷಾ ಯಾತ್ರೆಗೆ ಅಂತಿಮ ತೆರೆ – ಸಾವಿರಾರು ಕಾರ್ಯಕರ್ತರೊಂದಿಗೆ ಚಾಣಕ್ಯ ಪಾದಯಾತ್ರೆ -ತಿರುವನಂತಪುರಂನಲ್ಲಿ ಬಿಜೆಪಿ ಬೃಹತ್​ Rally  5. ಸಾರಥಿಗೆ ಸಂದ ಬ್ರಿಟನ್​ ಗೌರವ – ಚಕ್ರವರ್ತಿಗೆ ಬಂದಿದೆ ಆಹ್ವಾನ – ಅ.19 ರಂದು ಲಂಡನ್​ನಲ್ಲಿ ಸನ್ಮಾನ
Breaking News :

ಬಿಎಸ್​ವೈ, ಎಚ್​ಡಿಕೆ ಸಿಎಂ ಆಗಲಾರರು

Friday, 14.07.2017, 3:00 AM       No Comments

ಲಿಂಗಸುಗೂರು (ರಾಯಚೂರು): ಮಿಷನ್ 150 ಎನ್ನುತ್ತಿದ್ದ ಯಡಿಯೂರಪ್ಪ ಭ್ರಮೆಯಲ್ಲಿದ್ದಾರೆ. ಸಿಎಂ ಆಗುವ ಭ್ರಮೆಯಲ್ಲಿ ಯಡಿಯೂರಪ್ಪ ಮತ್ತು ಕುಮಾರ ಸ್ವಾಮಿ ಇದ್ದಾರೆ. ಅವರಪ್ಪನಾಣೆಗೂ ಅವರು ಎಂದೂ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರು ಪಟ್ಟಣದ ಕಾಲೇಜು ಮೈದಾನದಲ್ಲಿ ವಿಭಾಗ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಗುರುವಾರ ಮಾತನಾಡಿದರು. ಬಿಜೆಪಿಯವರು ಹಿಂದುತ್ವವನ್ನು ಗುತ್ತಿಗೆ ಹಿಡಿದಂತೆ ವರ್ತಿಸುತ್ತಿದ್ದಾರೆ. ನಾವೆಲ್ಲ ಹಿಂದುಗಳಲ್ಲವೇ? ನಾವೂ ಶ್ರೀರಾಮ, ಆಂಜನೇಯ, ಈಶ್ವರ, ವಿಷ್ಣು ಪೂಜೆ ಮಾಡುತ್ತೇವೆ ಎಂದರು. ದೆಹಲಿಗೆ ಹೋಗಲು ಆಗಿಲ್ಲ. ಸದ್ಯದಲ್ಲೆ ಹೈಕಮಾಂಡ್ ಭೇಟಿ ಮಾಡಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು. ಇದು ಬಸವಣ್ಣನ ನಾಡು. ಜಾತ್ಯತೀತ ತತ್ವದ ಬೀಜ ಬಿತ್ತಿದ ನಾಡು ಇಲ್ಲಿ ಮತಾಂಧತೆ ನಡೆಸಲು ಸಾಧ್ಯವಿಲ್ಲ ಎಂದರು. ಕೇಂದ್ರ ಸರ್ಕಾರ ಮೂರು ವರ್ಷದ ಅವಧಿಯಲ್ಲಿ ಏನು ಹೇಳಿತ್ತು? ಏನು ಮಾಡಿದೆ? ನಮ್ಮ ಸರ್ಕಾರ ನಾಲ್ಕು ವರ್ಷದಲ್ಲಿ ಏನು ಹೇಳಿದ್ದೆವು? ಏನು ಮಾಡಿದ್ದೇವೆ ಎನ್ನುವ ಕುರಿತು ಯಾವುದೇ ವೇದಿಕೆಯಲ್ಲಿ ಚರ್ಚೆ ಮಾಡಲು ಸಿದ್ಧ. ಇದಕ್ಕೆ ನೀವು ಸಿದ್ಧರಿದ್ದೀರಾ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷದವರಿಗೆ ಸವಾಲು ಹಾಕಿದರು.

 ದಾರಿ ತಪ್ಪಿದ ಸಿಎಂ ಹೆಲಿಕಾಪ್ಟರ್

ಕೊಪ್ಪಳ ಜಿಲ್ಲೆ ಗಿಣಿಗೇರಾದಿಂದ ಲಿಂಗಸುಗೂರು ತಾಲೂಕಿನ ಹಲಕಾವಟಗಿ ಗ್ರಾಮಕ್ಕೆ ಬರಬೇಕಾಗಿದ್ದ ಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಿಂಗಸುಗೂರಿನ ಹೆಲಿಪ್ಯಾಡ್​ಗೆ ಬಂದಿಳಿಯಿತು. ಪೈಲಟ್ ಮಾಹಿತಿ ಕೊರತೆಯಿಂದ ಲಿಂಗಸುಗೂರು ಹೆಲಿಪ್ಯಾಡ್​ನಲ್ಲಿ ಹೆಲಿಕಾಪ್ಟರನ್ನು ಇಳಿಸಿದ್ದಾರೆ. ಹಲಕಾವಟಗಿ ಗ್ರಾಮಲ್ಲಿನ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿತ್ತು. ತೊಂಡಿಹಾಳ ಗ್ರಾಮದಲ್ಲಿ ನಂದವಾಡಗಿ ಏತ ನೀರಾವರಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿರುವಂತೆಯೇ ಜೋರಾಗಿ ಮಳೆ ಆರಂಭವಾಯಿತು.ಜನರು ಮಳೆಯಿಂದ ತಪ್ಪಿಸಿಕೊಳ್ಳಲು ಕುರ್ಚಿಗಳನ್ನು ತಲೆ ಮೇಲಿಟ್ಟುಕೊಂಡು ಭಾಷಣ ಕೇಳಿದರು.

Leave a Reply

Your email address will not be published. Required fields are marked *

Back To Top