Tuesday, 17th July 2018  

Vijayavani

ಕಾಂಗ್ರೆಸ್‌ ಕಿರುಕುಳದಿಂದಲೇ ಸಿಎಂ ಕಣ್ಣೀರು - ಕಾಂಗ್ರೆಸ್‌ ನೆಚ್ಚಿಕೊಂಡು ಹೋದ್ರೆ ಇದೇ ಸ್ಥಿತಿ - ಎಚ್​ಡಿಕೆ  ಕಣ್ಣೀರಿಗೆ ಜೇಟ್ಲಿ ಟಾಂಗ್‌        ವಾಣಿಜ್ಯ ಬ್ಯಾಂಕ್‌ನಲ್ಲಿನ ಚಾಲ್ತಿ ಸಾಲವೂ ಮನ್ನಾ - ಸಿಎಂ ನಿರ್ಧಾರ - ರೈತರಿಗೆ ಮತ್ತೊಂದು ಕೊಡುಗೆ ನೀಡಿದ ಮುಖ್ಯಮಂತ್ರಿ        ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಶಾಸಕರ ಪುತ್ರ - ಪ್ರಶ್ನಿಸಿದ ಪೇದೆಗೆ ಅವಾಚ್ಯ ಶಬ್ದಗಳಿಂದ ನಿಂದನೆ        ಬಂಗಾಳದಲ್ಲಿ ಮೋದಿ ರ್ಯಾಲಿ ವೇಳೆ ಅವಗಢ - ಪೆಂಡಾಲ್ ಕುಸಿದು 22 ಜನರಿಗೆ ಗಾಯ - ಆರೋಗ್ಯ ವಿಚಾರಿಸಿದ ಪ್ರಧಾನಿ ನಮೋ        ಕರಾವಳಿಯಲ್ಲಿ ಭಾರಿ ಮಳೆಯ ಅವಾಂತರ - ಕುಸಿದುಬಿತ್ತು ಭಟ್ಕಳದ ಬಸ್ ನಿಲ್ದಾಣ - ಹೊರ ಓಡಿದ ಪ್ರಯಾಣಿಕರು        ಕೆಆರ್​​ಎಸ್​​​ನಿಂದ ಭಾರಿ ಪ್ರಮಾಣದ ನೀರು - ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣ ಮುಳುಗಡೆ - ಧುಮ್ಮಿಕ್ಕುತ್ತಿದೆ ಹೊಗೇನಕಲ್ ಫಾಲ್ಸ್       
Breaking News

ಬಿಜೆಪಿ ಟಾರ್ಗೆಟ್ 2019!

Friday, 12.01.2018, 3:03 AM       No Comments

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆ ಹಾದಿ ಸುಗಮಗೊಳಿಸುವುದಕ್ಕಾಗಿ ಕರ್ನಾಟಕ ಮತ್ತು ಈಶಾನ್ಯ ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಕಾರ್ಯತಂತ್ರ ರೂಪಿಸಿದ್ದಾರೆ.

ದಕ್ಷಿಣ ಭಾರತದಲ್ಲಿ ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಕರ್ನಾಟಕ, ಈಶಾನ್ಯ ರಾಜ್ಯಗಳಲ್ಲಿ ಪಕ್ಷ ಭದ್ರಪಡಿಸಲು ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರ, ಮೇಘಾಲಯ ರಾಜ್ಯಗಳಲ್ಲಿ ವಿಶೇಷ ಆಸಕ್ತಿ ವಹಿಸಲು ಚುನಾವಣೆ ತಂಡಕ್ಕೆ ಮೋದಿ ಸೂಚಿಸಿದ್ದಾರೆನ್ನಲಾಗಿದೆ.

ಗುಜರಾತ್ ಚುನಾವಣೆಯಲ್ಲಿನ ತಪು್ಪಗಳನ್ನು ಸರಿಪಡಿಸಿಕೊಂಡು 6 ತಿಂಗಳೊಳಗೆ ಬರುವ ಪಂಚರಾಜ್ಯ ಚುನಾವಣೆ ಹಾಗೂ ಮುಂದಿನ ಲೋಕಸಭೆ ಚುನಾವಣೆ ಗೆಲುವಿಗಾಗಿ ಪ್ರಮುಖ ಮೂರು ಕಾರ್ಯಕ್ರಮವನ್ನು ಪಕ್ಷ ಹಮ್ಮಿಕೊಂಡಿದೆ. ವಿವೇಕಾನಂದ ಜಯಂತಿ ದಿನದಿಂದ ಸುಭಾಶ್ಚಂದ್ರ ಬೋಸ್ ದಿನಾಚರಣೆವರೆಗೆ ರಕ್ತ ದಾನ, ಬಳಿಕ ಮತಗಟ್ಟೆ ಸಶಕ್ತೀಕರಣ ಹಾಗೂ ಅಂಬೇಡ್ಕರ್ ಜಯಂತಿ ದಿನದಂದು ದಲಿತ ಸಂಪರ್ಕ ಅಭಿಯಾನಕ್ಕೆ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆದಿದೆ.

ಗುರುವಾರ ನಡೆದ ಸಭೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಗಳು, ಎಲ್ಲ ರಾಜ್ಯಗಳು ಚುನಾವಣೆ ಉಸ್ತುವಾರಿಗಳು ಭಾಗಿಯಾಗಿದ್ದರು. ಸುಮಾರು 4 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಎಲ್ಲ ರಾಜ್ಯಗಳಿಂದ ಮೋದಿ ಹಾಗೂ ಷಾ ವರದಿ ಪಡೆದುಕೊಂಡಿದ್ದಾರೆ.

ಮಿಲೇನಿಯಂ ವೋಟರ್ ಅಭಿಯಾನ

2014ರ ಲೋಕಸಭೆ ಚುನಾವಣೆಯನ್ನು ಯುವ ಮತದಾರರ ಹೆಚ್ಚಿನ ಆಸಕ್ತಿಯಿಂದಲೇ ಮೋದಿ ಗೆದ್ದಿದ್ದರು. ಈಗ 2019ರ ಲೋಕಸಭೆ ಚುನಾವಣೆಗೂ ಇದನ್ನೇ ಗುರಿಯನ್ನಾಗಿಸಿಕೊಳ್ಳಲು ಪಕ್ಷ ನಿರ್ಧರಿಸಿದೆ. ಹೀಗಾಗಿ ಮಿಲೇನಿಯಂ ವೋಟರ್ ಅಭಿಯಾನ ಆರಂಭಕ್ಕೆ ನಿರ್ಧರಿಸಲಾಗಿದೆ. ಇದೇ ಹೆಸರಲ್ಲಿ ಪಕ್ಷವು ಮೊಬೈಲ್ ಆಪ್ ಹೊರತರುತ್ತಿದ್ದು, ಹೊಸ ಮತದಾರರ ನೋಂದಣಿಗೆ ಇದು ಸೇತುವೆಯಾಗಿ ಕೆಲಸ ಮಾಡಲಿದೆ. ಈ ಮೂಲಕ ಹೊಸ ಮತದಾರರನ್ನು ಪಕ್ಷಕ್ಕೆ ಸೆಳೆಯುವುದು ಮೋದಿ-ಷಾ ತಂತ್ರವಾಗಿದೆ.

Leave a Reply

Your email address will not be published. Required fields are marked *

Back To Top